ದೊಡ್ಡಬಳ್ಳಾಪುರ: ಎತ್ತಿನಹೊಳೆ ಕಾಮಗಾರಿ ಲಾರಿ ಡಿಕ್ಕಿ (Doddaballapur Accident ) ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಚಿಕ್ಕಬೆಳವಂಗಲದ ಬಳಿ ಸಂಭವಿಸಿದೆ.
ತೀವ್ರವಾಗಿ ಗಾಯಗೊಂಡ ಚಾಲಕನನ್ನು ಸಂಕರಸನಹಳ್ಳಿ ಗ್ರಾಮದ 28 ವರ್ಷದ ಮಂಜುನಾಥ್ ಎಂದು ಗುರುತಿಸಲಾಗಿದೆ.
ಇಂದು ಬೆಳಗ್ಗೆ ಮಂಜುನಾಥ್ ಬೈಕ್‌ನಲ್ಲಿ ಕೆಲಸಕ್ಕೆ ತೆರಳುವ ವೇಳೆ ಸಾಸಲು ರಸ್ತೆಯಲ್ಲಿನ ಚಿಕ್ಕಬೆಳವಂಗಲ ಅರಳಿಕಟ್ಟೆ ಸಮೀಪ ಎದುರಾದ ಎತ್ತಿನಹೊಳೆ ಲಾರಿ ಡಿಕ್ಕಿ ಹೊಡೆದಿದ್ದು, ತಲೆಗೆ ತೀವ್ರವಾದ ಪೆಟ್ಟು ಬಿದ್ದ ಪರಿಣಾಮ, ದೊಡ್ಡಬಳ್ಳಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪ್ರತ್ಯೇಕದರ್ಶಿಗಳು ತಿಳಿಸಿದ್ದಾರೆ.
ದೊಡ್ಡಬೆಳವಂಗಲ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.