ಬೆಂಗಳೂರು: ಕೊಪ್ಪಳ ಜಿಲ್ಲೆಯ ಗಂಗಾವತಿ, ಮುನಿರಾಬಾದ್ ಮತ್ತು ಬಾನಾಪುರ ರೈಲ್ವೆ ನಿಲ್ದಾಣಗಳಿಗೆ ಕ್ರಮವಾಗಿ ಅಂಜನಾದ್ರಿ (ಕಿಷ್ಕಿಂಧಾ) (Anjanadri name for railway station), ಹುಲಿಗೆಮ್ಮ ದೇವಿ ಮತ್ತು ಮಹಾತ್ಮ ಗಾಂಧಿ ರೈಲು ನಿಲ್ದಾಣ ಎಂದು ಮರುನಾಮಕರಣ ಮಾಡಬೇಕೆಂದು ಶಿಫಾರಸು ಮಾಡಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ ಭಾನುವಾರ ತಿಳಿಸಿದ್ದಾರೆ.
ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ಈ ಶಿಫಾರಸನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಳಿಸಲಾಗಿದೆ. ಅವರ ಮೂಲಕ ಇದನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಕಳಿಸಿ ಕೊಡಲಾಗುವುದು ಎಂದಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಬರುವ ಈ ಮೂರು ನಿಲ್ದಾಣಗಳಿಗೆ ಮರುನಾಮಕರಣ ಮಾಡುವುದರ ಹಿಂದೆ ಜನರ ಭಾವನೆಗಳಿಗೆ ಮನ್ನಣೆ ನೀಡಿದಂತೆ ಆಗುತ್ತದೆ.
ಅಂಜನಾದ್ರಿಯು ರಾಮಾಯಣದಲ್ಲಿ ಬರುವ ಆಂಜನೇಯನ ಜನ್ಮಸ್ಥಳವಾಗಿದ್ದು, ಹುಲಿಗೆಮ್ಮದೇವಿ ಈ ಭಾಗದ ಜನಪ್ರಿಯ ಜನಪದ ದೇವತೆಯಾಗಿದೆ. ಮಹಾತ್ಮ ಗಾಂಧಿ ಅವರ ಹೆಸರಿಡುವುದರ ಹಿಂದೆ ಕೂಡ ಐತಿಹಾಸಿಕ ಕಾರಣವಿದೆ ಎಂದು ಅವರು ಹೇಳಿದ್ದಾರೆ.