ಕಾಂಗ್ರೆಸ್‌ ಸರ್ಕಾರ ಹಾಗೂ ವಕ್ಫ್‌ ಬೋರ್ಡ್‌ನಿಂದ ಲ್ಯಾಂಡ್ ಜಿಹಾದ್ ಆರಂಭ; ಆರ್.ಅಶೋಕ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಹಾಗೂ ವಕ್ಫ್‌ ಬೋರ್ಡ್‌ನಿಂದ ಲ್ಯಾಂಡ್ ಜಿಹಾದ್ ಆರಂಭವಾಗಿದ್ದು, ಬಡ ರೈತರ ಜಮೀನನ್ನು ಕಬಳಿಸಲು ಎಲ್ಲ ಬಗೆಯ ಪ್ರಯತ್ನ ಮಾಡಲಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಕೂಡಲೇ ಸ್ಪಷ್ಟೀಕರಣ ನೀಡಬೇಕೆಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಬಂದ ನಂತರ ಇಡೀ ಕರ್ನಾಟಕ ಒಂದೇ ಸಮುದಾಯಕ್ಕೆ ಸೇರಿದ್ದು ಎಂಬಂತೆ ಆಡುತ್ತಿದೆ. ಕಾಂಗ್ರೆಸ್‌ನ ತುಷ್ಟೀಕರಣದಿಂದಾಗಿ ಹಿಂದೂಗಳ ಮೇಲೆ ಹಲ್ಲೆಯಾಗಿದೆ. ಗಣೇಶ ವಿಸರ್ಜನೆ ಮಾಡಲು ಅವಕಾಶವಿಲ್ಲ. ಹಿಂದೂಗಳು ಜೈ ಶ್ರೀರಾಮ್ ಎನ್ನುವಂತಿಲ್ಲ. ಹಿಂದೂಗಳಿಗೆ ಭದ್ರತೆ ಇಲ್ಲ. ಈಗ ವಿಜಯಪುರ ಜಿಲ್ಲೆಯ ಹೊನವಾಡ ಗ್ರಾಮದಲ್ಲಿ ಸುಮಾರು 12 ಸಾವಿರ ಹಾಗೂ ಇಡೀ ಜಿಲ್ಲೆಯಲ್ಲಿ ಒಟ್ಟಾರೆಯಾಗಿ 15 ಸಾವಿರ ಎಕರೆ ಭೂಮಿ ಕಬಳಿಸಲು ವಕ್ಫ್ ಬೋರ್ಡ್ ಯೋಜನೆ ರೂಪಿಸಿದೆ. ಇದಕ್ಕಾಗಿ ಕಂದಾಯ ಇಲಾಖೆಯಿಂದ 139 ರೈತರಿಗೆ ತಿಳಿವಳಿಕೆ ನೋಟಿಸ್ ನೀಡಲಾಗಿದೆ. ಇದು ಸ್ಪಷ್ಟವಾಗಿ ಸರ್ಕಾರದಿಂದಲೇ ನಡೆಯುತ್ತಿರುವ ಲ್ಯಾಂಡ್ ಜಿಹಾದ್ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಬಾಂಬ್ ಸ್ಪೋಟವಾಗಿದೆ. ಪಾಕಿಸ್ತಾನಕ್ಕೆ ಜೈಕಾರ ಹಾಕಲಾಗಿದೆ. ಲವ್ ಜಿಹಾದ್‌ನಿಂದ ಹಿಂದೂ ಯುವತಿಯರು ಸಾಯುತ್ತಿದ್ದಾರೆ. ಈಗ ಲ್ಯಾಂಡ್ ಜಿಹಾದ್ ಆರಂಭವಾಗಿದೆ. ಕಳೆದ ತಿಂಗಳು ಜಿಲ್ಲೆಗೆ ಬಂದಿದ್ದ ಸಚಿವ ಜಮೀರ್ ಅಹ್ಮದ್‌, ಗೆಜೆಟ್ ಆಗಿರುವ ಆಸ್ತಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲು ಮೌಖಿಕ ಆದೇಶ ಮಾಡಿದ್ದಾರೆ. ಈ ಮೂಲಕ ಸರ್ಕಾರದಿಂದಲೇ ಅಧಿಕೃತವಾಗಿ ಒತ್ತುವರಿ ನಡೆಯುತ್ತಿದೆ. ಈ ಹಿಂದೆ ಟಿಪ್ಪು ಸುಲ್ತಾನ್, ಔರಂಗಜೇಬನಂತಹ ಕೋಮು ಮತಾಂಧರು ಹಿಂದೂಗಳ ಭೂಮಿ, ಉದ್ಯೋಗ, ಬದುಕು ಕಿತ್ತುಕೊಂಡು ಮತಾಂತರ ಮಾಡಿದ್ದರು. ಈಗ ರೈತರ ಭೂಮಿ ಕಿತ್ತುಕೊಳ್ಳಲಾಗುತ್ತಿದೆ ಎಂದು ಅವರು ದೂರಿದ್ದಾರೆ.

