ಸೋತಿದೀನಿ ಅಂತ ಮೂಲೇಲಿ ಕೂರುವ ಜಾಯಮಾನ ನನ್ನದಲ್ಲ.. ಕೊನೆ ಉಸಿರು ಇರುವವರೆಗೂ ಹೋರಾಡುತ್ತೇನೆ; ನಿಖಿಲ್| Nikhil kumaraswamy

ಹಾಸನ: ನಾನು ಸೋತು ಒಂದು ವಾರ ಆಗಿದೆ. ನನಗಿನ್ನು ವಯಸ್ಸು 36 ವರ್ಷ. ನನ್ನ ಮುಂದೆ ಇರುವುದು ಒಂದೇ ಸವಾಲು. ಜನತಾದಳ ಪಕ್ಷವನ್ನು ದಡ ಮುಟ್ಟಿಸಬೇಕು ಎಂದು ನಿಖಿಲ್ ಕುಮಾರಸ್ವಾಮಿ (Nikhil kumaraswamy) ಅವರು ತಿಳಿಸಿದರು.

ಹಾಸನ ಜಿಲ್ಲೆಯ ಅರಕಲಗೂಡಿನಲ್ಲಿ ಶನಿವಾರ ರಾತ್ರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ನಾನು ಶಾಸಕನಾಗಬೇಕು ಎನ್ನುವುದು ನನ್ನ ಮುಂದೆ ಇರುವ ಪ್ರಶ್ನೆ ಅಲ್ಲ, ಪ್ರಾದೇಶಿಕ ಪಕ್ಷ ಉಳಿಯಬೇಕಿದೆ, ಕನ್ನಡಿಗರ ಅಸ್ಮಿತೆಗಾಗಿ ಈ ಪಕ್ಷ ಉಳಿಯಬೇಕಿದೆ. ಆ ಹಿನ್ನೆಲೆಯಲ್ಲಿ ಹೋರಾಟ ಮಾಡುತ್ತೇನೆ. ಕೊನೆ ಉಸಿರು ಇರುವವರೆಗೂ ಹೋರಾಡುತ್ತೇನೆ. ಮಾತನಾಡಲು ವೇದಿಕೆಗಳು ಮುಂದಿನ ದಿನಗಳಲ್ಲಿ ಸಜ್ಜಾಗುತ್ತೆ. ಹೋರಾಟ ಎನ್ನುವುದನ್ನು ರಕ್ತಗತವಾಗಿ ಮೈಗೂಡಿಸಿಕೊಂಡಿದ್ದೇನೆ. ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಒಬ್ಬ ಯುವಕನಾಗಿ ನಿಖಿಲ್‌ ಕುಮಾರಸ್ವಾಮಿ ನಿಮ್ಮ ಜೊತೆಯಲ್ಲಿ ಪ್ರಾಮಾಣಿಕವಾಗಿ ಇರುತ್ತೇನೆ ಎಂದರು.

ನಾನು ಸಂಸದನಾಗಲು, ಶಾಸಕ ನಾಗಬೇಕು ಎಂದು ಕೂಡ ಹಪಹಪಿಸಿಲ್ಲ. ಹಾಗಿದ್ದರೆ ನಾನು ಚಿತ್ರಂಗಕ್ಕೆ ಹೋಗ ರಾಜಕಾರಣಕ್ಕೆ ಬರತ್ತಿದ್ದೆ ಎಂದರು ಹಾಸನ ಜಿಲ್ಲೆಯ ಜನತೆ ಒಬ್ಬ ಸಾಧಾರಣ ರೈತ ಕುಟುಂಬದ ಮಗನಾಗಿ ಜನಿಸಿರುವ ದೇವೇಗೌಡರನ್ನ ಕೆಂಪುಕೋಟೆ ಮೇಲೆ ಬಾವುಟ ಹಾರಿಸುವ ಶಕ್ತಿಯನ್ನು ತುಂಬಿ ಇತಿಹಾಸ ಸೃಷ್ಟಿ ಮಾಡಿದ್ದಾರೆ.

ನಿಮ್ಮ ಹೃದಯದಲ್ಲಿ ನಮ್ಮ ಕುಟುಂಬದ ಮೇಲೆ ಇಟ್ಟಿರುವ ಪ್ರೀತಿ, ಗೌರವ ಎಷ್ಟು ಜನ್ಮ ಎತ್ತಿ ಬಂದರು ತೀರಿಸಲು ಸಾಧ್ಯವಿಲ್ಲ. ನಿಮ್ಮ ಋಣಕ್ಕಾಗಿ ಪ್ರಾಮಾಣಿಕವಾಗಿ ನಮ್ಮಇಡೀ ಪಕ್ಷ, ನಮ್ಮ ಕುಟುಂಬ ನಿಮ್ಮ ಜೊತೆಯಲ್ಲಿ ಸದಾಕಾಲ ಇರುತ್ತೇವೆ ಎಂದರು.

ರಾಮನಗರ ಜಿಲ್ಲೆಯು ಕೂಡ ನಮ್ಮ ಕುಟುಂಬಕ್ಕೆ ಎಂಟು ಬಾರಿ ಶಾಸಕ ಸ್ಥಾನ, ಮೂರು ಬಾರಿ ಕುಮಾರಣ್ಣ ಅವರನ್ನು ಸಂಸದರನ್ನಾಗಿ ಆಯ್ಕೆ ಮಾಡಿದ್ದಾರೆ ಎಂದರು. ಚುನಾವಣೆಯಲ್ಲಿ ಏಳು ಬೀಳು ಸರ್ವೆ ಸಾಮಾನ್ಯ. ನಾನು ರಾಜಕಾರಣದ ಹಿನ್ನೆಲೆಯಲ್ಲಿ ಬಂದಿರುವ ವ್ಯಕ್ತಿಯಾಗಿದ್ದರು ಚಿತ್ರರಂಗದಲ್ಲಿ ನನ್ನದೇ ಸವಾಲುಗಳನ್ನು ಸ್ವೀಕಾರ ಮಾಡಿದ್ದೇನೆ ಎಂದು ತಿಳಿಸಿದರು.

