ದೊಡ್ಡಬಳ್ಳಾಪುರ; ಕರ್ನಾಟಕ ರತ್ನ ಪುನೀತ್ ರಾಜ್‍ಕುಮಾರ್ (Puneeth rajkumar) ಮೂರನೇ ವರ್ಷದ ಪುಣ್ಯಸ್ಮರಣೆ ಇಂದು ನಡೆದಿದೆ.
ಪುನೀತ್ ರಾಜ್‍ಕುಮಾರ್ (Puneeth rajkumar) ಅವರು ನಮ್ಮನ್ನಗಲಿ ಇಂದಿಗೆ ಭರ್ತಿ ಮೂರು ವರ್ಷಗಳಾಗಿವೆ. ಮೂರನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ ಅಪ್ಪು ಸಮಾಧಿಗೆ ಅವರು ಕುಟುಂಬ ಪೂಜೆ ಸಲ್ಲಿಸಿದ್ದಾರೆ.
ಕಂಠೀರವ ಸ್ಟುಡಿಯೊದಲ್ಲಿರುವ ಪುನೀತ್ ರಾಜ್ ಕುಮಾರ್ ಸಮಾಧಿಗೆ ಇಂದು ಸಾವಿರಾರು ಮಂದಿ ಅಭಿಮಾನಿಗಳೂ ಭೇಟಿ ನೀಡಿ, ನಮನ ಸಲ್ಲಿಸಿದ್ದಾರೆ.
ಅಂತೆಯೇ ದೊಡ್ಡಬಳ್ಳಾಪುರದ ರೈಲ್ವೆ ಸ್ಟೇಷನ್ ಬಳಿ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳು ರಕ್ತದಾನ ಶಿಬಿರ, ಅನ್ನ ಸಂತರ್ಪಣೆ ಆಯೋಜಿಸಿ ಸಾರ್ಥಕತೆ ಮೆರೆದಿದ್ದಾರೆ.
ಇದಕ್ಕೂ ಮುನ್ನ ಅಪ್ಪು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಅಭಿಮಾನಿಗಳು, ಪುಷ್ಪ ನಮನ ಸಲ್ಲಿಸಿದರು. ನಗರಸಭೆ ಉಪಾಧ್ಯಕ್ಷ ಮಲ್ಲೇಶ್ ಸೇರಿದಂತೆ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳು ಈ ವೇಳೆ ಇದ್ದರು.