ಬೆಂಗಳೂರು: ತೀವ್ರ ಬೆನ್ನು ನೋವಿನ ಕಾರಣ ಬಳಲುತ್ತಿರುವ ನಟ ದರ್ಶನ್ ಅವರಿಗೆ ಚಿಕಿತ್ಸೆ ಮುಂದುವರಿದಿದ್ದು, ಇದರ ಬೆನ್ನಲ್ಲೇ ಬುಧವಾರ ದರ್ಶನ್ ಪರ ವಕೀಲರು ಒಂದು ವಾರದ ವೈದ್ಯಕೀಯ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಿದ್ದಾರೆ.
ಮಹಿಳೆಯರಿಗೆ ಅಶ್ಲೀಲ ಸಂದೇಶ ಕಳಿಸಿದ ವ್ಯಕ್ತಿಯೋರ್ವನ ಹತ್ಯೆ ಆರೋಪ ಪ್ರಕರಣದ ಹಿನ್ನೆಲೆ ನ್ಯಾಯಾಂಗ ಬಂಧನದಲ್ಲಿದ್ದ ದರ್ಶನ್‌ಗೆ ವೈದ್ಯಕೀಯ ವಿಚಾರಕ್ಕೆ ಸಂಬಂಧಿಸಿದಂತೆ 6 ವಾರ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
ಇದೀಗ ಬೆನ್ನು ನೋವಿಗಾಗಿ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಲ್ಲಿ ನಟ ಚಿಕಿತ್ಸೆ ಪಡೆಯುತ್ತಿದ್ದಾರೆ. ಜತೆಗೆ ಒಂದು ವಾರದಲ್ಲಿ ದರ್ಶನ್‌ಗೆ ನೀಡಲಾಗುವ ಚಿಕಿತ್ಸೆಯ ವರದಿಯನ್ನು ದರ್ಶನ್ ಪರ ವಕೀಲರು ಹೈಕೋರ್ಟ್‌ಗೆ ಸಲ್ಲಿಸಿದ್ದಾರೆಂದು ವರದಿ ತಿಳಿಸಿದೆ.
ಇನ್ನೂ ಬಿಜಿಎಸ್ ವೈದ್ಯರು ಆಪರೇಷನ್‌ಗೆ ಸಲಹೆ ನೀಡಿದ್ದರೂ ಅದಕ್ಕೆ ದರ್ಶನ್ ನಿರಾಕರಿಸಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದೆ ಫ್ಯಾಕ್ಟರ್ ಆಗಿರುವುದು ಒಂದು ಸಮಸ್ಯೆ ಇದೆ. ಆಪರೇಷನ್ ಮಾಡಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ. ಆದರೆ ದರ್ಶನ್ ಬೇಡ ಎಂದಿದ್ದು, ಕನ್ಸರ್ವೇಟಿವ್ ಚಿಕಿತ್ಸೆ ಶುರು ಮಾಡಲಾಗಿದೆ.
10 ರಿಂದ 15 ದಿನಗಳ ಕಾಲ ಕನರ್ವೇಟಿವ್ ಚಿಕಿತ್ಸೆ ನೀಡಲಾಗುತ್ತದೆ. ಫಿಜಿಯೋಥೆರಪಿ, ವ್ಯಾಯಾಮ, ಔಷಧಿ ಮೂಲಕ ಗುಣಮುಖ ಮಾಡುವ ಪ್ರಯತ್ನ ನಡೆಯುತ್ತದೆ. ಕನ್ಸರ್ವೇಟಿವ್ ಚಿಕಿತ್ಸೆಯಲ್ಲಿ ಗುಣಮುಖ ಆಗದಿದ್ದರೆ ಆಪರೇಷನ್ ಮಾಡಲು ನಿರ್ಧರಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.