Site icon Harithalekhani

ಇಂದಿನಿಂದ ರಾಗಿ ಖರೀದಿ ನೋಂದಣಿ ಆರಂಭ: ದೇವನಹಳ್ಳಿಯಲ್ಲಿ ಚಾಲನೆ..! (Millet)

ಬೆಂಗಳೂರು ಗ್ರಾಮಾಂತರ ಜಿಲ್ಲೆ: 2024-25 ನೇ ಸಾಲಿನ ಸರ್ಕಾರದ ಲ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ರಾಗಿ (Millet) ಖರೀದಿ ಮಾಡಲು ಡಿ.04 ರಂದು ಬೆಳಿಗ್ಗೆ 10.00 ಗಂಟೆಗೆ ದೇವನಹಳ್ಳಿ ಟೌನ್ ನ ವಿಜಯಪುರ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಗೊದಾಮು ಇಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಚಾಲನೆ ನೀಡಲಿದ್ದಾರೆ.

ಪ್ರತಿ ಕ್ವಿಂಟಾಲ್ ರಾಗಿಗೆ ರೂ. 4290 ರೂಪಾಯಿ ನಿಗದಿಪಡಿಸಲಾಗಿದೆ. ಪ್ರತಿ ರೈತರಿಂದ ಒಂದು ಎಕರೆಗೆ 10.00 ಕ್ವಿಂಟಾಲ್ ನಂತೆ ಗರಿಷ್ಠ 20.00 ಕ್ವಿಂಟಾಲ್‌ಗಳನ್ನು ಮೀರದಂತೆ ಹಾಗೂ FAQ ಮಾನದಂಡಗಳಂತೆ ಉತ್ತಮ ಗುಣಮಟ್ಟದ ರಾಗಿಯನ್ನು ಮಾತ್ರ ಖರೀದಿಸಲಾಗುವುದು.

ಪ್ರಸಕ್ತ ಸಾಲಿನ ರಾಗಿ ಖರೀದಿ ಪ್ರಕ್ರಿಯೆಯಲ್ಲಿ ಎರಡು ಬಾರಿ ಬಯೋಮೆಟ್ರಿಕ್ ಬಳಕೆಯಾಗುತ್ತದೆ ಒಂದು ಬಾರಿ ನೊಂದಣಿ ವೇಳೆಯಲ್ಲಿ ಇನ್ನೊಂದು ಬಾರಿ ಖರೀದಿ ವೇಳೆಯಲ್ಲಿ ಹಾಗಾಗಿ ನೊಂದಾಯಿತ ರೈತರೇ ರಾಗಿ ಖರೀದಿ ಕೇಂದ್ರಗಳಿಗೆ ರಾಗಿ ತರುವುದು ಕಡ್ಡಾಯವಾಗಿರುತ್ತದೆ.

ನೊಂದಣಿಯಾದ ರೈತರಿಂದ ಮಾತ್ರ ರಾಗಿ ಖರೀದಿ ಮಾಡಲಾಗುವುದು. ಜನವರಿ ಮಾಹೆಯಿಂದ ರಾಗಿ ಖರೀದಿ ಪ್ರಕ್ರಿಯೆ ಪ್ರಾರಂಭಿಸಿ ಮಾರ್ಚ್ 31 ಕ್ಕೆ ಅಂತ್ಯಗೊಳಿಸಲಾಗುವುದು.

ಕೃಷಿ ಇಲಾಖೆಯಿಂದ ರೈತರಿಗೆ ನೀಡಲಾಗಿರುವ “ಫೂಟ್ಸ್” ಐ.ಡಿ.(FRUITS) ಸಂಖ್ಯೆಯನ್ನು ಪಡೆದು ರಾಗಿ ಖರೀದಿ ಕೇಂದ್ರದಲ್ಲಿ ನೊಂದಾಯಿಸಿಕೊಳ್ಳುವುದು.

ಫೂಟ್ಸ್ ಐ.ಡಿ. ಇಲ್ಲದ ರೈತರ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶ ಇರುವುದಿಲ್ಲ ಹಾಗೂ ನೊಂದಾಣಿ ಸಮಯದಲ್ಲಿ ರೈತರು ತಮ್ಮ ಆಧಾರ್ ಕಾರ್ಡ್ ತರುವುದು ಕಡ್ಡಾಯವಾಗಿರುತ್ತದೆ ಎಂದು ಆಹಾರ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Exit mobile version