shiggaon by election| ಹಣದ ಹೊಳೆ ಹರಿಸಿ ಕಾಂಗ್ರೆಸ್ ಗೆಲುವು: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಉಪ ಚುನಾವಣೆಯಲ್ಲಿ ( shiggaon by election ) ಶಿಗ್ಗಾವಿ ಸವಣೂರು ಕ್ಷೇತ್ರದ ಜನರ ತೀರ್ಪನ್ನು ನಾನು ತಲೆಬಾಗಿ ಒಪ್ಪಿಕೊಳ್ಳುತ್ತೇನೆ, ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಗೆ ಅಭಿನಂದನೆ ಸಲ್ಲಿಸುತ್ತೇನೆ. ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಹಾಗೆಯೇ ಮುಂದುವರೆಯಲಿ ಅಂತ ಆಶಿಸುತ್ತೇನೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಶಿಗ್ಗಾವಿ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಬಂದ ನಂತರ ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿಗ್ಗಾವಿ ಕ್ಷೇತ್ರದ ಜನರ ತೀರ್ಪನ್ನು ನಾನು ತಲೆಬಾಗಿ ಒಪ್ಪಿಕೊಳ್ತೇನೆ, ಸ್ವೀಕಾರ ಮಾಡುತ್ತೇನೆ ಎಂದಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಗೆ ಅಭಿನಂದನೆ ಸಲ್ಲಿಸುತ್ತೇನೆ. ಚುನಾವಣೆ ಸಂದರ್ಭದಲ್ಲಿ ಅಲ್ಲಿಯ ಜನರ ಸ್ಪಂದನೆ ನೋಡಿದರೆ ನಮಗೆ ಗೆಲ್ಲುವ ಭರವಸೆ ಇತ್ತು. ಆದರೆ ವಿಪರೀತ ಹಣದ ಹೊಳೆ ಹರಿಸಿ ಕಾಂಗ್ರೆಸ್ ನವರು ಗೆಲುವು ಸಾಧಿಸಿದ್ದಾರೆ. ಸರ್ಕಾರ ಅವರದ್ದೇ ಇದೆ, ಆಡಳಿತ ಪಕ್ಷದ ಅಂತ ಕಾಂಗ್ರೆಸ್ ಶಾಸಕರನ್ನು ಜನ ಆಯ್ಕೆ ಮಾಡಿದ್ದಾರೆ ಎಂದರು.

ನಾವು ಶಿಗ್ಗಾವಿ, ಸವಣೂರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇವೆ. ಅಭಿವೃದ್ಧಿ ಪರ್ವ ಹಾಗೆಯೇ ಮುಂದುವರೆಯಲಿ ಅಂತ ಆಶಿಸುತ್ತೇನೆ. ಕ್ಷೇತ್ರದ ಜನರಿಗೆ ಒಳ್ಳೆದಾಗಲಿ ಅಂತ ಬಯಸುತ್ತೇನೆ.

ಚುನಾವಣೆಯಲ್ಲಿ 10 ಜನ ಸಚಿವರು, 40ಕ್ಕಿಂತ ಹೆಚ್ಚು ಶಾಸಕರು, ಮಾಜಿ ಶಾಸಕರು ಬಂದು ಇಲ್ಲಿಯೇ ಕುಳಿತು ಪ್ರಚಾರ ಮಾಡಿದರು. ಸರ್ಕಾರ ವರ್ಸಸ್ ಬೊಮ್ಮಾಯಿ ಎಂದೇ ಬಿಂಬಿತವಾಯಿತು. ಅವರು ಸರ್ಕಾರದ ಯಂತ್ರ, ಹಣದಿಂದ ಚುನಾವಣೆ ಗೆದ್ದಿದ್ದಾರೆ ಎಂದು ಆರೋಪಿಸಿದರು.

