ರಾಜ್ಯ ಕಾಂಗ್ರೆಸ್ ಸರ್ಕಾರ ಪೂರ್ಣಾವಧಿ ಇರಲ್ಲ: ಹೆಚ್.ಡಿ.ದೇವೇಗೌಡ

ಚನ್ನಪಟ್ಟಣ: ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಪೂರ್ಣಾವಧಿ ಪೂರ್ಣಗೊಳಿಸುವುದಿಲ್ಲ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರು ಭವಿಷ್ಯ ನುಡಿದಿದ್ದಾರೆ.

ಕ್ಷೇತ್ರದ ಎಸ್.ಎಂ.ಹಳ್ಳಿಯಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರ ಪ್ರಚಾರ ನಡೆಸಿದ ಮಾಜಿ ಪ್ರಧಾನಿಗಳು, ನಿಖಿಲ್ ಕುಮಾರಸ್ವಾಮಿ ಅವರನ್ನು ಬೆಂಬಲಿಸುವ ಮೂಲಕ ಪ್ರಧಾನಿ ಮೋದಿ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರನ್ನು ಬಲಪಡಿಸಿ’ ಎಂದು ಮತದಾರರಲ್ಲಿ ಮನವಿ ಮಾಡಿದ್ದಾರೆ.

ಕಾಂಗ್ರೆಸ್ ನ ನಡತೆ ಮತ್ತು ಸಂಸ್ಕೃತಿಯನ್ನು ಕಟುವಾಗಿ ಟೀಕಿಸಿದ ಅವರು; ಜನರನ್ನು ಈ ಸರ್ಕಾರ ಸುಲಿಗೆ ಮಾಡುತ್ತಿದೆ. ಎಲ್ಲಾ ರೀತಿಯಲ್ಲಿಯೂ ಜನತೆಯನ್ನು ಶೋಷಣೆ ಮಾಡುತ್ತಿದೆ. ಇಂಥ ಸರ್ಕಾರ ಇರಬಾರದು. ಇದ್ದರೆ ಜನರಿಗೆ ಒಳ್ಳೆಯದು ಆಗುವುದಿಲ್ಲ ಎಂದು ಅವರು ಗುಡುಗಿದರು.

ಮೇಕೆದಾಟು ಮಾಡಿಯೇ ತೀರುತ್ತೇವೆ

ಕಾಂಗ್ರೆಸ್ ಪಕ್ಷದಿಂದ ಮೇಕೆದಾಟು ಯೋಜನೆ ಕಾರ್ಯಗತ ಮಾಡಲು ಸಾಧ್ಯವಿಲ್ಲ. ನಿಖಿಲ್ ಕುಮಾರಸ್ವಾಮಿ ಅವರು ಗೆದ್ದರೆ ರಾಜ್ಯಸಭೆ ಮತ್ತು ಲೋಕಸಭೆ ಎರಡರಲ್ಲೂ ಹೋರಾಟ ನಡೆಸಿ ಮೇಕೆದಾಟು ಯೋಜನೆ ಜಾರಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ದೇವೇಗೌಡರು ಭರವಸೆ ನೀಡಿದರು.

ಐ.ಎನ್.ಡಿ.ಐ.ಎ. ಮೈತ್ರಿಕೂಟವನ್ನು ಟೀಕಿಸಿದ ದೇವೇಗೌಡರು, “ಅವರ ಮೈತ್ರಿಕೂಟದಲ್ಲಿ ಪ್ರಧಾನಿಯಾಗಬಲ್ಲ ಯಾವುದೇ ನಾಯಕ ಇದ್ದಾರೆಯೇ? ಸ್ಟಾಲಿನ್ ಅಥವಾ ಮಮತಾ ಬ್ಯಾನರ್ಜಿ ಪ್ರಧಾನಿಯಾಗಬಹುದೇ? ಎಂದು ಟಾಂಗ್ ನೀಡಿದರು.

ಅಲ್ಲದೆ, ಐದು ಗ್ಯಾರಂಟಿಳನ್ನು ಪ್ರಶ್ನಿಸಿದ ಮಾಜಿ ಪ್ರಧಾನಿಗಳು, ಮಾಡುವ ಕೆಲಸವನ್ನು ಅಚ್ಚುಕಟ್ಟಿನಿಂದ ಮಾಡಬೇಕು. ಜನರ ನಿರೀಕ್ಷೆ ತಲುಪುವಲ್ಲಿ ಇವು ವಿಫಲವಾಗಿವೆ. ಇವುಗಳನ್ನು ಬಹಳ ಕಾಲ ನಿಭಾಯಿಸಲು ಸರಕಾರದಿಂದ ಆಗುವುದಿಲ್ಲ ಎಂದರು.

ಅಗ್ಗದ ಭರವಸೆಗಳನ್ನು ಕೊಟ್ಟು ಜನರ ಭಾವನೆಗಳ ಜತೆ ಚೆಲ್ಲಾಟ ಆಡುವುದು ಸರಿಯಲ್ಲ. ಆದರೆ, ಸಾಮಾಜಿಕವಾಗಿ, ಆರ್ಥಿಕವಾಗಿ ದುರ್ಬಲ ಜನರನ್ನು ಬಲಪಡಿಸಬೇಕು. ನಾನು ಕಾಡುಗೊಲ್ಲ ಮತ್ತು ಬೆಸ್ತ ಸಮುದಾಯಗಳನ್ನು ಎಸ್ಟಿ ಪ್ರವರ್ಗಕ್ಕೆ ಸೇರಿಸುವ ಖಚಿತ ಪ್ರಯತ್ನ ಮಾಡುತ್ತೇನೆ. ಈಗಾಗಲೇ ಕಾಡುಗೊಲ್ಲ ಸಮುದಾಯವನ್ನು ಈ ಪ್ರವರ್ಗಕ್ಕೆ ಸೇರಿಸಲು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಚರ್ಚೆ ನಡೆಸಿದ್ದೇನೆ ಎಂದು ಅವರು ಹೇಳಿದರು.

