ಕನ್ನಡ ಹೃದಯಸ್ಪರ್ಶಿ ಭಾಷೆ: ಕನ್ನಡ ಜ್ಯೋತಿ ಹೊತ್ತ ಕನ್ನಡದ ರಥಯಾತ್ರೆಗೆ ಅದ್ಧೂರಿ ಸ್ವಾಗತ

ಶಿವಮೊಗ್ಗ; ಕನ್ನಡ ಭಾಷೆ ನಮ್ಮ ಭಾವನೆಯನ್ನು ವ್ಯಕ್ತಪಡಿಸುವ ಹೃದಯಸ್ಪರ್ಶಿ ಭಾಷೆಯಾಗಿದೆ ಎಂದು ಶಿವಮೊಗ್ಗ ತಹಶೀಲ್ದಾರ್ ಗಿರೀಶ್ ಅವರು ತಿಳಿಸಿದರು.

ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕ್ನನಡ ಸಾಹಿತ್ಯ ಪರಿಷತ್, ಕನ್ನಡ ಜಾನಪದ ಪರಿಷತ್ ,ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ,ಕನ್ನಡಪರ ರೈತ ಕಾರ್ಮಿಕ ಸಂಘಟನೆ , ಎನ್‌ಎಸ್‌ಎಸ್,ಎನ್‌ಸಿಸಿ, ಸ್ಕೌಟ್ ಅಂಡ್ ಗೈಡ್, ರೋಟರಿ, ಲಯನ್ಸ್ ಕ್ಲಬ್, ರೆಡ್ ಕ್ರಾಸ್,ಸ್ತ್ರಿಶಕ್ತಿ ಹಾಗೂ ಇತರೆ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿ ಹೊತ್ತ ಕನ್ನಡದ ರಥಯಾತ್ರೆ ಶಿವಮೊಗ್ಗ ನಗರಕ್ಕೆ ಆಗಮಿಸಿದ ವೇಳೆ ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್ ಅವರು ಪುಪ್ಪನಮನ ಸಲ್ಲಿಸುವ ಮೂಲಕ ಸ್ವಾಗತಿಸಿದರು.

ನಗರದ ಅಶೋಕ ವೃತ್ತ, ಶಿವಪ್ಪನಾಯಕ ವೃತ್ತ, ಗೋಪಿ ವೃತ್ತ, ಮಹಾವೀರ ವೃತ್ತದ ಮಾರ್ಗವಾಗಿ ಕುವೆಂಪು ರಂಗಮAದಿರದ ವರೆಗೆ ಶಾಲಾ ಕಾಲೇಜು ವಿದ್ಯಾರ್ಥಿಗಳು ವಿವಿಧ ಕಲಾ ಮೇಳದೊಂದಿಗೆ ಅದ್ದೂರಿಯಾಗಿ ರಥಯಾತ್ರೆ ನಡೆಸಲಾಯಿತು.

ಕುವೆಂಪು ರಂಗಮಂದಿರದಲ್ಲಿ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ಕನ್ನಡ ಭಾಷೆಯನ್ನು ಮಾತನಾಡಿದರೆ ಕೆಲವು ಶಾಲೆಗಳಲ್ಲಿ ದಂಡ ಹಾಕುತ್ತಾರೆ ಎನ್ನುವ ಸುದ್ದಿಗಳನ್ನು ನಾವು ಕೇಳಿದ್ದೇವೆ. ಕನ್ನಡ ನಾಡಿನಲ್ಲಿಯೇ ಈ ಪರಿಸ್ಥಿತಿ ಇದ್ದು, ಇದು ಅತ್ಯಂತ ವಿಷಾಧನೀಯ.ಈ ರೀತಿಯ ಘಟನೆಗಳು ನಡೆಯಬಾರದು. ಕನ್ನಡ ಭಾಷೆಯಲ್ಲಿ ನಮ್ಮ ಭಾವನೆತುಂಬಿರುತ್ತದೆ. ಅನ್ಯಭಾಷೆ ಕಲಿಕೆ ನಮ್ಮ ಜೀವನಕ್ಕೆ ಅಗತ್ಯ ಅದರೆ ನಮ್ಮ ಮಾತೃ ಭಾಷೆಯನ್ನು ನಾವು ಎಂದಿಗೂ ಬಿಡಬಾರದು ಶಾಲೆಗಳಲ್ಲಿ ಹಾಗೂ ನಮ್ಮ ಉದ್ಯೋಗದ ಸ್ಥಳಗಳಲ್ಲಿ ಕನ್ನಡಭಾಷೆಯನ್ನು ನಾವು ಹೆಚ್ಚು ಮಾತನಾಡಬೇಕು ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ಮಾತನಾಡಿ, ಮಂಡ್ಯ ಜಿಲ್ಲೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 20,21, ಮತ್ತು 22 ರಂದು ನಡೆಸಲಾಗುತ್ತಿದ್ದು ಅದರ ಅಂಗವಾಗಿ ಇಡೀ ರಾಜ್ಯಾದ್ಯಂತ ಕನ್ನಡ ಜ್ಯೋತಿ ಹೊತ್ತ ರಥ ಸಂಚಾರ ಮಾಡಿ ಕನ್ನಡಿಗರಲ್ಲಿ ಜಾಗೃತಿಯನ್ನು ಮೂಡಿಸುತ್ತಿದೆ. ಕನ್ನಡವನ್ನು ಕಟ್ಟುವ ಕೆಲಸಕ್ಕೆ ಎಲ್ಲರೂ ಜೊತೆಯಾಗಬೇಕು.

