Site icon Harithalekhani

Accident| Doddaballapura: ಮೊಗಚಿ ಬಿದ್ದ ಟ್ರಕ್..!

ದೊಡ್ಡಬಳ್ಳಾಪುರ: ಚಾಲಕನ‌ ನಿಯಂತ್ರಣ ತಪ್ಪಿದ ಟ್ರಕ್ ಒಂದು ಮೊಗಚಿ ಬಿದ್ದಿರುವ (accident) ಘಟನೆ ತಾಲೂಕಿನ‌ ಮೆಣಸಿ ಗೇಟ್ ಬಳಿ ಸಂಭವಿಸಿದೆ.

ಮಂಗಳವಾರ ಬೆಳಗ್ಗಿನ ಜಾವ ಘಟನೆ ನಡೆದಿದ್ದು, ದಾಬಸ್‌ಪೇಟೆಯಿಂದ ದೊಡ್ಡಬಳ್ಳಾಪುರ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುತ್ತಿದ್ದ ಟ್ರಕ್ ಮೆಣಸಿ ಗೇಟ್ ಬಳಿ, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಮೊಗಚಿ ಬಿದ್ದಿದೆ.

ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವಾಗಿದ್ದು, ಟ್ರಕ್ ಮೇಲೆ ಸಾಗಿಸಲಾಗುತ್ತಿದ್ದ ಸುಮಾರು 6 ಟ್ರಾಕ್ಟರ್ ಹಾಗೂ ಟ್ರಕ್‌ಗೆ ಹಾನಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Exit mobile version