ಎರಡು ಬಾರಿ ಕುತಂತ್ರದಿಂದ ಸೋಲನುಭವಿಸಿದೆ, ಈಗಲೂ ಅನಿವಾರ್ಯವಾಗಿ ನಿಂತೆ: ನಿಖಿಲ್ ಕುಮಾರಸ್ವಾಮಿ

ರಾಮನಗರ: ಕಳೆದ ಎರಡು ಬಾರಿ ರಾಜಕೀಯ ಕುತಂತ್ರದಿಂದ ಸೋಲು ಅನುಭವಿಸಿದೆ. ಈಗಲೂ ಚುನಾವಣೆ ನಿಲ್ಲುವ ಭಾವನೆ ನನ್ನಲ್ಲಿ ಇರಲಿಲ್ಲ. ಆದರೆ ಕೊನೆ ಕ್ಷಣದಲ್ಲಿ ಆದ ರಾಜಕೀಯ ಪರಿಸ್ಥಿತಿಗೆ ಕಾರ್ಯಕರ್ತರು ಆತಂಕ, ಗೊಂದಲಕ್ಕೆ ಪರಿಹಾರ ಕೊಡಬೇಕಿತ್ತು. ಹಾಗಾಗಿ ಸ್ಪರ್ಧೆ ಅನಿವಾರ್ಯ ಆಯ್ತು ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಎನ್ ಡಿ ಎ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಚನ್ನಪಟ್ಟಣ NDA ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅನೇಕ ವಿಚಾರಗಳ ಬಗ್ಗೆ ತಿಳಿಸಿದರು.

ರಾಜ್ಯದಲ್ಲಿ ನಿನ್ನೆ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿದೆ. ಇದರಲ್ಲಿ ಚನ್ನಪಟ್ಟಣ ಕ್ಷೇತ್ರ ಬಹಳ ಮಹತ್ವ ಪಡೆದುಕೊಂಡಿತ್ತು. ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಚನ್ನಪಟ್ಟಣ ಫಲಿತಾಂಶದ ಬಗ್ಗೆ ಕುತೂಹಲ ಇದೆ. ಈ ಉಪಚುನಾವಣೆ ರಾಜ್ಯದ ಇತಿಹಾಸದ ಪುಟದಲ್ಲಿ ಉಳಿಯುತ್ತೆ. ಈ ಉಪಚುನಾವಣೆ ನಿಖಿಲ್ ಕುಮಾರಸ್ವಾಮಿ ಉಪಚುನಾವಣೆ ಆಗಿರಲಿಲ್ಲ. ಎರಡೂ ಪಕ್ಷದ ಕಾರ್ಯಕರ್ತರ ಚುನಾವಣೆ ಆಗಿತ್ತು ಎಂದರು.

ಎರಡು ಬಾರಿ ಕುತಂತ್ರದಿಂದ ಸೋಲು

ಸೋಮವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾಜಿ ಅವರು ಸ್ಪಷ್ಟ ಸಂದೇಶ ಕೊಟ್ಟಿದ್ರು. ಯುವಕನ ಪರವಾಗಿ ನಡ್ಡಾರವರು ಮಾತನಾಡಿದ್ದಕ್ಕೆ ಧನ್ಯವಾದ ತಿಳಿಸುತ್ತೇನೆ.

ಎರಡೂ ಪಕ್ಷದ ಕಾರ್ಯಕರ್ತರು ಒಟ್ಟಾಗಿ ಚುನಾವಣೆ ಮಾಡಿದ್ದಾರೆ. ಕಳೆದ 18 ದಿನಗಳ ಹಿಂದೆ ಎನ್ ಡಿ ಎ ಅಭ್ಯರ್ಥಿ ಯಾರು ಆಗಬೇಕು ಎಂಬ ಪ್ರಶ್ನೆ ಉದ್ಭವ ಆಯ್ತು. ಆಗ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ಕರೆದು ನನ್ನ ಹೆಸರು ಘೋಷಣೆ ಮಾಡಿದ್ರು. ಕಳೆದ ಎರಡು ಬಾರಿ ರಾಜಕೀಯ ಕುತಂತ್ರದಿಂದ ಸೋಲು ಅನುಭವಿಸಿದೆ ಎಂದು ತಿಳಿಸಿದರು.

ನನಗೆ ಜನ ಆಶೀರ್ವಾದ ಮಾಡಿದ್ದಾರೆ

ಈ ಉಪ ಚುನಾವಣೆಯಲ್ಲಿ ನಿಲ್ಲುವ ನನಗೆ ಭಾವನೆ ಇರಲಿಲ್ಲ. ಆದರೆ ಕೊನೆ ಕ್ಷಣದಲ್ಲಿ ಆದ ರಾಜಕೀಯ ಪರಿಸ್ಥಿತಿಗೆ ಕಾರ್ಯಕರ್ತರು ಆತಂಕ, ಗೊಂದಲಕ್ಕೆ ಪರಿಹಾರ ಕೊಡಬೇಕಿತ್ತು. ಹಾಗಾಗಿ ಸ್ಪರ್ಧೆ ಅನಿವಾರ್ಯ ಆಯ್ತು.

