ಅಂತರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ; ಧಾರವಾಡ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ; ಮುಖ್ಯಮಂತ್ರಿಗಳಿಂದ ಪ್ರಶಸ್ತಿ ಸ್ವೀಕರಿಸಿದ ಜಿಲ್ಲಾಧಿಕಾರಿ (DC)

ಧಾರವಾಡ (DC): ಕರ್ನಾಟಕ ಸರ್ಕಾರವು ಕಳೆದ ಸೆಪ್ಟಂಬರ್ 15, 2024 ರಂದು ಅಂತರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆಯ ಅಂಗವಾಗಿ ಪ್ರಜಾಪ್ರಭುತ್ವ ಜಾಗೃತಿ ಮೂಡಿಸಲು ಬೀದರ್‍ದಿಂದ ಚಾಮರಾಜನಗರ ಜಿಲ್ಲೆಯವರೆಗೆ ಮಾನವ ಸರಪಳಿ ನಿರ್ಮಾಣ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಧಾರವಾಡ ಜಿಲ್ಲೆಯಿಂದ ಅತೀ ಹೆಚ್ಚು ಜನರು ಆನ್ ಲೈನ್ ಮೂಲಕ ತಮ್ಮ ಹೆಸರು ನೋಂದಣಿ ಮಾಡಿಕೊಂಡು ಭಾಗವಹಿಸಿದ್ದರಿಂದ ಮತ್ತು ವಿಭಿನ್ನ ಕಾರ್ಯ ಕ್ರಮಗಳ ಮೂಲಕ ಪ್ರಜಾಪ್ರಭುತ್ವ ದಿನಾಚರಣೆ ಯಶಸ್ವಿಗೊಳಿಸಿದ್ದರಿಂದ ಧಾರವಾಡ ಜಿಲ್ಲೆಗೆ ರಾಜ್ಯ ಸರ್ಕಾರವು ಪ್ರಥಮ ಸ್ಥಾನದ ಪ್ರಶಸ್ತಿ ಪ್ರಕಟಿಸಿತ್ತು.

ಇಂದು ಬೆಳಿಗ್ಗೆ ಬೆಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಶಸ್ತಿ ಸ್ವೀಕರಿಸಿದರು.

ಮಾನವ ಸರಪಳಿ: ರಾಜ್ಯ ಸರಕಾರದ ನಿರ್ದೇಶನದಂತೆ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಧಾರವಾಡ ಜಿಲ್ಲೆಯಲ್ಲಿ ಸೆಪ್ಟೆಂಬರ 15, 2024 ರಂದು ಬೆಳಿಗ್ಗೆ 9:30 ರಿಂದ 10:30 ಗಂಟೆಯವರೆಗೆ ಜಿಲ್ಲೆಯ ತೇಗೂರ ಗ್ರಾಮ ಹದ್ದೆಯಿಂದ ಮಾವಿನಕೊಪ್ಪ ಗ್ರಾಮ ಹದ್ದೆಯವರೆಗೆ ಸುಮಾರು 51 ಕೀ.ಮಿ.ಉದ್ದದ ಮಾನವ ಸರಪಳಿ ರಚಿಸಲಾಗಿತ್ತು. 9:55 ರಿಂದ 10:05 ರ ವರೆಗೆ ಮಾನವ ಸರಪಳಿಯನ್ನು ದಾಖಲೆಗೆ ಪರಿಗಣಿಸಲಾಗಿತ್ತು.

ಮಾನವ ಸರಪಳಿಯಲ್ಲಿ ಒಟ್ಟು 3,57,555 ಜನ ಭಾಗವಹಿಸಿದ್ದರು. ವ್ಯಕ್ತಿಗತವಾಗಿ 47,965 ಮತ್ತು 1914 ಎನ್ ಜಿಓ ಹಾಗೂ ಸಂಘಟನೆಗಳು, ಈ ಸಂಘಟನೆಗಳ 3,07,717 ಜನರು, 129 ವಲಸಿಗರ ಕುಟುಂಗಳು ಮತ್ತು ಈ ಕುಟುಂಬಗಳ ಪೈಕಿ 1,873 ಜನರು ಪಾಲ್ಗೊಂಡಿದ್ದರು. ಒಟ್ಟಾರೆ ಜಿಲ್ಲೆಯಿಂದ ಸಾರ್ವಜನಿಕರು, ವಿದ್ಯಾರ್ಥಿಗಳು ಮತ್ತು ಸರಕಾರಿ ನೌಕರರು, ಕುಟುಂಬಗಳು, ಗ್ರಾಮಗಳ ಜನರು ಸೇರಿದಂತೆ ಸುಮಾರು 3,57,555 ಜನರು ಮಾನವ ಸರಪಳಿಯಲ್ಲಿ ಭಾಗವಹಿಸಿದ್ದರು.