ಸತತ ಐದನೇ ದಿನ ಪ್ರಚಾರ

ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಸತತ ಐದನೇ ದಿನ ಪ್ರಚಾರ ನಡೆಸಿದ ಮಾಜಿ ಪ್ರಧಾನಿಗಳು, ಶನಿವಾರ ಎಸ್ ಎಂ ಹಳ್ಳಿ, ಮಳೂರು ಪಟ್ಟಣ, ಚೆಕ್ಕರೆ ಹಾಗೂ ಮತ್ತಿಕೆರೆ ಭಾಗಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು.

1957ರಲ್ಲಿ ಚನ್ನಪಟ್ಟಣ ರಾಜಕೀಯದಲ್ಲಿ ತಮ್ಮ ಆರಂಭಿಕ ಹೆಜ್ಜೆಗಳನ್ನು ನೆನಪಿಸಿಕೊಂಡ ಅವರು, “ಕಾಂಗ್ರೆಸ್ ವಿರುದ್ಧ ಸ್ಪರ್ಧಿಸಲು ನಾನು ಆಗ ವರದೇಗೌಡರನ್ನು ಸಂಪರ್ಕಿಸಿದ್ದೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾತನಾಡಿ; ದೇವೇಗೌಡ ಅವರನ್ನು ಬಡವರ ಬಂಧು ಮತ್ತು ರೈತ ಬಂಧು ಎಂದು ಶ್ಲಾಘಿಸಿದರು.

ಕರ್ನಾಟಕದಾದ್ಯಂತ ನಿರ್ಣಾಯಕ ಯೋಜನೆಗಳನ್ನು ಮುನ್ನಡೆಸುವಲ್ಲಿ ಗೌಡರ ಪಾತ್ರವನ್ನು ಅವರು ಕೊಂಡಾಡಿದರು. ಸ್ಥಳೀಯ ನೀರಾವರಿ ಯೋಜನೆ, ಅದರಲ್ಲಿಯೂ ಸತ್ತೇಗಾಲ ಯೋಜನೆಗೆ ಒತ್ತು ನೀಡಿದರು. ಈ ಪ್ರಯತ್ನದಲ್ಲಿ ಕುಮಾರಸ್ವಾಮಿ ಅವರ ದೂರದೃಷ್ಟಿಯನ್ನು ನಾವು ಸ್ಮರಿಸಲೇಬೇಕು ಎಂದರು.

ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹಾಗೂ ಬಿಜೆಪಿ ಮತ್ತು ಜೆಡಿಎಸ್ ನ ಹಿರಿಯ ಮುಖಂಡರು ಭಾಗವಹಿಸಿದ್ದರು.

ರಾಜಕೀಯ

ಬಿಜೆಪಿ ಬಣಬಡಿದಾಟ ದುರದೃಷ್ಟಕರ: ಬಸವರಾಜ ಬೊಮ್ಮಾಯಿ ಬೇಸರ

ಬಿಜೆಪಿ ಬಣಬಡಿದಾಟ ದುರದೃಷ್ಟಕರ: ಬಸವರಾಜ ಬೊಮ್ಮಾಯಿ ಬೇಸರ

ಪಕ್ಷ ಮತ್ತು ವರಿಷ್ಠರ ತೀರ್ಮಾನವೇ ಅಂತಿಮವಾಗಿದ್ದು ನಾನು ಯಾವುದೇ ಗುಂಪುಗಾರಿಕೆಯಲ್ಲಿ ನಂಬಿಕೆ ಇಟ್ಟವನಲ್ಲ. ಆದುದರಿಂದ ನಾನು ಯಾವುದೇ ಒಂದು ಗುಂಪಿನ ಸಭೆಯನ್ನು ಕರೆಯುವ ಪ್ರಶ್ನೆಯೇ ಬರುವುದಿಲ್ಲ. Basavaraja Bommai

[ccc_my_favorite_select_button post_id="102341"]
CEO ಆದೇಶ.. ದೊಡ್ಡಬಳ್ಳಾಪುರದ 13 ಗ್ರಾಪಂ ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ನೆಲಮಂಗಲ ಅಧಿಕಾರಿಗಳು..!

CEO ಆದೇಶ.. ದೊಡ್ಡಬಳ್ಳಾಪುರದ 13 ಗ್ರಾಪಂ ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ನೆಲಮಂಗಲ ಅಧಿಕಾರಿಗಳು..!

ವಿವಿಧ ಇಲಾಖೆಯ ಅಧಿಕಾರಿಗಳು ದೊಡ್ಡಬಳ್ಳಾಪುರ ತಾಲೂಕಿನ 13 ಗ್ರಾಪಂಗಳಿಗೆ ಭೇಟಿನೀಡಿ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲನೆ ನಡೆಸಿದ್ದಾರೆ. Ceo

[ccc_my_favorite_select_button post_id="102329"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಮೊದಲ ವರ್ಷದ ಬಿಎಸ್ಪಿ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದರು. ಮಂಗಳವಾರ ರಾತ್ರಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.suicide

[ccc_my_favorite_select_button post_id="102335"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!