ವಿದ್ಯಾರ್ಥಿಗಳು ಕನ್ನಡ ಭಾಷೆ ಬಗ್ಗೆ ಅರಿವು ಪಡೆದುಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಅಧ್ಯಕ್ಷ ಚಂದ್ರಭೂಪಾಲ್, ಮಾಜಿ ಎಂಎಲ್ಸಿ ಆರ್ ಪ್ರಸನ್ನಕುಮಾರ್, ಹಾಗೂ ಕನ್ನಡ ಸಾಹಿತ್ಯ ಪರಿಷತ್ ನ ಸದಸ್ಯರು, ವಿವಿಧ ಕನ್ನಡಪರ ಸಂಘಟನೆ ಸದಸ್ಯರು ಶಾಲಾ, ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ರಾಜಕೀಯ

ಎತ್ತಿನ ಬಂಡಿಯಲ್ಲಿ ಮತ ಶಿಕಾರಿ

ಎತ್ತಿನ ಬಂಡಿಯಲ್ಲಿ ಮತ ಶಿಕಾರಿ

ರಾಮನಗರ: ಚನ್ನಪಟ್ಟಣ ಕ್ಷೇತ್ರದ ಮಾರ್ಚನಹಳ್ಳಿಯಲ್ಲಿ NDA ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಎತ್ತಿನ ಬಂಡಿ ಮೂಲಕ ಗ್ರಾಮಕ್ಕೆ ತೆರಳಿ ಮತಯಾಚನೆ ಮಾಡಿದರು. ರಾತ್ರಿ 9 ಗಂಟೆಯಾದ್ರೂ ಸ್ಥಳೀಯ ರೈತರು, ಯುವಕರ ಒತ್ತಾಸೆಯಂತೆ ಎತ್ತಿನಗಾಡಿ ಮೂಲಕ

[ccc_my_favorite_select_button post_id="95174"]
ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಗಡಿನಾಡ ಉತ್ಸವ; ಗ್ರಾಮದಲ್ಲಿ ಸಡಗರ, ಸಂಭ್ರಮ

ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಗಡಿನಾಡ ಉತ್ಸವ; ಗ್ರಾಮದಲ್ಲಿ ಸಡಗರ,

ಮಡಿಕೇರಿ: ಕೇರಳದ ಬಂದಡ್ಕದಲ್ಲಿ ನಡೆದ ಗಡಿನಾಡ ಅರೆಭಾಷೆ ಉತ್ಸವ ಊರಿಡೀ ಹಬ್ಬದ ವಾತಾವರಣ ಮೂಡಿಸಿತು. ಸಭಾ ಕಾರ್ಯಕ್ರಮಕ್ಕೂ ಮುಂಚಿತವಾಗಿ ನಡೆದ ಮೆರವಣಿಗೆಯಂತು ಇಡೀ ಕಾರ್ಯಕ್ರಮಕ್ಕೆ ಮುಕುಟವಿದ್ದಂತಿತ್ತು. ಬಂದಡ್ಕದ ಆರ್ಟ್ ಆಫ್ ಲಿವಿಂಗ್ ಜ್ಞಾನ ಮಂದಿರದಿಂದ

[ccc_my_favorite_select_button post_id="95102"]
Army dog: ಉಗ್ರರ ದಾಳಿಗೆ ಭಾರತೀಯ ಸೇನೆಯ ಶ್ವಾನ ಫ್ಯಾಂಟಮ್ ದುರ್ಮರಣ..!

