ಬೆಂ.ಗ್ರಾ.ಜಿಲ್ಲೆ: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಅವರ ಅಧ್ಯಕ್ಷತೆಯಲ್ಲಿ ನವ್ಹೆಂಬರ್ 29 ರಂದು ನಿದಿಪಡಿಸಿದ್ದ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆ.ಡಿ.ಪಿ (KDP) ಪ್ರಗತಿ ಪರಿಶೀಲನಾ ಸಭೆಯನ್ನು ಮುಂದೂಡಲಾಗಿದೆ.
ಈ ಸಭೆಯನ್ನು ಡಿಸೆಂಬರ್ 04 ರ ಬೆಳಿಗ್ಗೆ10-30 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮರು ನಿಗದಿಪಡಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.