Gandhi bharatha| “ಗಾಂಧಿ ಭಾರತ” ಹೆಸರಲ್ಲಿ ವರ್ಷವಿಡೀ ಅರ್ಥಪೂರ್ಣ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ನಿರ್ಣಯ

ಬೆಂಗಳೂರು: 1924 ರಲ್ಲಿ ಮಹಾತ್ಮಗಾಂಧಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣಾ ಸಭೆ (Gandhi bharatha) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣದಲ್ಲಿ ನಡೆಯಿತು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್,ಮಾಜಿ ಮುಖ್ಯಮಂತ್ರಿ ವೀರಪ್ಪಮೋಯ್ಲಿ, ಸಚಿವರಾದ ಹೆಚ್.ಕೆ.ಪಾಟೀಲ್, ಜಮೀರ್ ಅಹಮದ್ ಖಾನ್, ಲಕ್ಷ್ಮೀ ಹೆಬ್ಬಾಳ್ಕರ್, ಶಿವರಾಜ್ ತಂಗಡಗಿ, ಮಧು ಬಂಗಾರಪ್ಪ, ಮಾಜಿ ಸಚಿವರಾದ ಆರ್.ವಿ.ದೇಶಪಾಂಡೆ, ರಮಾನಾಥ್ ರೈ, ಬಿ.ಎಲ್.ಶಂಕರ್, ಶಾಸಕರಾದ ಆಸಿಫ್ ಸೇಠ್.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಕಾರ್ಯದರ್ಶಿಯವರಾದ ಕಾವೇರಿ, ವಾರ್ತಾ ಮತ್ತು ಪ್ರಚಾರ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ಗಾಂಧಿ ಭವನದ ಪದಾಧಿಕಾರಿಗಳು , ಬೆಳಗಾವಿ ಜಿಲ್ಲಾಡಳಿತದ ಅಧಿಕಾರಿಗಳು ಸೇರಿ 60 ಕ್ಕೂ ಹೆಚ್ಚು ಮಂದಿ ಸಭೆಯಲ್ಲಿ ಉಪಸ್ಥಿತರಿದ್ದರು.

ಸಭೆಯ ಮುಖ್ಯಾಂಶಗಳು

• ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಡಿಸೆಂಬರ್‌ 26 ಮತ್ತು 27ರಂದು ಕಾರ್ಯಕ್ರಮಗಳಿಗೆ ಚಾಲನೆ.

• ಶತಮಾನೋತ್ಸವ ಅಂಗವಾಗಿ ವರ್ಷವಿಡೀ ʻಗಾಂಧೀ ಭಾರತʼ ಹೆಸರಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮಗಳ ಆಯೋಜನೆಗೆ ಸಿದ್ಧತೆಗಳನ್ನು ಆರಂಭಿಸುವಂತೆ ಮುಖ್ಯಮಂತ್ರಿ ಅವರಿಂದ ಸೂಚನೆ.

• ಬೆಳಗಾವಿಯಲ್ಲಿ ಡಿ.26ರಂದು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ ಮತ್ತು ಡಿ.27ರಂದು ಸಾರ್ವಜನಿಕ ಸಭೆ ನಡೆಸಲು ನಿರ್ಧಾರ.

• ಮೈಸೂರು ದಸರಾ ಮಾದರಿಯಲ್ಲಿ ಬೆಳಗಾವಿ ನಗರದ ಪ್ರಮುಖ 32 ಕಿಮೀ ಉದ್ದದ ರಸ್ತೆ ಹಾಗೂ 30 ವೃತ್ತಗಳ ದೀಪಾಲಂಕಾರ.

• ಕಾಂಗ್ರೆಸ್‌ ಅಧಿವೇಶನ ನಡೆದ ಸ್ಥಳದಲ್ಲಿ ವೀರಸೌಧ ಅಭಿವೃದ್ಧಿ. ಈ ಸ್ಥಳದಲ್ಲಿ ಗ್ರಂಥಾಲಯ ಮತ್ತು ಗಾಂಧಿ ಪ್ರತಿಮೆ ಅನಾವರಣ.

• ಬೆಳಗಾವಿಯ 2.1 ಕಿ.ಮೀ ಉದ್ದದ ಕಾಂಗ್ರೆಸ್‌ ರಸ್ತೆಯಲ್ಲಿ ಶತಮಾನೋತ್ಸವದ ಸ್ಮಾರಕವಾಗಿ ತಾತ್ಕಾಲಿಕ ವಿರೂಪಾಕ್ಷ ಗೋಪುರ ನಿರ್ಮಾಣ, ರೈಲು ಮಾರ್ಗದ ತಡೆಗೋಡೆಯುದ್ದಕ್ಕೂ ಉಬ್ಬು ಶಿಲ್ಪಗಳ ನಿರ್ಮಾಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ನಿರ್ಧಾರ.

