ದೊಡ್ಡಬಳ್ಳಾಪುರ: ಗ್ರಾಮಾಂತರ ವ್ಯಾಪ್ತಿಗೆ ಒಳಪಡುವ ವಿದ್ಯುತ್ ಬಳಕೆಯ ಗ್ರಾಹಕರ ಕುಂದು ಕೊರತೆ ಸಭೆ ನವೆಂಬರ್ 16, 2024 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಇಂದಿರಾ ಕ್ಯಾಂಟೀನ್ ಸಮೀಪದ ಬೆಸ್ಕಾಂ (BESCOM) ದೊಡ್ಡಬಳ್ಳಾಪುರ ಗ್ರಾಮೀಣ ಉಪ-ವಿಭಾಗ ಕಚೇರಿಯಲ್ಲಿ ಆಯೋಜಿಸಲಾಗಿದೆ.
ವಿದ್ಯುತ್ ಸರಬರಾಜಿನಲ್ಲಿನ ನ್ಯೂನ್ಯತೆಗಳು ಸೇರಿದಂತೆ ಬೆಸ್ಕಾಂಗೆ ಸಂಬಂಧಿಸಿದ ಇತರೆ ಕುಂದು-ಕೊರತೆಗಳನ್ನು ಸಭೆಯ ಗಮನಕ್ಕೆ ತರುವ ಮೂಲಕ ಪರಿಹಾರ ಕಂಡುಕೊಳ್ಳಬಹುದು ಎಂದು ಬೆಸ್ಕಾಂ (BESCOM) ದೊಡ್ಡಬಳ್ಳಾಪುರ ಗ್ರಾಮೀಣ ವಿಭಾಗ ಕಾರ್ಯನಿರ್ವಾಹಕ ಅಭಿಯಂತರ ಮಂಜುನಾಥ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.