ವಿಕಲ ಚೇತನರು ದೇವರ ಮಕ್ಕಳು: ಡಿಸಿಎಂ ಡಿಕೆ ಶಿವಕುಮಾರ್ (DK Shivakumar)

ಬೆಂಗಳೂರು: ವಿಕಲ ಚೇತನರಾದರೂ ಸಂಗೀತ ಕ್ಷೇತ್ರದಲ್ಲಿ ಪಂಚಾಕ್ಷರಿ ಗವಾಯಿಗಳು, ಪುಟ್ಟರಾಜ ಗವಾಯಿಗಳು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿ ನಮಗೆಲ್ಲಾ ಮಾದರಿಯಾಗಿದ್ದಾರೆ. ವಿಕಲ ಚೇತನರು ಅಂದರೆ ದೇವರ ಮಕ್ಕಳಿದ್ದಂತೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DK Shivakumar) ಹೇಳಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಕಂಠೀರವ ಒಳಾಂಗಣ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ವಿಶ್ವ ವಿಕಲಚೇತನರ ದಿನಾಚರಣೆಯಲ್ಲಿ ಮಾತನಾಡಿದ ಅವರು ವಿಶೇಷ ಚೇತನರಿಗೆ ಮನೋಬಲವೇ ಶಕ್ತಿ ಎಂದರು.

ಕಳೆದ ಬಾರಿ ಸಾಮಾನ್ಯ ಒಲಿಂಪಿಕ್ಸ್‌ಗಿಂತಲೂ ಪ್ಯಾರಾ ಒಲಿಂಪಿಕ್ಸ್‌ನಲ್ಲಿ ವಿಶೇಷ ಚೇತನರು 21 ಪದಕಗಳನ್ನು ಭಾರತಕ್ಕೆ ಗೆದ್ದುಕೊಟ್ಟರು. ಅಂಗ ವೈಕಲ್ಯವನ್ನು ಮೆಟ್ಟಿ ನಿಂತು ವಿಕಲ ಚೇತನರು ಉತ್ತಮ ಸಾಧನೆ ಮಾಡಿರುವ ಉದಾಹರಣೆಗಳು ನಮ್ಮ ಮುಂದಿವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರಥ್ಯದ ನಮ್ಮ ಸರ್ಕಾರ ವಿಶೇಷ ಚೇತನರ ಕಾರ್ಯಕ್ರಮಗಳನ್ನು ಮುಟ್ಟಿಸುತ್ತೇವೆ. ಭಗವಂತನ ಸೃಷ್ಟಿ ನಿಮಗೆ ಸಾಧನೆ ಮಾಡಲು ಪ್ರೇರಣೆಯಾಗಿದೆ. ವಿಘ್ನಗಳನ್ನು ನಿವಾರಿಸುವ ಗಣಪತಿಯೇ ವಿಕಲಚೇತನರಿಗೆ ಸ್ಫೂರ್ತಿ. ಹಾಗಾಗಿ ಅವರಲ್ಲಿ ಆತ್ಮಬಲ ಹೆಚ್ಚಿದೆ. ವಿಕಲಚೇತನರ ಸಾಧನೆ ಇತಿಹಾಸದ ಪುಟಗಳಲ್ಲಿದ್ದು, ಅವರ ಅಭಿವೃದ್ಧಿಗೆ ಹಾಗೂ ಕಲ್ಯಾಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ಲಕ್ಷ್ಮೀ ಹೆಬ್ಬಾಳಕರ್‌ ಕ್ರಿಯಾಶೀಲ ಸಚಿವೆ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ತುಂಬಾ ಕ್ರಿಯಾಶೀಲರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವಿಶೇಷ ಚೇತನರಿಗೆ ಇಲಾಖೆಯಲ್ಲಿರುವ ಸವಲತ್ತುಗಳನ್ನು ಸೂಕ್ತ ರೀತಿಯಲ್ಲಿ ತಲುಪಿಸುತ್ತಿದ್ದಾರೆ. ಇಲಾಖೆಯಲ್ಲಿ ಸಾಕಷ್ಟು ಬದಲಾವಣೆ, ಸುಧಾರಣೆ ತರಲು ಕೆಲಸ ಮಾಡುತ್ತಿದ್ದಾರೆ ಎಂದು ಸಚಿವರ ಕಾರ್ಯವನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಶ್ಲಾಘಿಸಿದರು.

