Site icon ಹರಿತಲೇಖನಿ

Cctv ಮತ್ತು ಸ್ಮೋಕ್ ಡಿಟೆಕ್ಟರ್ ಅಳವಡಿಕೆ ತರಬೇತಿ

Channel Gowda
Hukukudi trust

ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ 13 ದಿನಗಳ ಸಿ.ಸಿ.ಟಿ.ವಿ (Cctv) ಮತ್ತು ಸ್ಮೋಕ್ ಡಿಟೆಕ್ಟರ್ ಅಳವಡಿಕೆ ತರಬೇತಿ ಕಾರ್ಯಕ್ರಮವನ್ನು ನವೆಂಬರ್ 19 ರಿಂದ ಡಿಸೆಂಬರ್ 02 ವರೆಗೂ ಹಮ್ಮಿಕೊಳ್ಳಲಾಗಿದೆ.

Aravind, BLN Swamy, Lingapura

ಆಸಕ್ತ ಗ್ರಾಮೀಣ ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವಯೋಮಿತಿ: 18 ರಿಂದ 45 ವರ್ಷದೊಳಗಿರಬೇಕು. ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಪ್ರದೇಶದ ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.

Aravind, BLN Swamy, Lingapura

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ 8105526792, 9241482541 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version