Site icon ಹರಿತಲೇಖನಿ

Accident: ಬ್ಯಾಂಕಾಕ್ ಪ್ರವಾಸ ಮುಗಿಸಿ ಬಂದ ಮೂವರು ಅಪಘಾತದಲ್ಲಿ ಸಾವು..!

Channel Gowda
Hukukudi trust

ಬಳ್ಳಾರಿ: ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ (Accident) ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿ, ಮತ್ತೋರ್ವ ಗಾಯಗೊಂಡಿರುವ ಘಟನೆ ತಾಲೂಕಿನ ಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡಿರುವ ವಿಡುಪನಕಲ್ಲು – ಚೇಳ್ಳಗುರ್ಕಿ ಮಧ್ಯೆ ಇಂದು ಬೆಳಗಿನ ಜಾವ ಸಂಭವಿಸಿದೆ.

Aravind, BLN Swamy, Lingapura

ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯ ಕ್ಯಾನ್ಸರ್ ವೈದ್ಯ ಡಾ.ಗೋವಿಂದರಾಜುಲು, ನೇತ್ರ ತಜ್ಞ ಡಾ.ಯೋಗೀಶ್ ಮತ್ತು ವಕೀಲ ವೆಂಕಟನಾಯ್ಡು ಸ್ಥಳದಲ್ಲೇ ಮೃತಪಟ್ಟವರು ಎಂದು ವರದಿಯಾಗಿದೆ.

ಖಾಸಗಿ ವೈದ್ಯ, ಗಂಧರ್ವ ಗಿರಿ ಎಸ್ಟೇಟ್ ಮಾಲೀಕ ಡಾ. ಅಮರೇಗೌಡ ಪಾಟೀಲ್ ಅವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Aravind, BLN Swamy, Lingapura

ಓರ್ವ ವಕೀಲ, ಮೂವರು ವೈದ್ಯರು ಸೇರಿ ನಾಲ್ವರು ಬ್ಯಾಂಕಾಕ್ ಪ್ರವಾಸ ಮುಗಿಸಿಕೊಂಡು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದು, ಅನಂತಪುರ ಮಾರ್ಗವಾಗಿ ಬಳ್ಳಾರಿಗೆ ಆಗಮಿಸುತ್ತಿದ್ದರು.

ಚೇಳ್ಳಗುರ್ಕಿ ಇನ್ನು ಐದು ಕಿಲೋ ಮೀಟರ್ ಇರುವಾಗ ಕಾರು ನಿಯಂತ್ರಣ ತಪ್ಪಿ ಬೆಳಗಿನ ಜಾವ 4 ಗಂಟೆಗೆ ಮರಕ್ಕೆ ಗುದ್ದಿದ ಪರಿಣಾಮ ದುರಂತ ಸಂಭವಿಸಿದೆ.

ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

Exit mobile version