Site icon Harithalekhani

ಬಾಂಗ್ಲಾದಲ್ಲಿ ಹಿಂದೂ ಸಾಧು ಬಂಧನ; ನಾಳೆ ರಾಜ್ಯದಾದ್ಯಂತ ಪ್ರತಿಭಟನೆಗೆ ಕರೆ| VHP

ಬೆಂಗಳೂರು; ಬಾಂಗ್ಲಾದೇಶದಲ್ಲಿ ಹಿಂದೂ ಸಾಧು ಮತ್ತು ಧಾರ್ಮಿಕ ಅಲ್ಪಸಂಖ್ಯಾತರ ನಾಯಕ ಚಿನ್ಮಯ ಕೃಷ್ಣ ದಾಸ್‌ ಬ್ರಹ್ಮಚಾರಿ ಅವರನ್ನು ಬಂಧನ ಖಂಡಿಸಿ ವಿಶ್ವ ಹಿಂದೂ ಪರಿಷದ್ (VHP) ವತಿಯಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೊಸ್ಟ್ ವೈರಲ್ ಆಗಿದ್ದು, ಬಾಂಗ್ಲಾದೇಶಲ್ಲಿ ಧಾರ್ಮಿಕ ಮುಖಂಡ ಶ್ರೀ ಚಿನ್ಮಯ ಕೃಷ್ಣದಾಸ ಪ್ರಭುರವರ ಬಂಧನವನ್ನು ಖಂಡಿಸಿ, ಬಿಡುಗಡೆಗೆ ಆಗ್ರಹಿಸಿ ಹಾಗೂ ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ಆಗ್ರಹಿಸಿ ನಾಳೆ (ನ.29) ರಾಜ್ಯದಾದ್ಯಂತ ಪ್ರತಿಭಟನೆಯನ್ನು ವಿಶ್ವ ಹಿಂದೂ ಪರಿಷದ್ ಕರ್ನಾಟಕ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ‌.

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ಧ ಚಿನ್ಮಯ್ ಕೃಷ್ಣ ದಾಸ್ ಅವರು ಹಲವು ಬಾರಿ ಧ್ವನಿ ಎತ್ತಿದ್ದಾರೆ. ಕೆಲ ದಿನಗಳ ಹಿಂದೆ ಅವರು ಹಿಂದೂಗಳ ಬೆಂಬಲಕ್ಕಾಗಿ ರ‍್ಯಾಲಿಯನ್ನೂ ನಡೆಸಿದ್ದರು. ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಅಂತರಾಷ್ಟ್ರೀಯವಾಗಿ ಗಮನ ಸೆಳೆಯುವ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ದೇಶದ ಸಮಗ್ರತೆಗೆ ವಿರುಧ್ದವಾಗಿ ನಡೆಯುತ್ತಿದ್ದಾರೆ ಎಂದು ಆರೋಪಿಸಿ ಚಿನ್ಮಯ ಕೃಷ್ಣ ದಾಸ್​ರನ್ನು ಬಂಧಿಸಿದ್ದು. ಅವರನ್ನು ಇಂದು ನ್ಯಾಯಲಯಕ್ಕೆ ಹಾಜರುಪಡಿಸಿದ್ದಾರೆ.

ವಿಚಾರಣೆ ನಡೆಸಿದ ಬಾಂಗ್ಲಾ ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ, ಕೃಷ್ಣದಾಸ್​ ಪರ ವಕೀಲರು ಪ್ರಕರಣವನ್ನು ಪುನರ್​ ಪರಿಶೀಲಿಸುವಂತೆ ಅರ್ಜಿ ಸಲ್ಲಿಸಿದ್ದಾರೆ ಎಂದು ಮಾಹಿತಿ ದೊರೆತಿದೆ.

Exit mobile version