ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ಎಳ್ಳುಪುರ ರೈಲ್ವೆ ಗೇಟ್ ಸಮೀಪ ನಡೆದಿದೆ.
ಮೃತರನ್ನು ಶಿವಕುಮಾರ್ MR (55 ವರ್ಷ) ಎಂದು ಗುರುತಿಸಲಾಗಿದೆ.
ಶನಿವಾರ ಸಂಜೆ ರೈಲಿಗೆ ಸಿಲುಕಿ ಸಾವನಪ್ಪಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ದೊಡ್ಡಬಳ್ಳಾಪುರ ನಗರ ವಾಸಿಯಾದ ಮೃತರು, ಕೆಲ ವರ್ಷಗಳಿಂದ ಎಳ್ಳುಪುರಲ್ಲಿ ವಾಸವಿದ್ದರು ಎನ್ನಲಾಗಿದೆ.
ದೊಡ್ಡಬಳ್ಳಾಪುರ ರೈಲ್ವೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.