Site icon Harithalekhani

ಸ್ಕೂಟರ್ – ಸಿಮೆಂಟ್ ಬಲ್ಕರ್ ಡಿಕ್ಕಿ news update: ಮೃತನ ಗುರುತು ಪತ್ತೆ

ದೊಡ್ಡಬಳ್ಳಾಪುರ news update: ಸಿಮೆಂಟ್ ಬಲ್ಕರ್ ಲಾರಿ ಹಾಗೂ ಸ್ಕೂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ತಾಲೂಕಿನ ವ್ಯಾಪ್ತಿಯ ರಾಜ್ಯ ಹೆದ್ದಾರಿ ಗುಂಡಮಗೆರೆ ಕ್ರಾಸ್ ಪೆಟ್ರೋಲ್ ಬಂಕ್ ಬಳಿ ಇಂದು ಬೆಳಗ್ಗೆ ನಡೆದಿದೆ.

ಮೃತ ಯುವಕನನ್ನು ತರಹುಣಸೆ ಗ್ರಾಮದ ಸಂತೋಷ್ (25 ವರ್ಷ) ಎಂದು ಗುರುತಿಸಲಾಗಿದ್ದು, ವಾಹನದಲ್ಲಿದ್ದ ಮತ್ತೋರ್ವನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಗೌರಿಬಿದನೂರು ಕಡೆಯಿಂದ ಈ ಇಬ್ಬರು ಸ್ಕೂಟರ್ ಸವಾರರು ಬರುತ್ತಿದ್ದ ವೇಳೆ ಸಿಮೆಂಟ್ ಬಲ್ಕರ್ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version