ದೊಡ್ಡಬಳ್ಳಾಪುರ: ತಾಲೂಕಿನ ಭಕ್ತರಹಳ್ಳಿ (bhaktharahalli) ಗ್ರಾಮಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಅರಸಮ್ಮ ರಾಜಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಂದು ಭಕ್ತರಹಳ್ಳಿ ಗ್ರಾಮಪಂಚಾಯಿತಿ ಸಭಾಂಗಣದಲ್ಲಿ ಚುನಾವಣೆ ಅಧಿಕಾರಿ ಸಮಾಜ ಕಲ್ಯಾಣ ಇಲಾಖೆಯ ಸಹಾಯ ನಿರ್ದೇಶಕ ಉಮಾಪತಿ, ಸಹಾಯಕ ಚುನಾವಣೆ ಅಧಿಕಾರಿ ಪಿಡಿಒ ನಾಗರಾಜು ಸಮುಖದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.
15 ಮಂದಿ ಸದಸ್ಯತ್ವ ಬಲದ ಗ್ರಾಮಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಅರಸಮ್ಮ ರಾಜಣ್ಣ ಅವರು ನಾಮಪತ್ರ ಸಲ್ಲಿಸಿದ್ದು, ಮತ್ಯಾರು ಉಮೇದುವಾರಿಕೆ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾದರು.
ಚುನಾವಣೆ ಪ್ರಕ್ರಿಯೆಯಲ್ಲಿ 09 ಮಂದಿ ಸದಸ್ಯರು ಹಾಜರಾಗಿ, 06 ಜನ ಗೈರು ಹಾಜರಾಗಿದ್ದರು.

ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ಅರಸಮ್ಮ ರಾಜಣ್ಣ ಅವರನ್ನು ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೈರೇಗೌಡ, ಟಿಎಪಿಎಂಸಿಎಸ್ ಮಾಜಿ ಅಧ್ಯಕ್ಷ ಸಿದ್ದರಾಮಣ್ಣ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಶ್ರೀಲತಾ, ಸದಸ್ಯರಾದ ವೆಂಕಟಲಕ್ಷಮ್ಮ, ರಾಮಲಕ್ಷಮ್ಮಗಂಗರಾಜು,
ಹೇಮಾಮಾಲಿನಿ ಹೇಮಂತಕುಮಾರ್, ಪ್ರತಿಭಾಉಮೇಶ್, ಮಂಜಮ್ಮರಂಗಹನುಮಯ್ಯ, ರಾಜಣ್ಣ, ಹನುಮಂತೇಗೌಡ, ರಂಗಣ್ಣ.
ಮುಖಂಡರಾದ ತಾಪಂ ಮಾಜಿ ಉಪಾಧ್ಯಕ್ಷ ರಾಜಣ್ಣ, ಪುಟ್ಟರಾಜು, ಮಂಜುನಾಥ್, ವೆಂಕಟೇಶ್, ದೊಡ್ಡಸಿದ್ದಪ್ಪ, ಅಂಕೋನಹಳ್ಳಿ ಸಿದ್ದಪ್ಪ ಮತ್ತಿತರರಿದ್ದರು.