ಕಳೆದ 18 ದಿನಗಳಿಂದ ಸರಿಯಾಗಿ ನಿದ್ದೆ ಮಾಡಿಲ್ಲ. ಮುಖಂಡರು, ಕಾರ್ಯಕರ್ತರು ನಿದ್ದೆಗೆಟ್ಟು ಕೆಲಸ ಮಾಡಿದ್ದಾರೆ. ಈ ಚುನಾವಣೆಯಲ್ಲಿ ನನಗೆ ಪೂರಕವಾಗಿ ಜನ ಆಶೀರ್ವಾದ ಮಾಡಿದ್ದಾರೆ. ಹಿರಿಯ ನಾಗರೀಕರು, ಯುವಕರು ಹೆಚ್ಚು ಬೆಂಬಲ ನೀಡಿದ್ದಾರೆ. ಹಾಗಾಗಿ ನಿಮ್ಮ ಜೊತೆಯಲ್ಲಿ ನಾನು ಶಾಶ್ವತವಾಗಿ ಇರುತ್ತೇನೆ ಎಂದು ತಿಳಿಸಿದರು.

ಈ ಚುನಾವಣೆ ನನಗೆ ಅಗ್ನಿ ಪರೀಕ್ಷೆ

ಈ ಉಪಚುನಾವಣೆ ನನಗೆ ಅಗ್ನಿ ಪರೀಕ್ಷೆ ಅಂತ ಹೇಳಿದ್ದೆ. ನಿನ್ನೆ ಶೇ 88.80% ರಷ್ಟು ಮತದಾನ ಆಗಿದೆ. ಚನ್ನಪಟ್ಟಣ ಇತಿಹಾಸದಲ್ಲಿ ದೊಡ್ಡ ಪ್ರಮಾಣದಲ್ಲಿ ಮತದಾನ ಆಗಿದೆ ತಾಲೂಕಿನ ಜನತೆ ಒಂದು ದೊಡ್ಡ ಸಂದೇಶ ಕೊಟ್ಟಿದ್ದಾರೆ ಎಂದರು.

ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ

ಚನ್ನಪಟ್ಟಣದಿಂದ ಹೊರಗಡೆ ನೆಲಸಿರುವ ಕ್ಷೇತ್ರದ ಮತದಾರರು ಬಂದು ಮತದಾನ ಮಾಡಿ ಹೋಗಿದ್ದಾರೆ. ಜೆಡಿಎಸ್-ಬಿಜೆಪಿ ಎಂಬ ತಾರತಮ್ಯ ಬಿಟ್ಟು ಎರಡೂ ಪಕ್ಷದ ಕಾರ್ಯಕರ್ತರು ಕೆಲಸ ಮಾಡಿದ್ದಾರೆ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ಕ್ಷೇತ್ರದ ಎಲ್ಲಾ ಮತದಾರರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಯುವಕನಿಗೆ ಈ ಬಾರಿ ಅವಕಾಶ ಕೊಡುವ ತೀರ್ಮಾನ ಮಾಡಿದ್ದೀರಿ ಅನ್ನೋ ವಿಶ್ವಾಸ ಇದೆ ಎಂದರು.

ರಾಜಕೀಯ

ಬಿಜೆಪಿ ಬಣಬಡಿದಾಟ ದುರದೃಷ್ಟಕರ: ಬಸವರಾಜ ಬೊಮ್ಮಾಯಿ ಬೇಸರ

ಬಿಜೆಪಿ ಬಣಬಡಿದಾಟ ದುರದೃಷ್ಟಕರ: ಬಸವರಾಜ ಬೊಮ್ಮಾಯಿ ಬೇಸರ

ಪಕ್ಷ ಮತ್ತು ವರಿಷ್ಠರ ತೀರ್ಮಾನವೇ ಅಂತಿಮವಾಗಿದ್ದು ನಾನು ಯಾವುದೇ ಗುಂಪುಗಾರಿಕೆಯಲ್ಲಿ ನಂಬಿಕೆ ಇಟ್ಟವನಲ್ಲ. ಆದುದರಿಂದ ನಾನು ಯಾವುದೇ ಒಂದು ಗುಂಪಿನ ಸಭೆಯನ್ನು ಕರೆಯುವ ಪ್ರಶ್ನೆಯೇ ಬರುವುದಿಲ್ಲ. Basavaraja Bommai

[ccc_my_favorite_select_button post_id="102341"]
CEO ಆದೇಶ.. ದೊಡ್ಡಬಳ್ಳಾಪುರದ 13 ಗ್ರಾಪಂ ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ನೆಲಮಂಗಲ ಅಧಿಕಾರಿಗಳು..!

CEO ಆದೇಶ.. ದೊಡ್ಡಬಳ್ಳಾಪುರದ 13 ಗ್ರಾಪಂ ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ನೆಲಮಂಗಲ ಅಧಿಕಾರಿಗಳು..!

ವಿವಿಧ ಇಲಾಖೆಯ ಅಧಿಕಾರಿಗಳು ದೊಡ್ಡಬಳ್ಳಾಪುರ ತಾಲೂಕಿನ 13 ಗ್ರಾಪಂಗಳಿಗೆ ಭೇಟಿನೀಡಿ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲನೆ ನಡೆಸಿದ್ದಾರೆ. Ceo

[ccc_my_favorite_select_button post_id="102329"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಮೊದಲ ವರ್ಷದ ಬಿಎಸ್ಪಿ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದರು. ಮಂಗಳವಾರ ರಾತ್ರಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.suicide

[ccc_my_favorite_select_button post_id="102335"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!