ದೊಡ್ಡಬಳ್ಳಾಪುರ: ಯಲಹಂಕ – ಹಿಂದೂಪುರ ನಡುವಿನ ರಾಜ್ಯ ಹೆದ್ದಾರಿಯ ಹಸನಘಟ್ಟ ಗೇಟ್ ಸಮೀಪ ಇಂದು (ಮಂಗಳವಾರ) ರಾತ್ರಿ 7 ಗಂಟೆ ಸುಮಾರಿನಲ್ಲಿ ನಡೆದ ಹಿಟ್ ಆಂಡ್ ರನ್ ಪ್ರಕರಣದಲ್ಲಿ ಬೈಕ್ ಸವಾರ ಕೋಲಾರ ಜಿಲ್ಲೆ ಮಾಲೂರು ಮೂಲದ ಉಪೇಂದ್ರ (30) ಎಂಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಮೃತ ಉಪೇಂದ್ರ ಮಲ್ಲಾತ್ತಹಳ್ಳಿಯಲ್ಲಿನ ಸಂಬಂಧಿಕರ ಮನೆಗೆ ಬಂದಿದ್ದು, ಊರಿಗೆ ವಾಪಸ್ ಹೋಗುವ ವೇಳೆ ಅಪಘಾತ ನಡೆದಿದೆ.
ಘಟನೆಯಲ್ಲಿ ಮತ್ತೋರ್ವ ಮಲ್ಲತ್ತಳ್ಳಿ ಗ್ರಾಮದ ಚಂದ್ರಶೇಖರ್ ಎನ್ನುವವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.