Site icon ಹರಿತಲೇಖನಿ

ನೇಣು ಬಿಗಿದ ಸ್ಥಿತಿಯಲ್ಲಿ ಖ್ಯಾತ ನಿರ್ದೇಶಕ ಗುರುಪ್ರಸಾದ್ ಶವ ಪತ್ತೆ..!

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಗುರುಪ್ರಸಾದ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರಿಗೆ 50 ವರ್ಷ ವಯಸ್ಸಾಗಿತ್ತು.

ಜಗ್ಗೇಶ್ ನಟನೆಯ ‘ಮಠ’, ‘ಎದ್ದೇಳು ಮಂಜುನಾಥ’ ಇನ್ನೂ ಕೆಲವು ಜನಪ್ರಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ ಗುರುಪ್ರಸಾದ್ ಕೆಲವು ಸಿನಿಮಾಗಳಲ್ಲಿ ನಟನೆಯನ್ನೂ ಸಹ ಮಾಡಿದ್ದರು.

ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಬಳಿಯ ಅಪಾರ್ಟ್​ಮೆಂಟ್​ನಲ್ಲಿ ಅವರ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರು ಸಾಲಗಾರರಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಗುರುಪ್ರಸಾದ್ ನಿರ್ದೇಶನ ಮಾಡಿದ್ದ ಇತ್ತೀಚಿನ ಸಿನಿಮಾ ‘ರಂಗನಾಯಕ’ ಹೀನಾಯ ಸೋಲು ಕಂಡಿತ್ತು. ‘ರಂಗನಾಯಕ’ ಸಿನಿಮಾದ ಸೋಲುಂಡ ಬಳಿಕ ಗುರುಪ್ರಸಾದ್ ಸಾಲಗಳಿಗೆ ಸಿಲುಕಿದ್ದರು ಎನ್ನಲಾಗಿದೆ. ಮಾತ್ರವಲ್ಲದೆ ಕೆಲ ತಿಂಗಳ ಹಿಂದೆ ಗುರುಪ್ರಸಾದ್ ಎರಡನೇ ಮದುವೆ ಸಹ ಆಗಿದ್ದರು ಎನ್ನಲಾಗುತ್ತಿದೆ. ಇದೀಗ ಏಕಾ-ಏಕಿ ನೇಣಿಗೆ ಶರಣಾಗಿದ್ದಾರೆ.

ಮನೆಯಿಂದ ಕೆಟ್ಟ ವಾಸನೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ನೋಡಿದಾಗ ಗುರುಪ್ರಸಾದ್ ಶವ ಫ್ಯಾನಿಗೆ ನೇತಾಡುತ್ತಿರುವುದು ಕಂಡಿದೆ. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ದೌಡಾಯಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೊಲೀಸರು ಗುರುಪ್ರಸಾದ್ ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಿದ್ದಾರೆ ಎಂದು ತಿಳಿದುಬಂದಿದೆ.

Exit mobile version