ಬೆಂಗಳೂರು ನಗರ ಜಿಲ್ಲೆ; ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಸಾಲಿನ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿ.ಹೆಚ್.ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1ಎ, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ.ದೇವರಾಜು ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್ ಲೈನ್ (online application) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ವೆಬ್ ಸೈಟ್ https://bcwd.karnataka.gov.in/ ನಲ್ಲಿ ಡಿಸೆಂಬರ್ 5 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಛೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, 1ನೇ ಮಹಡಿ, ಪೋಡಿಯಂ ಬ್ಲಾಕ್, ವಿ.ವಿ.ಗೋಪುರ, ಡಾ.ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು-01
ಅಥವಾ ಇಲಾಖೆಯ ಸಹಾಯವಾಣಿ ಸಂಖ್ಯೆ : 8050770004. ದೂರವಾಣಿ ಸಂಖ್ಯೆ : 080-22867628 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.