ಆಧುನಿಕ ಟಿಪ್ಪು ಸುಲ್ತಾನ್

ಸಚಿವ ಜಮೀರ್ ಅಹ್ಮದ್‌, ಆಧುನಿಕ ಟಿಪ್ಪು ಸುಲ್ತಾನ್ ಆಗಲು ಹೊರಟಿದ್ದಾರೆ. ಈ ರೀತಿಯಾದರೂ ಭೂಮಿ ಕಸಿದು, ಸಿಎಂ‌ ಆಗುವ ಯೋಜನೆ ರೂಪಿಸಲಾಗಿದೆ. ಒಂದು ಕಡೆ ಸಿಎಂ ಸಿದ್ದರಾಮಯ್ಯ ಮುಡಾ ನಿವೇಶನ ಲೂಟಿ ಮಾಡುತ್ತಾರೆ. ಮತ್ತೊಂದು ಕಡೆ ಮಲ್ಲಿಕಾರ್ಜುನ ಖರ್ಗೆ ಕುಟುಂಬ ಸಿಎ ನಿವೇಶನ ಲೂಟಿ ಮಾಡುತ್ತದೆ.

ಈಗ ಜಮೀರ್ ಅಹಮದ್ ಕೂಡ ಈ ಪಟ್ಟಿಗೆ ಸೇರಿ ಭೂಮಿ ಕೊಳ್ಳೆ ಹೊಡೆದು ವಕ್ಫ್‌ಗೆ ಸೇರಿಸಲು ತಂತ್ರ ಮಾಡಿದ್ದಾರೆ. ವಕ್ಫ್ ಆಸ್ತಿ ಹೆಸರಿನಲ್ಲಿ ಲ್ಯಾಂಡ್ ಜಿಹಾದ್ ಮಾಡಲು ಹೊರಟಿರುವ ಕಾಂಗ್ರೆಸ್‌ ಸರ್ಕಾರದ ದೌರ್ಜನ್ಯ ವಿರೋಧಿಸಿ ವಿಜಯಪುರದ ರೈತರು ಈ ವರ್ಷ ದೀಪಾವಳಿ ಆಚರಿಸದಿರಲು ನಿರ್ಧರಿಸಿದ್ದಾರೆ. ಅನ್ನ ನೀಡುವ ರೈತರ ಭೂಮಿಗೆ ಕನ್ನ ಹಾಕಿ, ರೈತರ ಮನೆ ದೀಪ ಕಸಿದುಕೊಂಡ ಕಾಂಗ್ರೆಸ್ ಸರ್ಕಾರಕ್ಕೆ ಅನ್ನದಾತರ ಶಾಪ ತಟ್ಟದೇ ಇರದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಕೇಂದ್ರದಲ್ಲಿ ಚರ್ಚಿಸಲಿ

