ಗೌರಿಬಿದನೂರು: ಶಿಕ್ಷಕ ವೃತ್ತಿಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ (retired) ಶಿಕ್ಷಕರನ್ನು ಸನ್ಮಾನಿಸಿ ಬೀಳ್ಕೊಟ್ಟ ಘಟನೆ ತಾಲೂಕಿನ ಗೊಡ್ಡಾವಲಹಳ್ಳಿ ಗ್ರಾಮದಲ್ಲಿ ನಡೆಯಿತು
ಗೊಡ್ಡಾವಲಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಶ್ರೀರಾಮಯ್ಯ ಅವರು ನಿವೃತ್ತಿ ಹೊಂದಿದ್ದಾರೆ.
ಸತತ 30 ವರ್ಷಗಳ ಸುದೀರ್ಘ ಶಿಕ್ಷಕ ವೃತ್ತಿಯಲ್ಲಿ ಹಲವು ಪ್ರಶಸ್ತಿ, ಜೊತೆಗೆ 2010ರಲ್ಲಿ ತಾಲೂಕಿನ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಶ್ರಿರಾಮಯ್ಯ ಅವರು ತಮ್ಮದಾಗಿಸಿಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು ಶಾಲೆಯ ಆವರಣದಲ್ಲಿ ಹಿರಿಯ ವಿದ್ಯಾರ್ಥಿಗಳು, ಗ್ರಾಮಸ್ಥರು ಹಾಗೂ ಶಿಕ್ಷಕರು ಸನ್ಮಾನಿಸಿ ಬೀಳ್ಕೊಟ್ಟರು.
ಕಾರ್ಯಕ್ರಮದಲ್ಲಿ ಸಿಆರ್ಪಿ ರವಿಕುಮಾರ್, ಮುಖ್ಯಶಿಕ್ಷಕರಾದ ನಾಗಪ್ಪ, ನಾಗರಾಜು, ನಂಜರೆಡ್ಡಿ, ಶಿಕ್ಷಕರಾದ ಅಶೋಕ್, ವಿಶ್ವನಾಥ್, SDMC ಅಧ್ಯಕ್ಷ ಬಾಲಕೃಷ್ಣ ಮತ್ತಿತರರಿದ್ದರು.