ದೊಡ್ಡಬಳ್ಳಾಪುರ: ನಗರದ ಸರ್ಕಾರಿ ಸಾರ್ವಜನಿಕರ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಖಾಸಗಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಸಿ.ಎಸ್.ಆರ್ ಅನುದಾನದಡಿ ನಿರ್ಮಿಸಿರುವ ಹೊರರೋಗಿಗಳ ವಿಭಾಗ, ರಕ್ತನಿಧಿ ಕೇಂದ್ರ ಮತ್ತು ಡಯಾಲಿಸಿಸ್ ಘಟಕದ ಉದ್ಘಾಟನೆ ಅ.30ರಂದು ಬೆಳಿಗಗೆ 11 ಗಂಟೆಗೆ ನಡೆಯಲಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ನೂತನ ಕಟ್ಟಡವನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಉಪಸ್ಥಿತರಿದ್ದು, ಶಾಸಕ ಧೀರಜ್ ಮುನಿರಾಜು, ಎಜಾಕ್ಸ ಎಂಜಿನಿಯರಿಂಗ್ ಲಿ.,ನ ಅಧ್ಯಕ್ಷ ಕೆ.ವಿಜಯ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.