ಬೆಂಗಳೂರು: ವಾಹನಗಳಿಗೆ ಎಚ್ಎಸ್‌ಆರ್‌ಪಿ (HSRP) ನಂಬರ್ ಪ್ಲೇಟ್ ಅಳವಡಿಕೆಯನ್ನು ಕಡ್ಡಾಯಗೊಳಿಸ ಲಾಗಿದ್ದು, ಈ ಗಡುವನ್ನು ನ.20ರ ವರೆಗೆ ಹೈಕೋರ್ಟ್ ವಿಸ್ತರಿಸಿದೆ.
ಎಸ್‌ಆರ್‌ಪಿ (HSRP) ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ಕಟ್ಟಬೇಕಾಗುತ್ತದೆ ಎನ್ನುವ ಆತಂಕದ ಹಿನ್ನೆಲೆ ಎಸ್‌ಆರ್‌ಪಿ (HSRP) ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ನೀಡುವಂತೆ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲಾಯಿತು.
ಹಿರಿಯ ವಕೀಲರಾದ ದೇವದತ್ ಕಾಮತ್ ಅವರು ಹೈಕೋರ್ಟ್ ನ್ಯಾಯಪೀಠವನ್ನು ಮತ್ತಷ್ಟು ಕಾಲಾವಕಾಶ ನೀಡುವಂತೆ ಕೋರಿದ್ದರು. ಮನವಿ ಪರಿಗಣಿಸಿದಂತ ನ್ಯಾಯಾಲಯವು ವಿಚಾರಣೆ ಮುಂದೂಡಿಕೆ ಮಾಡಿದೆ.
ಈ ಹಿನ್ನೆಲೆ ಯಲ್ಲಿ ಎಸ್‌ಆರ್‌ಪಿ (HSRP) ನಂಬರ್ ಪ್ಲೇಟ್ ಅಳವಡಿಕೆಗೆ ನ.20ರವರೆಗೆ ಅವಧಿ ವಿಸ್ತರಿಸಿದೆ.