ದೊಡ್ಡಬಳ್ಳಾಪುರ: ಕಾರ್ತಿಕ ಮಾಸದ ಅಂಗವಾಗಿ ತಾಲೂಕಿನ ಇತಿಹಾಸ ಪ್ರಸಿದ್ಧ ಘಾಟಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ (ghati subramanya near) ಶನಿವಾರ ದೀಪೋತ್ಸವವನ್ನು ಏರ್ಪಡಿಸಲಾಗಿತ್ತು.
ದೀಪೋತ್ಸವದ ಕಾರಣ ದೇವರಿಗೆ ವಿಶೇಷ ಅಲಂಕಾರ, ದೇವರ ಉತ್ಸವ ನಡೆಸಲಾಯಿತು.
ಈ ವೇಳೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎಂ.ನಾರಾಯಣಸ್ವಾಮಿ, ಪ್ರಧಾನ ಅರ್ಚಕ ಆರ್.ಸುಬ್ರಹ್ಮಣ್ಯ, ದೇವಾಲಯದ ಸಿಬ್ಬಂದಿಗಳು, ಗ್ರಾಮಸ್ಥರು ಹಾಗೂ ಭಕ್ತಾದಿಗಳು ಭಾಗವಹಿಸಿದ್ದರು.