ಬೆಂಗಳೂರು: ಗೆಳತಿಗೆ ಅಶ್ಲೀಲ ಸಂದೇಶ ಕಳಿಸಿದ ವ್ಯಕ್ತಿಯೋರ್ವನ ಹತ್ಯೆ ಆರೋಪದಡಿಯಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಖ್ಯಾತ ನಟ ದರ್ಶನ್ ತೂಗುದೀಪ ಅವರಿಗೆ ದೊರೆತಿರುವ ಮಧ್ಯಂತರ ಜಾಮೀನು ತೆರವಿಗೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರು ಸಿದ್ದತೆ ನಡೆಸಿದ್ದಾರೆ.
ಈ ಕುರಿತು ಖಾಸಗಿ ಸುದ್ದಿವಾಹಿನಿಗಳ ಪ್ರಶ್ನೆಗೆ ಉತ್ತರಿಸಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು, ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗೆ ದೊರೆತಿರುವ ಮಧ್ಯಂತರ ಜಾಮೀನು ತೆರವಿಗೆ ಮೇಲ್ಮನವಿ ಸಲ್ಲಿಸಲು ಸರ್ಕಾರದ ಅನುಮತಿ ಕೇಳಲಾಗಿತ್ತು. ಸರ್ಕಾರದಿಂದ ಅನುಮತಿ ದೊರೆತಿದ್ದು, ಸದ್ಯದಲ್ಲೇ ಕೋರ್ಟ್‌ಗೆ ಮನವಿ ಸಲ್ಲಿಸಲಾಗುವುದು ಎಂದಿದ್ದಾರೆ.
ಹತ್ಯೆ ಪ್ರಕರಣದ ಆರೋಪದಡಿ ಬಂಧನಕ್ಕೊಳಗಾಗಿ 4 ತಿಂಗಳು ನ್ಯಾಯಾಂಗ ಬಂಧನದಲ್ಲಿದ್ದ ದರ್ಶನ್ ಅವರಿಗೆ ಹೈಕೋರ್ಟ್ ವೈದ್ಯಕೀಯ ಕಾರಣಗಳಿಂದ 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿದೆ.
ಅಕ್ಟೋಬರ್ 30ರಂದು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿ ಆದೇಶಿಸಿತ್ತು.
ದರ್ಶನ್ ಅವರಿಗೆ ಬೆನ್ನು ಉರಿ ತೀವ್ರವಾಗಿದ್ದು, ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಶಸ್ತ್ರಚಿಕಿತ್ಸೆ ಅಗತ್ಯವಿದ್ದು, ಈ ಕುರಿತು ವೈದ್ಯರು ಹಾಗೂ ಕುಟುಂಬದ ವರ್ಗದವರ ಮಾತುಕತೆ ನಡೆದಿದೆ.
ಇದರ ಬೆನ್ನಲ್ಲೇ ದರ್ಶನ್ ವಿರುದ್ಧ ಕತ್ತಿ ಮಸೆಯುತ್ತಿರುವ ಕೆಲಸ ಖಾಸಗಿ ಸುದ್ದಿವಾಹಿನಿಗಳು ಓದಲ್ಲಿ ಬಂದಲ್ಲಿ ದರ್ಶನ್ ವಿಚಾರದ ಕುರಿತು, ಗೃಹಸಚಿವರು, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಮೇಲ್ಮನವಿ ಸಲ್ಲಿಸಲ್ವಾ ಎಂದು ಪದೇ ಪದೇ ಪ್ರಶ್ನಿಸುವ ಮೂಲಕ ದರ್ಶನ್ ಅವರನ್ನು ಮತ್ತೆ ಜೈಲಿಗೆ ಕಳುಹಿಸಲು ತೀವ್ರ ಕಸರತ್ತು ನಡೆಸುತ್ತಿವೆ ಎಂದು ಅಭಿಮಾನಿಗಳ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.