Site icon ಹರಿತಲೇಖನಿ

ಮಾತು ತಪ್ಪಿದ ಆರೋಪ; ನಾನು ಯಾರಿಗೂ ಟಿಕೆಟ್ ಕೊಡಿಸುವ ಭರವಸೆ ನೀಡಿರಲಿಲ್ಲವೆಂದ ಬೊಮ್ಮಾಯಿ

ಹಾವೇರಿ: ಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಯಾರಿಗೂ ಟಿಕೆಟ್ ಕೊಡಿಸುವ ಭರವಸೆ ನೀಡಿರಲಿಲ್ಲ. ನಾನು ಕಾರ್ಯಕರ್ತರಿಗೆ ಅನ್ಯಾಯ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


ನನ್ನ ಮಗನನ್ನು ನಿಲ್ಲಿಸಲು ಆಸಕ್ತಿ ಇರಲಿಲ್ಲ. ಕೊನೆಯ ಘಳಿಗೆವರಿಗೂ ಬೇಡ ಅಂತಾ ಹೇಳಿದ್ದೇನೆ. ಅಂತಿಮವಾಗಿ ಹೈಕಮಾಂಡ್ ಟಿಕೆಟ್ ನೀಡಿದೆ. ಗೆಲ್ಲುವ ದೃಷ್ಟಿಯಿಂದ ಟಿಕೆಟ್ ನೀಡಿದೆ. ತಿರ್ಮಾನ ಮಾಡಿದೆ. ಪಕ್ಷದ ಆದೇಶವನ್ನು ಪರಿಪಾಲನೆ ಮಾಡುವುದು ನನ್ನ ಕಾರ್ಯ. ಕೇಂದ್ರ ಗೃಹ ಸಚಿವ ಅಮಿಶ್ ಷಾ ಮಾತನಾಡಿ ಟಿಕೆಟ್ ಪೈನಲ್ ಮಾಡಿದ್ದಾರೆ ಎಂದು ಹೇಳಿದರು.


ಸಾಮಾನ್ಯ ಕಾರ್ಯಕರ್ತರಿಗೆ ಅನ್ಯಾಯ ಆಗಿದೆ ಎಂಬ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನನ್ನ ಕಾರ್ಯಕರ್ತರಿಗೆ ಅನ್ಯಾಯ ಮಾಡಿಲ್ಲ. ಅವರಿಗೆ ಕ್ಯಾಬಿನೆಟ್ ಸ್ಥಾನ ನೀಡಿದ್ದೇನೆ. ಹಲವಾರು ಸ್ಥಾನಮಾನ ಮಾಡಿದ್ದೇವೆ. ಶ್ರೀಕಾಂತ್ ದುಂಡಿಗೌಡರ ಜೊತೆ ಮಾತನಾಡುತ್ತೇನೆ. ಮನವೊಲಿಸಲು ಕಾರ್ಯ ಮಾಡುತ್ತೇವೆ ಎಂದು ಹೇಳಿದರು.


ಚನ್ನಪಟ್ಟಣ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಸಿ.ಪಿ ಯೋಗಿಶ್ವರ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇವತ್ತಿನ ಬೆಳವಣಿಗೆ ಗೊತ್ತಿಲ್ಲ. ನಿನ್ನೆ‌ ತಡರಾತ್ರಿ ಮನವೊಲಿಸಲು ಪ್ರಯತ್ನ ನಡೆದಿತ್ತು. ರಾಷ್ಟ್ರೀಯ ವರಿಷ್ಟರು ಮಾತುಕತೆ ಮಾಡಿ ಮನವೊಲಿಸಲು ಕಾರ್ಯ ಮಾಡುತ್ತಾರೆ. ಸರಿಯಾಗುತ್ತದೆ ಅನ್ನುವ ವಿಶ್ವಾಸ ಇದೆ.

ಸಿ.ಪಿ ಯೋಗಿಶ್ವರರಗೆ ಸ್ವರ್ಧೆ ಮಾಡುವ ಆಸೆ ಇದೆ. ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರ ಕ್ಷೇತ್ರ ಆಗಿದ್ದು, ಅವರಿಬ್ಬರೂ ಮಾತುಕತೆ ಮಾಡಿಕೊಂಡು ಹೊಂದಾಣಿಕೆ ಆಗಬೇಕಿತ್ತು. ತಡವಾಗಿದ್ದಕ್ಕೆ ಈ ನಿರ್ಧಾರಕ್ಕೆ ಬಂದಿರಬಹುದು. ನಮ್ಮ ಪಕ್ಷದ ಹೈಕಮಾಂಡ್ ಮಧ್ಯಸ್ಥಿಕೆ ವಹಿಸಿ ಸರಿಪಡಿಸುವ ಕಾರ್ಯ ಮಾಡುತ್ತದೆ.

ಸಿ.ಪಿ‌.ಯೋಗಿಶ್ವರ ಕಾಂಗ್ರೆಸ್ ಮುಖಂಡರ ಜೊತೆ ಸಂಪರ್ಕದಲ್ಲಿರುವ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಹೇಳಿದರು.

Exit mobile version