ದೊಡ್ಡಬಳ್ಳಾಪುರ: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ (Accident) ಸಂಭವಿಸಿ ಮಹಿಳೆಯೋರ್ವರು ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ತಾಲೂಕಿನ ದೇವನಹಳ್ಳಿ ರಸ್ತೆಯ ಕಡ್ಡಿಪುಡಿ ಕಾರ್ಖಾನೆ ಬಳಿ ಸಂಭವಿಸಿದೆ.
ಮೃತ ಮಹಿಳೆಯನ್ನು ರೈಲ್ವೇ ಸ್ಟೇಷನ್ ನಿವಾಸಿ 28 ವರ್ಷದ ಹೇಮ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಈಕೆಯ ಪತಿ ಹಾಗೂ ಮಗುವಿಗೆ ತೀವ್ರ ಪೆಟ್ಟಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೀತಂ ಯೂನಿವರ್ಸಿಟಿ ಬಳಿ ಚಿಲ್ಲರೆ ಅಂಗಡಿ ನಡೆಸುತ್ತಿದ್ದ ದಂಪತಿಗಳು, ಮಗುವಿನೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಕಾರು ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.
ಇದನ್ನೂ ಓದಿ; ಘಾಟಿ ಸುಬ್ರಹ್ಮಣ್ಯದಲ್ಲಿ ದಿಢೀರ್ ಕಾರ್ಯಾಚರಣೆ: ಅನಧಿಕೃತ ಅಂಗಡಿ ತೆರವು..!
ಕಾರಿನ ಚಾಲಕ ಬೆಂಗಳೂರು ಮೂಲದ ಕಿರಣ್ ಎನ್ನುವವರು ಫಾಕ್ಸೋಕಾನ್ ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸಿ ತೆರಳುವಾಗ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಅವಘಡ (Accident) ಸಂಭವಿಸಿದೆ ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ತಿಳಿಸಿದ್ದಾರೆ.
ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.