![Channel Gowda](https://www.harithalekhani.com/wp-content/uploads/2025/02/IMG-20250204-WA0002.jpg)
ದೊಡ್ಡಬಳ್ಳಾಪುರ: ಇಲ್ಲಿನ ಶ್ರೀ ಭುವನೇಶ್ವರಿ ಕನ್ನಡ ಸಂಘದ ವತಿಯಿಂದ ದೊಡ್ಡಬಳ್ಳಾಪುರ (Doddaballapura) ಅಥ್ಲೆಟಿಕ್ಸ್ ಸಂಸ್ಥೆ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ 5 ಕಿ.ಮೀ ಮ್ಯಾರಾಥಾನ್ ಹಮ್ಮಿಕೊಳ್ಳಲಾಗಿತ್ತು.
![](https://www.harithalekhani.com/wp-content/uploads/2024/11/1000605970-1-1024x576.webp)
![hulukudi maharathotsava](https://www.harithalekhani.com/wp-content/uploads/2025/02/IMG-20250205-WA0002.jpg)
ನಗರದ ಸಿದ್ದಲಿಂಗಯ್ಯ ವೃತ್ತದಿಂದ ಭಗತ್ ಸಿಂಗ್ ಕ್ರೀಡಾಂಗಣದವರೆಗೆ ನಡೆದ ಸ್ಪರ್ಧೆಯಲ್ಲಿ ನೂರಾರು ಮಂದಿ ಕನ್ನಡದ ಸಂದೇಶ ಸಾರುವ ಟೀ ಷರ್ಟ್‌ಗಳನ್ನು ಧರಿಸಿ, ಮ್ಯಾರಾಥಾನ್‌ನಲ್ಲಿ ಭಾಗವಹಿಸಿದ್ದರು.
![](https://www.harithalekhani.com/wp-content/uploads/2024/11/1000605969-1024x576.webp)
ಮ್ಯಾರಾಥಾನ್‌ಗೆ ಚಾಲನೆ ನೀಡಿದ ಎನ್‌ಸಿಸಿ ಅಧಿಕಾರಿ ಮೇಜರ್ ಮಹಾಬಲೇಶ್ವರ್ ಮಾತನಾಡಿ, ಕನ್ನಡದ ಉಳಿವಿಗಾಗಿ ಇಂದು ಹೋರಾಟ ನಡೆಸುವ ಅನಿವಾರ್‍ಯತೆ ಬಂದೊದಗಿದೆ. ಅನ್ಯ ಭಾಷಿಕರು ಇಲ್ಲಿ ನೆಲಸಬೇಕಾದರೆ ಕನ್ನಡ ಕಲಿಯಲೇ ಬೇಕು. ಇಲ್ಲವಾದಲ್ಲಿ ನಿಮ್ಮನ್ನು ಹೊರದೂಡಬೇಕಾಗುತ್ತದೆ.
![Hulukudi mahajathre](https://www.harithalekhani.com/wp-content/uploads/2025/02/IMG-20250205-WA0001.jpg)
ದೇಶದ ಭವಿಷ್ಯ ರೂಪಿಸುವ ಇಂದಿನ ಯುವ ಜನತೆ ದುಶ್ಚಟಗಳಿಗೆ ದಾಸರಾಗದೇ, ಕ್ರಿಯಾಶೀಲರಾಗಿರಬೇಕು. ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್‍ಯಕ್ರಮಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ನಗರಸಭಾ ಸದಸ್ಯ ಹಾಗೂ ಶ್ರೀ ಭುವನೇಶ್ವರಿ ಕನ್ನಡ ಸಂಘದ ಗೌ.ಅಧ್ಯಕ್ಷ ಟಿ.ಎನ್.ಪ್ರಭುದೇವ್ ಮಾತನಾಡಿ, ಭುವನೇಶ್ವರಿ ಕನ್ನಡ ಸಂಘ ಹಲವಾರು ಕನ್ನಡಪರ ಹೋರಾಟಗಳನ್ನು ಮಾಡುತ್ತಾ ಬಂದಿದೆ. ಕನ್ನಡದ ಉಳಿವಿಗಾಗಿ, ಸ್ಥಳೀಯ ಕನ್ನಡಿಗರಿಗೆ ಉದ್ಯೋಗಕ್ಕಾಗಿ, ಆಡಳಿತದಲ್ಲಿ ಕನ್ನಡ ಭಾಷೆಗಾಗಿ ಓಡೋಣ ಬನ್ನಿ ಎನ್ನುವ ಧ್ಯೇಯದೊಂದಿಗೆ ಮ್ಯಾರಾಥಾನ್ ಕಾರ್‍ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮವಾಗಬೇಕು. ಇಲ್ಲಿನ ಜನರ ಬದುಕು ಹಸನಾಗಬೇಕಿದೆ ಎಂದರು.
ಕಾರ್‍ಯಕ್ರಮದಲ್ಲಿ ನಗರಸಭೆ ಉಪಾಧ್ಯಕ್ಷ ಮಲ್ಲೇಶ್, ಶ್ರೀ ಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷ ಪಿ.ನವೀನ್, ನಗರಸಭಾ ಸದಸ್ಯರಾದ ಎಚ್.ಎಸ್.ಶಿವಶಂಕರ್, ಪದ್ಮನಾಭ್, ವೆಂಕಟೇಶ್, ಕನ್ನಡ ಪಕ್ಷದ ಮುಖಂಡರಾದ ಸಂಜೀವ್ ನಾಯಕ್, ಡಿ.ಪಿ.ಆಂಜನೇಯ, ಮುಖಂಡರಾದ ಕುಂಟನಹಳ್ಳಿ ಮಂಜುನಾಥ್, ಕೆ.ಎಲ್.ಶಿವರಾಂ, ರಾಘವ, ಕುಮಾರ್, ನಾಗರಾಜ್, ನಾರಾಯಣಪ್ಪ ದೊಡ್ಡಬಳ್ಳಾಪುರ ಅಥ್ಲೆಟಿಕ್ಸ್ ಸಂಸ್ಥೆಯ ಶ್ರೀನಿವಾಸ್ ಮೊದಲಾದವರು ಭಾಗವಹಿಸಿದ್ದರು.
