Site icon Harithalekhani

ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತಿ, ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಕರ್ತವ್ಯ: ತೂಬಗೆರೆ ಷರೀಫ್| tubgere

ದೊಡ್ಡಬಳ್ಳಾಪುರ; ತೂಬಗೆರೆ (tubgere) ಹೋಬಳಿ ಹಿತರಕ್ಷಣಾ ಸಮಿತಿ ವತಿಯಿಂದ ಪಟ್ಟಣದ ಬಸ್ ನಿಲ್ದಾಣದಲ್ಲಿ 68ನೇ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು.

ಹಿರಿಯ ಕನ್ನಡಪರ ಹೋರಾಟಗಾರ, ಹಿರಿಯ ಪತ್ರಕರ್ತ ತೂಬಗೆರೆ ಷರೀಫ್ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು

ನವೆಂಬರ್ 1, 1956 ರಲ್ಲಿ ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಮೈಸೂರು ರಾಜ್ಯವನ್ನು ರಚಿಸಲಾಯಿತು. ಆ ಸುದಿನದ ನೆನಪಿಗಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ.

ಈ ಆಚರಣೆಯ ಮೂಲಕ ಇಂದಿನ ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತಿ, ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಅರವಿಂದ್ ಮಾತನಾಡಿ, ಎರಡು ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯ ಆರಾಧನೆಯ ನವೆಂಬರ್ ತಿಂಗಳಲ್ಲಿ ಮಾತ್ರ ಸೀಮಿತವಾಗದೆ ಪ್ರತಿದಿನ ನಿತ್ಯೋತ್ಸವವಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ರವಿಸಿದ್ದಪ್ಪ ಹಾಗೂ ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವೆಂಕಟೇಶ್, ಮುಖಂಡರಾದ ರಾಮಕೃಷ್ಣ, ವೆಂಕಟಪ್ಪ, ಜಯಣ್ಣ, ಕಿಟ್ಟಿ ಯುವ ಮುಖಂಡ ಉದಯ ಆರಾಧ್ಯ ಹಾಗೂ ಗ್ರಾಮಸ್ಥರು ಹಾಜರಿದ್ದರು.

Exit mobile version