ಶಿಗ್ಗಾವಿಯಲ್ಲಿ ಎಂಪಿ ಚುನಾವಣೆ ನಂತರ ನಾವು ಚನ್ನಾಗಿ ಕೆಲಸ ಮಾಡಿದ್ದೇವು. ಆದರೆ ಇಡೀ ಸರ್ಕಾರನೇ ಬಂತು. ಸಾಮಾನ್ಯವಾಗಿ ಉಪಚುನಾವಣೆಯಲ್ಲಿ ಸರ್ಕಾರಕ್ಕೆ ಅನುಕೂಲ ಇರುತ್ತದೆ‌. ನಾವು ಕೂಡ ಒಂದು ಕಾಲದಲ್ಲಿ 17 ಉಪ ಚುನಾವಣೆಯಲ್ಲಿ 13 ಕ್ಷೇತ್ರ ಗೆದ್ದಿದ್ದೇವು. ಈ ಸರ್ಕಾರದ ಕೆಲಸದ ಮೇಲೆ ಮತ ಬಂದಿದೆ ಅಂತೇನಿಲ್ಲ. ನಾವು ಉಪ ಚುನಾವಣೆಯಲ್ಲಿ ಅಷ್ಟು ಸ್ಥಾನ ಗೆದ್ದು ಅದಾದ ಮೇಲೆ ಸರ್ಕಾರ ಕಳೆದುಕೊಂಡಿದ್ದೇವು. ಹೀಗಾಗಿ ಕಾಂಗ್ರೆಸ್ ಸರ್ಕಾರ ಒಂದೂವರೆ ವರ್ಷದ ಆಡಳಿತಕ್ಕೆ ಸರ್ಟಿಫಿಕೇಟ್ ಅಂತ ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ ಎಂದು ಹೇಳಿದರು.

ಇನ್ನು ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶದ ಕುರಿತು ಕೇಳಿದ ಪ್ರಶ್ನೆಗೆ ಅವರು, ಮಹಾರಾಷ್ಟ್ರದಲ್ಲಿ ನಿರೀಕ್ಷೆಯಂತೆ ಬಹುಮತ ಬಂದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವ, ಮೂರು ಪಕ್ಷದ ಒಗ್ಗಟ್ಟಿನಿಂದ ಕಳೆದ ಮೂರು ವರ್ಷದ ಸರ್ಕಾರದ ಅಭಿವೃದ್ಧಿ ಮೇಲೆ ಜಯ ಸಿಕ್ಕಿದೆ.

ಲೋಕಸಭಾ ಚುನಾವಣೆ ನಂತರ ಜನ ನರೇಂದ್ರ ಮೋದಿಯವರ ಪರ ನಿಂತಿರುವುದು ಗೊತ್ತಾಗುತ್ತದೆ.
ವಿರೋಧ ಪಕ್ಷದ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ ಸೀಟು ಹೆಚ್ಚಿಸಿ ಬೀಗುತ್ತಿದ್ದರು. ಅವರಿಗೆ ಅವರ ಸ್ಥಾನವನ್ನು ಮಹಾರಾಷ್ಟ್ರ ಜನ ತೋರಿಸಿದ್ದಾರೆ ಎಂದು ಹೇಳಿದರು.

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
CEO ಆದೇಶ.. ದೊಡ್ಡಬಳ್ಳಾಪುರದ 13 ಗ್ರಾಪಂ ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ನೆಲಮಂಗಲ ಅಧಿಕಾರಿಗಳು..!

CEO ಆದೇಶ.. ದೊಡ್ಡಬಳ್ಳಾಪುರದ 13 ಗ್ರಾಪಂ ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ನೆಲಮಂಗಲ ಅಧಿಕಾರಿಗಳು..!

ವಿವಿಧ ಇಲಾಖೆಯ ಅಧಿಕಾರಿಗಳು ದೊಡ್ಡಬಳ್ಳಾಪುರ ತಾಲೂಕಿನ 13 ಗ್ರಾಪಂಗಳಿಗೆ ಭೇಟಿನೀಡಿ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲನೆ ನಡೆಸಿದ್ದಾರೆ. Ceo

[ccc_my_favorite_select_button post_id="102329"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಮೊದಲ ವರ್ಷದ ಬಿಎಸ್ಪಿ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದರು. ಮಂಗಳವಾರ ರಾತ್ರಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.suicide

[ccc_my_favorite_select_button post_id="102335"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!