Site icon ಹರಿತಲೇಖನಿ

ಪ್ರಧಾನ ಮಂತ್ರಿ ಸೃಜನ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

Selection for hostel admission

Selection for hostel admission

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಕೇಂದ್ರ ಸರ್ಕಾರದ ಯೋಜನೆಯಾದ ಪ್ರಧಾನ ಮಂತ್ರಿಗಳ ಸೃಜನ ಯೋಜನೆ (ಪಿ.ಎಂ.ಇ.ಜಿ.ಪಿ)ಯಡಿ ನಿರುದ್ಯೋಗ ಯುವಕ-ಯುವತಿಯರಿಗೆ ಆರ್ಥಿಕ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

18 ವರ್ಷ ಮೇಲ್ಪಟ್ಟ ಪುರುಷರು, ಮಹಿಳೆಯರು /ಪ.ಜಾ, ಪ.ಪಂ, ಹಿಂದುಳಿದ ವರ್ಗ, ಅಲ್ಪ ಸಂಖ್ಯಾತರು, ಮಾಜಿ ಸೈನಿಕರು, ಅಂಗವಿಕಲರು ಅರ್ಜಿ ಸಲ್ಲಿಸಬಹುದು. ವಿವಿಧ ಹಣಕಾಸು ಸಂಸ್ಥೆಗಳು (ಬ್ಯಾಂಕುಗಳ) ಮೂಲಕ ಸಾಲ ಸೌಲಭ್ಯ ನೀಡಲಾಗುವುದು. ಯಾವುದೇ ಆದಾಯದ ಮಿತಿ ಇರುವುದಿಲ್ಲ.

ಅಸಕ್ತಿ ಹೊಂದಿರುವ ಉದ್ಯಮಶೀಲರು www.kviconline.gov.in ವೆಬ್ ಸೈಟ್ ನಲ್ಲಿ kvib ಏಜೆನ್ಸಿ ಲಾಗಿನ್ ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಕಛೇರಿ ದೂರವಾಣಿ ಸಂಖ್ಯೆ. 9480825612 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version