Site icon ಹರಿತಲೇಖನಿ

Doddaballapura: ಜಿಜಿಎಂ ಶಾಲೆಯ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ..!

Channel Gowda
Hukukudi trust

ಬೆಂ.ಗ್ರಾ.ಜಿಲ್ಲೆ; ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ದೊಡ್ಡಬಳ್ಳಾಪುರದ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ (government school student achievement).

Aravind, BLN Swamy, Lingapura

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ದೇವನಹಳ್ಳಿಯ ಕ್ರೀಡಾಂಗಣದಲ್ಲಿ, ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಬಾಲಕ/ಬಾಲಕಿಯರ ಕ್ರೀಡಾಕೂಟ ನಡೆಯಿತು.

ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ದೊಡ್ಡಬಳ್ಳಾಪುರ ನಗರದ ಜಿಜಿಎಂ ಶಾಲೆಯ (ಸರ್ಕಾರಿ ಮಾಧ್ಯಮಿಕ ಪಾಠಶಾಲೆ) ವಿದ್ಯಾರ್ಥಿನಿ ಅಮೃತ ರವಿ ಅಪ್ಪಣ್ಣನವರ್ ಅವರು 14ರಿಂದ 17 ವರ್ಷ ವಿಭಾಗದ 600ಮೀ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಶಿವಮೊಗ್ಗದಲ್ಲಿ ನಡೆಯುವ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Aravind, BLN Swamy, Lingapura

ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಶಾಲೆ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ಕೀರ್ತಿ ಸಾರಿದ ವಿದ್ಯಾರ್ಥಿನಿ ಅಮೃತ ರವಿ ಅಪ್ಪಣ್ಣನವರ್ ಅವರನ್ನು ಮುಖ್ಯಶಿಕ್ಷಕಿ ಸೌಭಾಗ್ಯ, ದೈಹಿಕ ಶಿಕ್ಷಕ ಮುಖೇಶ್ ಬಾಬು ಅಭಿನಂದನೆ ಸಲ್ಲಿಸಿದ್ದಾರೆ.

Exit mobile version