ನವದೆಹಲಿ: ಕುಡಿದು ಬಂದಿದ್ದ ಪತಿಯ ಮರ್ಮಾಂಗವನ್ನೇ ಪತ್ನಿಯೊಬ್ಬಳು ಕತ್ತರಿಸಿದ ಘಟನೆ (crime news) ಉತ್ತರ ದೆಹಲಿಯಲ್ಲಿ ನಡೆದಿದೆ.
ವ್ಯಕ್ತಿಯೊಬ್ಬ ಮಧ್ಯರಾತ್ರಿಯಲೊಲಿ ಕುಡಿದು ಬಂದಿದ್ದ ಈ ಹಿನ್ನೆಲೆಯಲ್ಲಿ ಪತಿ, ಪತ್ನಿ ನಡುವೆ ಜಗಳ ನಡೆದಿದೆ. ಅದಾದ ಬಳಿಕ ಕೋಪದಲ್ಲಿ ಮಹಿಳೆ ಪತಿಯ ಖಾಸಗಿ ಭಾಗಕ್ಕೆ ಹರಿತವಾದ ವಸ್ತುವಿನಿಂದ ಹಲ್ಲೆ ನಡೆಸಿದ್ದಾಳೆ.
ಘಟನೆ ಕೂಡಲೇ ಸಫರ್‌ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಆತ ಅಪಾಯದಿಂದ ಪಾರಾಗಿದ್ದಾನೆ.
ಘಟನೆಗೆ ಸಂಬಂಧಿಸಿ ರೂಪ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ.
ತನಿಖೆ ವೇಳೆ ಇಬ್ಬರು ಬಿಹಾರ ಮೂಲದವರಾಗಿದ್ದು, ಕಳೆದೆರಡು ತಿಂಗಳ ಹಿಂದೆ ಪತ್ನಿಯೊಂದಿಗೆ ದೆಹಲಿಗೆ ತೆರಳಿದ್ದರು. ಇಬ್ಬರಿಗೂ ಇದು ಮೂರನೇ ಮದುವೆ ಎಂದು ತಿಳಿದುಬಂದಿದೆ.
ಅದೇ ರೀತಿ ಆರೋಪಿ ಮಹಿಳೆ ಸದ್ಯ ತಲೆಮರೆಸಿಕೊಂಡಿದ್ದು, ಆಕೆಯನ್ನು ಬಂಧಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.