ವಿಶೇಷಚೇತನರ ಪಾಲಿಗೆ ನಮ್ಮದು ಹೃದಯವಂತ ಸರ್ಕಾರ

ರಾಜ್ಯದಲ್ಲಿ ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡುತ್ತಿದ್ದು, ರಾಜ್ಯ ಸರ್ಕಾರ ವಿಕಲಚೇತನರ ಪಾಲಿಗಂತೂ ಹೃದಯವಂತ ಸರ್ಕಾರವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಹೇಳಿದ್ದಾರೆ.

ಇಂದು ಸರ್ಕಾರ ಬಹಳಷ್ಟು ಕಾರ್ಯಕ್ರಮಗಳನ್ನು ನಮ್ಮ ಇಲಾಖೆ ವತಿಯಿಂದ ವಿಕಲಚೇತನರಿಗೆ ಕೊಟ್ಟಿದೆ. ನಮ್ಮ ಉದ್ದೇಶ; ಗುರಿ ಇಷ್ಟೇ, ವಿಶೇಷಚೇತನರ ಮೂಲಭೂತ ಹಕ್ಕುಗಳನ್ನು ರಕ್ಷಿಸುವುದು. ದೇಶದಲ್ಲಿ ಎಲ್ಲರಿಗೂ ಸಂವಿಧಾನಬದ್ಧವಾದ ಹಕ್ಕುಗಳಿವೆ. ಎಲ್ಲರಿಗೂ ಸಮಾನವಾದ ಅವಕಾಶಗಳಿವೆ. ಅದರಲ್ಲೂ ವಿಶೇಷವಾಗಿ ವಿಶೇಷಚೇತನರಿಗೂ ಅನ್ವಯಿಸುತ್ತವೆ. ಸರ್ಕಾರ ಎಲ್ಲರಿಗೂ ಸಮಾನವಾದ ಅವಕಾಶಗಳನ್ನು ಕಲ್ಪಿಸಲು ಮುಂದಾಗಿದೆ ಎಂದರು.

ಸಂವಿಧಾನಬದ್ಧವಾದ ಹಕ್ಕನ್ನು ಎಲ್ಲರಿಗೂ ಸಮಾನವಾದ ಅಧಿಕಾರಗಳು, ಸಮಾನವಾದ ಅವಕಾಶಗಳನ್ನು, ಅದರಲ್ಲೂ ವಿಶೇಷವಾಗಿ ವಿಕಲಚೇತನರಿಗೂ ನೀಡುವುದೇ ನಮ್ಮ ಸರ್ಕಾರದ ಉದ್ದೇಶ. ಇಲಾಖೆಯ ಅನೇಕ ಕಾರ್ಯಕ್ರಮಗಳನ್ನು ವಿಕಲಚೇತನರಿಗೆ ನೀಡಲಾಗಿದೆ. ಇಲಾಖೆಯ ಎಲ್ಲ ಕಾರ್ಯಕ್ರಮಗಳನ್ನು ಕೈಪಿಡಿಯನ್ನು ಬಿಡುಗಡೆಗೊಳಿಲಾಗಿದೆ.

ಮುಖ್ಯಮಂತ್ರಿಗಳು ಹಾಗೂ ನಮ್ಮ ಸರ್ಕಾರಕ್ಕೆ ಒಳ್ಳೆಯ ಹೃದಯವಿದೆ; ವಿಕಲಚೇತನರ ಬಗ್ಗೆ ಅತ್ಯಂತ ಗೌರವವಿದೆ. ವಿಕಲಚೇತರಿಗೆ ಏನೆಲ್ಲ ಅನುಕೂಲಗಳನ್ನು ಮಾಡಬೇಕೆನ್ನುವುದನ್ನು ಮನಗಂಡಿದೆ ಎಂದು ಹೇಳಿದರು.