• ಕಣಬರಗಿಯಲ್ಲಿ ಗಂಗಾಧರ ರಾವ್‌ ದೇಶಪಾಂಡೆಯವರ ಸ್ಮಾರಕದಲ್ಲಿ ಮೂರ್ತಿ ಸ್ಥಾಪನೆ, ಮ್ಯೂಸಿಯಂ ಉದ್ಘಾಟನೆ. ಹುದಲಿಯಲ್ಲಿ ಗಾಂಧೀ ಸ್ಮಾರಕ ಹಾಗೂ ಛಾಯಾಚಿತ್ರ ಗ್ಯಾಲರಿಯ ಅಭಿವೃದ್ಧಿ.

• ಗಾಂಧೀಜಿ ಅವರು ವಿವಿಧ ಕಾಲಘಟ್ಟಗಳಲ್ಲಿ ಭೇಟಿ ನೀಡಿದ ರಾಜ್ಯದ 120 ಸ್ಥಳಗಳಲ್ಲಿ ನೆನಪಿನ ಸ್ತಂಭಗಳನ್ನು ನಿರ್ಮಿಸಲು ತೀರ್ಮಾನ.

• ಅಟನ್‌ ಬರೋ ನಿರ್ಮಿಸಿದ ಪ್ರಸಿದ್ಧ ʻಗಾಂಧಿʼ ಸಿನೆಮಾವನ್ನು ಕನ್ನಡದಲ್ಲಿ ನಿರ್ಮಿಸಲು ನಿರ್ಧಾರ.

• ಸುವರ್ಣ ವಿಧಾನಸೌಧದಲ್ಲಿ ಕಾಂಗ್ರೆಸ್‌ ಅಧಿವೇಶನ, ಸ್ವಾತಂತ್ರ್ಯ ಚಳವಳಿಯನ್ನು ಪ್ರತಿಬಿಂಬಿಸುವ ಛಾಯಾಚಿತ್ರ ಗ್ಯಾಲರಿ ನಿರ್ಮಾಣ.

• ಡಿ.26 ರಂದು ಗಣ್ಯ ಪ್ರತಿನಿಧಿಗಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಡಿ.27 ರಂದು ಸಾರ್ವಜನಿಕರಿಗೆ ಸಾಂಸ್ಕೃತಿಕ ಕಾರ್ಯಕ್ರಮ.

• ಶತಮಾನೋತ್ಸವದ ನೆನಪಿಗೆ ವಿಶೇಷ ಅಂಚೆ ಚೀಟಿ ಬಿಡುಗಡೆಗೆ ನಿರ್ಧಾರ.

ರಾಜಕೀಯ

ರಾಜ್ಯದಲ್ಲಿ 50% ಭ್ರಷ್ಟಾಚಾರ; ಬಸವರಾಜ ಬೊಮ್ಮಾಯಿ ಆರೋಪ

ರಾಜ್ಯದಲ್ಲಿ 50% ಭ್ರಷ್ಟಾಚಾರ; ಬಸವರಾಜ ಬೊಮ್ಮಾಯಿ ಆರೋಪ

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲ ಇಲಾಖೆಗಳಲ್ಲಿಯೂ ಐವತ್ತು ಪರ್ಸೆಂಟ್ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಸಂಸದ Basavaraj Bommai

[ccc_my_favorite_select_button post_id="105001"]
ಮೈ ಫ್ರೆಂಡ್ ಮೋದಿ ಎನ್ನುತ್ತಲೇ ಭಾರತಕ್ಕೆ ಬರೆ ಎಳೆದ ಟ್ರಂಪ್

ಮೈ ಫ್ರೆಂಡ್ ಮೋದಿ ಎನ್ನುತ್ತಲೇ ಭಾರತಕ್ಕೆ ಬರೆ ಎಳೆದ ಟ್ರಂಪ್

ಇಷ್ಟು ದಿನ ಬಾಯಿ ಮಾತಲ್ಲೇ ಸುಂಕ ಸಂಘರ್ಷದ ಮಾತುಗಳನ್ನು ಆಡುತ್ತಾ ಬಂದಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮಂಗಳವಾರ ಮಧ್ಯರಾತ್ರಿ 2.20 (ಭಾರತೀಯ ಕಾಲಮಾನ) trump

[ccc_my_favorite_select_button post_id="104924"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
‘ಪ್ರೀತಿಸಿದವಳಿಗಾಗಿ ದೊಡ್ಡಬಳ್ಳಾಪುರ ಬಾರ್ನಲ್ಲಿ ಬಡಿದಾಟ: ದೂರು ದಾಖಲು’

‘ಪ್ರೀತಿಸಿದವಳಿಗಾಗಿ ದೊಡ್ಡಬಳ್ಳಾಪುರ ಬಾರ್ನಲ್ಲಿ ಬಡಿದಾಟ: ದೂರು ದಾಖಲು’

ಗುಂಪುಗಳ ನಡುವಿನ ಕಂಡು ಬೆಚ್ಚಿ ಬಿದ್ದ ಜನರು. ದೊಡ್ಡಬಳ್ಳಾಪುರ ನಗರದಲ್ಲಿ ಇತ್ತೀಚೆಗೆ ಪುಂಡರ ಹಾವಳಿ ಮೀತಿ ಮೀರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. Doddaballapura

[ccc_my_favorite_select_button post_id="105003"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!