ವಿಶೇಷ ಕಾರ್ಯಕ್ರಮ ಆಯೋಜನೆ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಕೆಸಿಡಿ ಮೈದಾನದಲ್ಲಿ 200 ವಿದ್ಯಾರ್ಥಿಗಳು ಸೇರಿ, ಭಾರತ ರಾಷ್ಟ್ರ ಧ್ವಜಬಣ್ಣದ ಕ್ಯಾಪ್ ಧರಿಸಿ, ನಕ್ಷೆ ರೂಪಿಸಿದ್ದರು. 1 ಕೀ.ಮಿ.ಉದ್ದದ ಕೆಂಪು ಮತ್ತು ಹಳದಿ ಬಣ್ಣದ ಧ್ವಜ ಪ್ರದರ್ಶಿಸಿದ್ದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಕುಂಭಮೇಳ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರ ವೇಷಭೂಷಣ ಧರಿಸಿ, ಭಾಗವಹಿಸಿದ್ದರು. ಮಂಗಳಮುಖಿಯರು ಮಾನವ ಸರಪಳಿ ಕಾರ್ಯಕ್ರಮದಲ್ಲಿ ಫಾಲ್ಗೊಂಡು ಯಶಸ್ವಿಯಾಗಿ ಭಾಗವಹಿಸಿದ್ದರು.

ಈ ಎಲ್ಲ ವಿಶೇಷತೆ ಹಾಗೂ ಹೆಚ್ಚು ಜನ ಆನ್ ಲೈನ್ ನೋಂದಣಿ ಆಗಿರುವದನ್ನು ಗಮನಿಸಿರುವ ರಾಜ್ಯ ಸರಕಾರ ಧಾರವಾಡ ಜಿಲ್ಲೆಗೆ ಪ್ರಥಮ ಸ್ಥಾನದ ಬಹುಮಾನ ನೀಡಿ, ಗೌರವಿಸಿ ಪ್ರೋತ್ಸಹಿಸಿದೆ.

ಕಂದಾಯ ಇಲಾಖೆಯ ಸೇವೆಗಳ ಗುಣಮಟ್ಟದ ಅನುಷ್ಠಾನಕ್ಕಾಗಿ ರಾಜ್ಯಕ್ಕೆ ಉತ್ತಮ ಜಿಲ್ಲಾಧಿಕಾರಿ, ಗ್ರಾಮ ಆಡಳಿತ ಅಧಿಕಾರಿ ಮತ್ತು ಉತ್ತಮ ಸಮಾಲೋಚಕ ಪ್ರಶಸ್ತಿ ಗಳಿಸಿದ್ದ ಧಾರವಾಡ ಜಿಲ್ಲೆಗೆ ಈಗ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ರಾಜ್ಯಕ್ಕೆ ಪ್ರಥಮ ಪ್ರಶಸ್ತಿ ಬಂದಿರುವುದು ಜಿಲ್ಲಾಡಳಿತ ಮತ್ತು ಜಿಲ್ಲೆಯ ನೌಕರರಿಗೆ ಹೆಮ್ಮೆ, ಪ್ರೋತ್ಸಹ ಹೆಚ್ಚಿಸಿದೆ

ರಾಜಕೀಯ

ಮೈಕ್ರೋ ಫೈನಾನ್ಸ್‌ಗಳಿಂದ ಸತ್ತವರಿಗೆ ನ್ಯಾಯ ನೀಡಿ: ಆರ್‌.ಅಶೋಕ ಆಗ್ರಹ

ಮೈಕ್ರೋ ಫೈನಾನ್ಸ್‌ಗಳಿಂದ ಸತ್ತವರಿಗೆ ನ್ಯಾಯ ನೀಡಿ: ಆರ್‌.ಅಶೋಕ ಆಗ್ರಹ

ಮೈಕ್ರೋ ಫೈನಾನ್ಸ್‌ನ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದ ತಾಯಿ ಮತ್ತು ಮಗನ ಕುಟುಂಬಕ್ಕೆ ಆರ್‌.ಅಶೋಕ (R Ashoka) ಭೇಟಿ ನೀಡಿ ಸಾಂತ್ವನ ಹೇಳಿದರು.

[ccc_my_favorite_select_button post_id="102357"]
ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯೆಸಿದರು. ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪಕ್ಷ. ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ, nikhil kumaraswamy

[ccc_my_favorite_select_button post_id="102348"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಮೊದಲ ವರ್ಷದ ಬಿಎಸ್ಪಿ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದರು. ಮಂಗಳವಾರ ರಾತ್ರಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.suicide

[ccc_my_favorite_select_button post_id="102335"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!