ಕೇಂದ್ರದ ಉದ್ದೇಶಿತ ವಕ್ಫ್ ಕಾಯ್ದೆ ತಿದ್ದುಪಡಿ ಪ್ರಸ್ತಾವಕ್ಕೆ ರಾಜ್ಯ ವಕ್ಫ್ ಬೋರ್ಡ್ ವಿರೋಧ ವ್ಯಕ್ತಪಡಿಸಿದೆ. ವಕ್ಫ್ ಬೋರ್ಡ್ ಆಡಳಿತ ಮಂಡಳಿ ಸಭೆಯಲ್ಲಿ ತಿದ್ದುಪಡಿ ಕಾಯ್ದೆ ವಿರೋಧಿಸಿ ನಿರ್ಣಯ ಕೈಗೊಳ್ಳಲಾಗಿದೆ. ಕೇಂದ್ರ ಸರ್ಕಾರ ಜಂಟಿ ಸಂಸದೀಯ ಸಮಿತಿ ರಚಿಸಿ, ಎಲ್ಲ ವಕ್ಫ್ ಬೋರ್ಡ್‌ಗಳಿಂದ ಮಾಹಿತಿ ಕೇಳಿದೆ. ಆದರೆ ಕರ್ನಾಟಕದ ವಕ್ಫ್ ಬೋರ್ಡ್ ಇದನ್ನು ವಿರೋಧಿಸಿದೆ. ನಾವು ಮಾಹಿತಿ ಕೊಡಲ್ಲ, ನಮ್ಮದು ಸ್ವಾಯತ್ತ ಸಂಸ್ಥೆ ಎಂದು ಸಚಿವ ಜಮೀರ್ ಅಹಮದ್ ಹೇಳಿದ್ದಾರೆ. ಹಳೆಯ ಎಲ್ಲ ನಿಯಮ, ಕಾನೂನುಗಳಿಗೆ ಮೋದಿ ಸರ್ಕಾರ ಬದಲಾವಣೆ ತರಲಿದೆ. ಇದಕ್ಕೂ ಮುನ್ನ ಆದಷ್ಟು ಕರ್ನಾಟಕದ ಭೂಮಿ‌ ಕಬಳಿಸಬೇಕು ಎಂಬುದು ಇವರ ಉದ್ದೇಶ ಎಂದು ಆರ್‌.ಅಶೋಕ ಆಕ್ರೋಶ ಹೊರಹಾಕಿದ್ದಾರೆ.

ಕಾಂಗ್ರೆಸ್ ಸರ್ಕಾರ ಭೂಮಿ ಕಬಳಿಕೆ ಮಾಡಿಕೊಡುವ ಬದಲು, ಕೇಂದ್ರ ಸರ್ಕಾರದ ಜಂಟಿ ಸಲಹಾ ಸಮಿತಿ ಜೊತೆ ಚರ್ಚೆ ಮಾಡಲಿ. ಅದು ಬಿಟ್ಟು ಸ್ವತಂತ್ರವಾಗಿ ಕ್ರಮ ಕೈಗೊಳ್ಳುವ ಅಧಿಕಾರ ಯಾರಿಗೂ ಇಲ್ಲ. ವಿಜಯಪುರ ಜಿಲ್ಲೆಯಲ್ಲಿ ದೇವಸ್ಥಾನ, ಗುಡಿಗಳು ಕೂಡ ಇದೆ. ಅವೆಲ್ಲಕ್ಕೂ ಎಷ್ಟು ನೋಟಿಸ್ ನೀಡಲಾಗಿದೆ ಎಂದು ಸರ್ಕಾರ ತಿಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಸಿಎಂ ಬಾಯಿ ಬಿಡಲಿ

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಈ ಕುರಿತು ಸ್ಪಷ್ಟನೆ ನೀಡಬೇಕು. ಇದು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇತ್ತೇ ಎಂದು ತಿಳಿಸಬೇಕು. ಈಗ ರೈತರು ಕಂಗಾಲಾಗಿದ್ದಾರೆ. ಹಿಂದೂಗಳಿಗೆ ಭಯ ಶುರುವಾಗಿದೆ. ಈ ಸಮಯದಲ್ಲಿ ಸರ್ಕಾರ ಜವಾಬ್ದಾರಿಯುತವಾಗಿ ನಡೆದುಕೊಂಡು ಜನರಿಗೆ ಸೂಕ್ತ ಮಾಹಿತಿ ಹಾಗೂ ಸ್ಪಷ್ಟೀಕರಣ ‌ನೀಡಬೇಕು ಎಂದು ಆರ್‌.ಅಶೋಕ ಒತ್ತಾಯಿಸಿದ್ದಾರೆ.

ರಾಜಕೀಯ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್ ಕಿಡಿ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್

"ನಮಸ್ತೇ ಸದಾ ವತ್ಸಲೇ ಮಾತೃಭೂಮೇ" ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ (D.K. Shivakumar) ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ... R. Ashoka

[ccc_my_favorite_select_button post_id="113127"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

17 ವರ್ಷದ ಬಾಲಕನ ಶವ ಆಘಾತಕಾರಿ ಸ್ಥಿತಿಯಲ್ಲಿ (shocking condition) ಪತ್ತೆಯಾಗಿರುವ ಘಟನೆ ನಗರದ ಕರೇನಹಳ್ಳಿಯ ಟೆಂಟ್ ಹಿಂಭಾಗದ ಗುಟ್ಟೆಯಲ್ಲಿ ಪತ್ತೆಯಾಗಿದೆ.

[ccc_my_favorite_select_button post_id="113099"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!