Army dog: ಉಗ್ರರ ದಾಳಿಗೆ ಭಾರತೀಯ ಸೇನೆಯ ಶ್ವಾನ ಫ್ಯಾಂಟಮ್ ದುರ್ಮರಣ..!

ಅನ್ನೂರ್: ಜಮ್ಮು ಕಾಶ್ಮೀರದ ಅನ್ನೂರ್ ನಲ್ಲಿ ನಡೆದ ಭಯೋತ್ಪಾದಕರ ಗುಂಡಿನ ದಾಳಿಗೆ ನಾಲ್ಕು ವರ್ಷದ ಫ್ಯಾಂಟಮ್ ಎಂಬ ಆರ್ಮಿ ಶ್ವಾನ (Army dog) ಸಾವನ್ನಪ್ಪಿದೆ ಎಂದು ಸೇನೆಯ ಮೂಲಗಳು ತಿಳಿಸಿವೆ. ಭಯೋತ್ಪಾದಕರ ದಾಳಿಗಿರುವ ಹಿನ್ನಲೆ

[ccc_my_favorite_select_button post_id="95119"]
ರೊವಾಂಡಾ ದೇಶದಲ್ಲಿ ಬಂಡವಾಳ ಹೂಡಿಕೆಗೆ ಮುಕ್ತ ಅವಕಾಶ: ಸ್ಥಳೀಯ ಉದ್ಯಮಿಗಳಿಗೆ ಆಹ್ವಾನ| ಇಂಡಿಯನ್ ಕ್ರೀಡಾ ಶಾಲೆ ಸ್ಥಾಪನೆ: ಸಚಿವ ಸತೀಶ್ ಜಾರಕಿಹೊಳಿ

ರೊವಾಂಡಾ ದೇಶದಲ್ಲಿ ಬಂಡವಾಳ ಹೂಡಿಕೆಗೆ ಮುಕ್ತ ಅವಕಾಶ: ಸ್ಥಳೀಯ ಉದ್ಯಮಿಗಳಿಗೆ ಆಹ್ವಾನ| ಇಂಡಿಯನ್

ಬೆಳಗಾವಿ, (ಸೆ.9): ರೊವಾಂಡಾ ದೇಶದಲ್ಲಿ ಕೃಷಿ, ಆರೋಗ್ಯ, ಶಿಕ್ಷಣ, ಗಣಿಗಾರಿಕೆ, ಇಂಧನ ಹಾಗೂ ಮೂಲಸೌಕರ್ಯಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆಗೆ ವಿಫುಲ ಅವಕಾಶಗಳಿವೆ. ಕೈಗಾರಿಕೋದ್ಯಮಿಗಳು ಮತ್ತು ಬಂಡವಾಳ ಹೂಡಿಕೆದಾರರಿಗೆ ಅನುಕೂಲವಾಗುವಂತಹ ಉದ್ಯಮಸ್ನೇಹಿ ವಾತಾವರಣ ಹೊಂದಿದ್ದು, ಇಲ್ಲಿನ ಹೂಡಿಕೆದಾರರಿಗೆ ಮುಕ್ತ ಸ್ವಾಗತವಿದೆ ಎಂದು ಪೂರ್ವ

[ccc_my_favorite_select_button post_id="89581"]

ಕ್ರೀಡೆ

Doddaballapura: ರಾಜ್ಯಮಟ್ಟದ ಯೋಗ ಪಂದ್ಯಾವಳಿಯಲ್ಲಿ 14 ಮಂದಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

Doddaballapura: ರಾಜ್ಯಮಟ್ಟದ ಯೋಗ ಪಂದ್ಯಾವಳಿಯಲ್ಲಿ 14 ಮಂದಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ನಗರದ ದೇವರಾಜ ಅರಸು ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಯೋಗ ಪಂದ್ಯಾವಳಿಯ ಸಮಾರೋಪ ಸಮಾರಂಭ

[ccc_my_favorite_select_button post_id="94463"]
ಯೂಟ್ಯೂಬ್ ಬ್ಲಾಗರ್ ದಂಪತಿ ಶವವಾಗಿ ಪತ್ತೆ..!