ವಿಕಲಚೇತನರ ಬಗ್ಗೆ ವಿಶೇಷ ಕಾಳಜಿ, ಆಸಕ್ತಿ ಸರ್ಕಾರಕ್ಕಿದೆ, ಹಾಗೆಯೇ, ವಿಕಲಚೇತನರನ್ನು ನೋಡಿಕೊಳ್ಳುವ ತಾಯಿಂದಿರರು, ಪೋಷಕರಾದ ಆರೈಕೆದಾರರಿಗೆ ಸರ್ಕಾರ ತಿಂಗಳಿಗೆ ಒಂದು ಸಾವಿರ ರೂಪಾಯಿ ಮಾಸಾಶನ ನೀಡುತ್ತಿದೆ. ಇದು ದೇಶದ ಇತಿಹಾಸದಲ್ಲೇ ಪ್ರಥಮ ಬಾರಿಗೆ ನಮ್ಮ ಸರ್ಕಾರ ಆರೈಕೆದಾರರಿಗೆ ಮಾಸಾಶನ ನೀಡುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ವಿಕಲಚೇತನರು ಸಮಾಜಕ್ಕೆ ಆದರ್ಶಪ್ರಾಯರು, ಏಕೆಂದರೆ ಆ ಭಗವಂತ ಬಹಳಷ್ಟು ಒಳ್ಳೆಯ ಆರೋಗ್ಯವನ್ನು, ಒಳ್ಳೆಯ ಜೀವನವನ್ನು ನೀಡಿದ್ದರೂ ಕೆಲವೊಂದು ಸಂದಿಗ್ಧ ಸಂದರ್ಭದಲ್ಲಿ ತಲೆಯ ಮೇಲೆ ಕೈ ಇಟ್ಟುಕೊಳ್ಳುತ್ತಾರೆ. ನಮಗೆಲ್ಲ, ನಮ್ಮಂತಹ ಎಲ್ಲರಿಗೂ ವಿಕಲಚೇತನರು ಆದರ್ಶರಾಗಿದ್ದಾರೆ, ಸಮಾಜದ ಪ್ರತಿಯೊಂದು ಕ್ಷೇತ್ರದಲ್ಲೂ; ಎಲ್ಲರನ್ನೂ ಮೀರಿ ಸಾಧನೆ ಮಾಡಿದ್ಧಾರೆ. ಎಲ್ಲರಿಗೂ ಪ್ರೇರಣೆಯಾಗಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಾಲಭವನ ಅಧ್ಯಕ್ಷ ಬಿ.ಆರ್.ನಾಯ್ಡು, ಧಾರವಾಡದ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕ ಟಿ. ರಾಘವೇಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕ ಸಿದ್ದೇಶ್ವರ್, ವಿಶೇಷ ಆಹ್ವಾನಿತರಾದ ಇಂದುಮತಿ ರಾವ್, ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ, ಸಚಿವರ ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್.ವಿಶ್ವನಾಥ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ರಾಜಕೀಯ

ಕರ್ನಾಟಕದ ರೇಲ್ವೆ ಯೋಜನೆಗಳಿಗೆ ವೇಗ ನೀಡಲು ಕೇಂದ್ರವನ್ನು ಒತ್ತಾಯಿಸಿದ ಹೆಚ್.ಡಿ.ದೇವೇಗೌಡ

ಕರ್ನಾಟಕದ ರೇಲ್ವೆ ಯೋಜನೆಗಳಿಗೆ ವೇಗ ನೀಡಲು ಕೇಂದ್ರವನ್ನು ಒತ್ತಾಯಿಸಿದ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಹಾಗೂ ನೆನೆಗುದಿಗೆ ಬಿದ್ದಿರುವ ರೇಲ್ವೆ ಯೋಜನೆಗಳನ್ನು ಆದ್ಯತೆಯ ಮೇರೆಗೆ ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ರಾಜ್ಯಸಭೆಯಲ್ಲಿ ರೇಲ್ವೆ

[ccc_my_favorite_select_button post_id="104046"]
ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಮನವಿ

[ccc_my_favorite_select_button post_id="103998"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ (60 ವರ್ಷ), ಭರತ್ (35 ವರ್ಷ) ಆತ್ಮಹತ್ಯೆಗೆ ಶರಣಾದ ತಾಯಿ-ಮಗ ಎಂದು ಗುರುತಿಸಲಾಗಿದೆ. ಭರತ್ ಕಳೆದ

[ccc_my_favorite_select_button post_id="104008"]
Doddaballapura: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.. ಓರ್ವನ ಸ್ಥಿತಿ ಗಂಭೀರ

Doddaballapura: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.. ಓರ್ವನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ತಾಲೂಕಿನ ಅಪಘಾತ (Accident) ಪ್ರಕರಣಗಳು ಸಂಖ್ಯೆ ಒಂದೇ ಸಮನೇ ಹೆಚ್ಚಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕವನ್ನು ಹೆಚ್ಚಿಸಿದೆ. ಇಂದು ಬೆಳಗ್ಗೆಯಿಂದ ದೊಡ್ಡಬಳ್ಳಾಪುರ ತಾಲೂಕಿನ ಮೂರು ಅಪಘಾತಗಳು ವರದಿಯಾಗಿದ್ದು, ಓರ್ವ ಸಾವನಪ್ಪಿದ್ದರೆ, ಹಲವರು ಗಾಯಗೊಂಡಿದ್ದಾರೆ. ಇದೀಗ ಕೆಲವು

[ccc_my_favorite_select_button post_id="104042"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!