ಜಾಗ್ವಾರ್ ಮೂಲಕ ನಮ್ಮ ತಂದೆ ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದು ಅನೇಕ ಚಿತ್ರಗಳನ್ನು ಮಾಡಿದೆ. ತದನಂತರ ಸಾರ್ವಜನಿಕ ಬದುಕಿನಲ್ಲಿ ಜವಾಬ್ದಾರಿಗಳನ್ನು ಅರಿತಿದ್ದೇನೆ. ಆ ಒಂದು ಕಾರಣದಿಂದ ಸಂಪೂರ್ಣವಾಗಿ ಸಾರ್ವಜನಿಕ ಬದುಕಿಗೆ ಧುಮುಕಿದ್ದೇನೆ ಎಂದು ಹೇಳಿದರು.

ನಮ್ಮ ನಾಡಿನ ನೆಲ, ಜಲ, ಭಾಷೆಯ ವಿಚಾರವಾಗಿ ದೇವೇಗೌಡರು 92 ವಯಸ್ಸಾದರೂ ರಾಜ್ಯಸಭೆಯಲ್ಲಿ ಏಕಾಂಗಿಯಾಗಿ ನೆಲ, ಜಲ, ಭಾಷೆ ಉಳಿಸುವ ಕೆಲಸ ಮಾಡುತ್ತಿದ್ದಾರೆ. ನನ್ನ ಜೀವನದ ಸ್ಪೂರ್ತಿ ದೇವೇಗೌಡರು. ನನ್ನ ಜವಾಬ್ದಾರಿಯನ್ನ ಅರಿತಿದ್ದೇನೆ.

ಅನಿರೀಕ್ಷಿತವಾದ ಬೆಳವಣಿಗೆಯಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಬೇಕಾಗಿ ಬಂತು. ಈ ಚುನಾವಣೆಯ ಸೋಲಿನ ಬಗ್ಗೆ ಹೆಚ್ಚಾಗಿ ಪರಾಮರ್ಶೆ ಮಾಡಲ್ಲ. ಕರ್ನಾಟಕ ರಾಜ್ಯದಲ್ಲಿ ಕಟ್ಟಿರುವ ರೈತ ಪರವಾದ ಪಕ್ಷ, ಪ್ರಾದೇಶಿಕ ಪಕ್ಷ ಜೆಡಿಎಸ್‌. ಲಕ್ಷಾಂತರ ಕಾರ್ಯಕರ್ತರ ದುಡಿಮೆ, ಎಲ್ಲಾ ತಂದೆ, ತಾಯಿಯರ ಆಶೀರ್ವಾದ, ರೈತರ ಆಶೀರ್ವಾದ ಮಾಡಿ ಇಲ್ಲಿಯವರೆಗೆ ಬೆಳೆಸಿ, ಉಳಿಸಿದ್ದೀರಿ ಎಂದರು.

ಹಲವಾರು ಸಂದರ್ಭದಲ್ಲಿ ಅಖಾಡ ಸಿದ್ದವಾಗಿತ್ತು, ಬಹಳ ಸುಲಭವಾಗಿ ಶಾಸಕನಾಗಬಹುದಿತ್ತು. ಆದರೆ ಇಲ್ಲಿಯವರೆಗೂ ನಾನು, ಪಕ್ಷ ಸಂಕಷ್ಟದಲ್ಲಿತ್ತು, ಆ ಸಂದರ್ಭದಲ್ಲಿ ಒಬ್ಬ ಪಕ್ಷದ ಶಿಸ್ತಿನ ಸಿಪಾಯಿಯಾಗಿ, ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷದ ಕಾರ್ಯಕರ್ತರ ಭಾವನೆಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದೇನೆ ಎಂದರು.

ನಿಮ್ಮಲ್ಲೆರ ಆಶೀರ್ವಾದಿಂದ ಇಡೀ ರಾಜ್ಯ ಪ್ರವಾಸ ಮಾಡುತ್ತೇನೆ. ಮೂಲೇಲಿ ಕೂರುವ ಜಾಯಮಾನ ನನ್ನದಲ್ಲ ಎಂದು ಹೇಳಿದರು‌.

ರಾಜಕೀಯ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್ ಕಿಡಿ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್

"ನಮಸ್ತೇ ಸದಾ ವತ್ಸಲೇ ಮಾತೃಭೂಮೇ" ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ (D.K. Shivakumar) ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ... R. Ashoka

[ccc_my_favorite_select_button post_id="113127"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

17 ವರ್ಷದ ಬಾಲಕನ ಶವ ಆಘಾತಕಾರಿ ಸ್ಥಿತಿಯಲ್ಲಿ (shocking condition) ಪತ್ತೆಯಾಗಿರುವ ಘಟನೆ ನಗರದ ಕರೇನಹಳ್ಳಿಯ ಟೆಂಟ್ ಹಿಂಭಾಗದ ಗುಟ್ಟೆಯಲ್ಲಿ ಪತ್ತೆಯಾಗಿದೆ.

[ccc_my_favorite_select_button post_id="113099"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!