ಯೂಟ್ಯೂಬ್ ಬ್ಲಾಗರ್ ದಂಪತಿ ಶವವಾಗಿ ಪತ್ತೆ..!

ತಿರುವನಂತಪುರಂ: ಯೂಟ್ಯೂಬ್‌ನಲ್ಲಿ ಸಾವಿರಾರು ಫಾಲೊವರ್ಸ್ ಹೊಂದಿದ್ದ ಬ್ಲಾಗರ್ ದಂಪತಿ ಕೇರಳದ ತಿರುವನಂತಪುರಂ ನಿಂದ 40 ಕಿಮೀ ಪರಸ್ಸಾಲದಲ್ಲಿರುವ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ಇಲ್ಲಿನ ಚೆರುವರಕೋಣಂ ಮೂಲದ 45 ವರ್ಷದ ಸೆಲ್ವರಾಜ್ ವೃತ್ತಿಯಲ್ಲಿ ಮೇಸ್ತ್ರಿ ಹಾಗೂ ಅವರ ಪತ್ನಿ 37 ವರ್ಷದ

[ccc_my_favorite_select_button post_id="95052"]
Doddaballapura: ಹಿಟ್ ಆಂಡ್ ರನ್‌ಗೆ ಬೈಕ್ ಸವಾರ ಬಲಿ..!

Doddaballapura: ಹಿಟ್ ಆಂಡ್ ರನ್‌ಗೆ ಬೈಕ್ ಸವಾರ ಬಲಿ..!

ದೊಡ್ಡಬಳ್ಳಾಪುರ: ಯಲಹಂಕ – ಹಿಂದೂಪುರ ನಡುವಿನ ರಾಜ್ಯ ಹೆದ್ದಾರಿಯ ಹಸನಘಟ್ಟ ಗೇಟ್ ಸಮೀಪ ಇಂದು (ಮಂಗಳವಾರ) ರಾತ್ರಿ 7 ಗಂಟೆ ಸುಮಾರಿನಲ್ಲಿ ನಡೆದ ಹಿಟ್ ಆಂಡ್ ರನ್ ಪ್ರಕರಣದಲ್ಲಿ ಬೈಕ್ ಸವಾರ ಕೋಲಾರ ಜಿಲ್ಲೆ

[ccc_my_favorite_select_button post_id="95156"]

ಆರೋಗ್ಯ

ಸಿನಿಮಾ

ಅಪ್ಪು ನಮ್ಮನ್ನಗಲಿ ಇಂದಿಗೆ 3 ವರ್ಷ!; ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಅಭಿಮಾನಿಗಳಿಂದ ರಕ್ತದಾನ ಶಿಬಿರ| Puneeth rajkumar

ಅಪ್ಪು ನಮ್ಮನ್ನಗಲಿ ಇಂದಿಗೆ 3 ವರ್ಷ!; ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಅಭಿಮಾನಿಗಳಿಂದ

ದೊಡ್ಡಬಳ್ಳಾಪುರ; ಕರ್ನಾಟಕ ರತ್ನ ಪುನೀತ್ ರಾಜ್‍ಕುಮಾರ್ (Puneeth rajkumar) ಮೂರನೇ ವರ್ಷದ ಪುಣ್ಯಸ್ಮರಣೆ ಇಂದು ನಡೆದಿದೆ. ಪುನೀತ್ ರಾಜ್‍ಕುಮಾರ್ (Puneeth rajkumar) ಅವರು ನಮ್ಮನ್ನಗಲಿ ಇಂದಿಗೆ ಭರ್ತಿ ಮೂರು ವರ್ಷಗಳಾಗಿವೆ. ಮೂರನೇ ವರ್ಷದ ಪುಣ್ಯಸ್ಮರಣೆ

[ccc_my_favorite_select_button post_id="95151"]
error: Content is protected !!