ವೇದಿಕೆ ಕಾರ್ಯಕ್ರಮ
![](https://www.harithalekhani.com/wp-content/uploads/2024/11/1000605782-1024x576.webp)
ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಬಹುಮಾನ ವಿತರಣಾ ಕಾರ್‍ಯಕ್ರಮ ನಡೆಯಿತು. ವಿಜೇತರಾದವರಿಗೆ ಮಹಿಳಾ ಮತ್ತು ಪುರುಷ ವಿಭಾಗದಲ್ಲಿ ಪ್ರತ್ಯೇಕವಾಗಿ ಬಹುಮಾನಗಳನ್ನು ನೀಡಲಾಯಿತು.
ಹಿರಿಯ ಜೆಡಿಎಸ್ ಮುಖಂಡ ಎಸ್.ಎಂ.ಹರೀಶ್ ಗೌಡ ಬಹುಮಾನ ವಿತರಣೆ ಸಮಾರಂಭದಲ್ಲಿ ಮಾತನಾಡಿ, ದೈಹಿಕ ಸದೃಢತೆಗೆ ಕ್ರೀಡೆಗಳು ಹೆಚ್ಚು ಸಹಕಾರಿಯಾಗಲಿದ್ದು, ಕನ್ನಡದ ವಿಚಾರಕ್ಕಾಗಿ ಮ್ಯಾರಥಾನ್ ನಡೆಯುತ್ತಿರುವುದು ಸಂತಸದ ವಿಚಾರ. ಕನ್ನಡ ರಾಜ್ಯೋತ್ಸವದ ಈ ಸಂದರ್ಭದಲ್ಲಿ ಕನ್ನಡ ನಾಡು ನುಡಿಗೆ ಶ್ರಮಿಸುವ ಪಣ ತೊಡಬೇಕಿದೆ.
ಕನ್ನಡ ಪರ ಹೋರಾಟಗಾರರು, ಹಿರಿಯ ಚೇತನ ತನ ಪ್ರಭುದೇವ್ ಅವರ ಕನ್ನಡ ಪರ ಕಾಳಜಿ ಯುವ ಸಮುದಾಯಕ್ಕೆ ಮಾದರಿಯಾಗಿದೆ. ನಗರ ವ್ಯಾಪ್ತಿಯಲ್ಲಿ ಆರಂಭವಾಗಿರುವ ಈ ಮ್ಯಾರಾಥಾನ್ ಮುಂಬರುವ ದಿನಗಳಲ್ಲಿ ತಾಲೂಕಿನ ಗ್ರಾಮಾಂತರ ಪ್ರದೇಶಗಳಾದ ಸಾಸಲು, ದೊಡ್ಡಬೆಳವಂಗಲ, ಮಧುರೆ, ತೂಬಗೆರೆ ಹೋಬಳಿ ವ್ಯಾಪ್ತಿಗೂ ವ್ಯಾಪಿಸಬೇಕಿದೆ ಎಂದರು.
ಮ್ಯಾರಥಾನ್‌ನ ಪುರುಷ ವಿಭಾಗದಲ್ಲಿ ಕ್ರಮವಾಗಿ ದರ್ಶನ್.ಎಚ್.ಎ, ನಂದನ್, ದರ್ಶನ್.ಕೆ.ವಿ, ನವೀನ್.ಎ.ಎಂ, ಮನೋಜ್ ಕುಮಾರ್.ಕೆ.ಎಸ್, ವಿಕಾಸ್ ಹಾಗೂ ಮಹಿಳೆಯರ ವಿಭಾಗದಲ್ಲಿ ಕ್ರಮವಾಗಿ ಪ್ರಣತಿ ಜಯಲಕ್ಷ್ಮೀ, ದಿದ್ಯ, ನೀತು, ರುಕ್ಸಾರ್ ಶರೀಫ್, ರಂಜಿಯಾ ಬಹುಮಾನ ಗಳಿಸಿದ್ದಾರೆ.
ಕಾರ್‍ಯಕ್ರಮದಲ್ಲಿ ನಗರಸಭೆ ಉಪಾಧ್ಯಕ್ಷ ಮಲ್ಲೇಶ್, ತಾಲೂಕು ಕನ್ನಡ ಸಾಹಿತ್ಯ ರಿಷತ್ತಿನ ಅಧ್ಯಕ್ಷ ಪಿ.ಗೋವಿಂದರಾಜು, ಮಾಜಿ ಅಧ್ಯಕ್ಷೆ ಪ್ರಮೀಳಾ ಮಹದೇವ್, ನಿವೃತ್ತ ಶಿಕ್ಷಕ ಕೆ.ಮಹಾಲಿಂಗಯ್ಯಶ್ರೀ ಭುವನೇಶ್ವರಿ ಕನ್ನಡ ಸಂಘದ ಗೌ.ಅಧ್ಯಕ್ಷ ಟಿ.ಎನ್.ಪ್ರಭುದೇವ್, ಅಧ್ಯಕ್ಷ ಪಿ.ನವೀನ್, ಮತ್ತಿತರರು ಭಾಗವಹಿಸಿದ್ದರು.