ಬೆಂಗಳೂರು: ನಿರ್ಮಾಣ ಹಂತದಲ್ಲಿದ್ದ ಕಟ್ಟಡಕ್ಕೆ ಲಿಫ್ಟ್ ಅಳವಡಿಸಲು ತೆರೆದಿದ್ದ ಗುಂಡಿಗೆ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಐದು ವರ್ಷದ ಸುಹಾಸ್ ಗೌಡ ಸಾವನ್ನಪ್ಪಿದ ಬಾಲಕ.
ಮಗುವಿನ ತಾಯಿ ನೀಡಿದ ದೂರಿನ ಮೇರೆಗೆ ಕಟ್ಟಡ ಮಾಲೀಕ ಹಾಗೂ ಉಸ್ತುವಾರಿವಹಿಸಿಕೊಂಡಿದ್ದ ಸುನಿಲ್ ಎಂಬಾತನ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಕನ್ನಮಂಗಲ ಗ್ರಾಮ ಪಂಚಾಯತ್ ಮುಂಭಾಗದ ಮಿಲ್ಕ್ ಡೈರಿ ಕಟ್ಟಡ ಕಾಮಗಾರಿ ನಡೆಯುತ್ತಿದ್ದು, ಕಟ್ಟಡಕ್ಕೆ ಲಿಫ್ಟ್ ಅಳವಡಿಸಲು 5 ಅಡಿ ಅಗಲದ ಐದು ಅಗಲದ ಗುಂಡಿ ತೋಡಲಾಗಿತ್ತು.
ಗುಂಡಿ ಸುತ್ತಮುತ್ತಲು ಸುರಕ್ಷಿತ ಕ್ರಮ ಅನುಸರಿಸುವಲ್ಲಿ ಮಾಲೀಕರು ನಿರ್ಲಕ್ಷ್ಯ ತೋರಿದ್ದರು.
ನಿನ್ನೆ ಬೆಳಗ್ಗೆ ಮೃತ ಬಾಲಕ ಹುಡುಗರೊಂದಿಗೆ ಆಟವಾಡುವಾಗ ಆಚಾನಕ್ಕಾಗಿ ಗುಂಡಿ ಬಿದ್ದಿದ್ದಾನೆ. ಐದು ಆಳದ ಗುಂಡಿಯಲ್ಲಿ ಮಳೆ ನೀರು ತುಂಬಿಕೊಂಡಿದ್ದರಿಂದ ನೀರಿನಲ್ಲಿ ಮುಳುಗಿದ್ದಾನೆ. ಇದನ್ನ ನೋಡಿದ ಜೊತೆಯಲ್ಲಿ ಆಟವಾಡುತ್ತಿದ್ದ ಹುಡುಗರು ಮಾಹಿತಿ ನೀಡಿದ ಮೇರೆಗೆ ಸ್ಥಳೀಯರ ಬಾಲಕನನ್ನ ರಕ್ಷಿಸಿ ಆಸ್ಪತ್ರೆ ಸೇರಿಸಿದರೂ ಅಷ್ಟೊತ್ತಿಗಾಗಲೇ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮಗುವಿನ ತಾಯಿ ನೀಡಿದ ದೂರಿನ ಮೇರೆಗೆ ಮಾಲೀಕ ಹಾಗೂ ಕಟ್ಟಡ ಕಾಮಗಾರಿ ವಹಿಸಿಕೊಂಡಿದ್ದ ಸುನಿಲ್ ಎಂಬುವರ ವಿರುದ್ಧ ನಿರ್ಲಕ್ಷ್ಯ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಬರುವಂತೆ ನೊಟೀಸ್ ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.