ಮುಡಾ ಕೇಸಿನಲ್ಲಿ ಸಿದ್ದರಾಮಯ್ಯ ಪಾರಾಗಲು ಸಾಧ್ಯವೇ ಇಲ್ಲ: ಹೆಚ್.ಡಿ.ಕುಮಾರಸ್ವಾಮಿ (HD Kumaraswamy)

ಬೆಂಗಳೂರು: ಜಾರಿ ನಿರ್ದೇಶನಾಲಯ (ED) ಸೀಳು ನಾಯಿ ಎಂದು ನಿಂದಿಸಿದ ಸಚಿವ ಕೃಷ್ಣಭೈರೇಗೌಡರನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು, ಈ ಸರಕಾರ ಅಲಿಬಾಬಾ ನಲವತ್ತು ಕಳ್ಳರ ಗುಂಪಿನಂತೆ ಇದೆ ಎಂದು ದೂರಿದರು.

ಅಧಿಕಾರಕ್ಕೆ ಬಂದಾಗಿನಿಂದ 17ರಿಂದ 18 ಎಸ್ ಐಟಿಗಳನ್ನು ರಚನೆ ಮಾಡಿಕೊಂಡು ರಾಜಕೀಯ ಹಗೆತನ ತೋರುತ್ತಿರುವ ವ್ಯಕ್ತಿಗಳನ್ನು ಏನೆಂದು ಕರೆಯಬೇಕು? ಒಬ್ಬ ಸಚಿವರಾಗಿ ಈ ರೀತಿ ಮಾತನಾಡುವುದು ಸರಿಯಲ್ಲ ಎಂದು ಅವರು ತರಾಟೆಗೆ ತೆಗೆದುಕೊಂಡರು.

ಬೆಂಗಳೂರಿನಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ಕೊಟ್ಟ ಕೇಂದ್ರ ಸಚಿವರು; ಇಡಿಯನ್ನು ಸಚಿವ ಕೃಷ್ಣಭೈರೇಗೌಡರು ಸೀಳುನಾಯಿ ಎಂದು ನಿಂದಿಸಿದ್ದಾರೆ. ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ಅವರಿಗೆ ಹ್ಯಾಟ್ಸ್ ಆಫ್ ಮಾಡೋಣ ಎಂದು ಲೇವಡಿ ಮಾಡಿದರು.

ಲೋಕಾಯುಕ್ತ ಅಧಿಕಾರಿಗಳು ಯಾರು? ಸರಕಾರದ ಅಧೀನದಲ್ಲಿ ಬರುವರರು ತಾನೇ? ಇವತ್ತು ಎಷ್ಟು ಜನ ಮಂತ್ರಿಗಳು ಸಮಜಾಯಿಷಿ ಕೊಡುತ್ತಿದ್ದಾರೆ. ಎಲ್ಲರೂ ರಿಲೆಯಲ್ಲಿ ನಿಂತವರಂತೆ ಇಡಿಯನ್ನು ಬೈಯ್ಯುತ್ತಿದ್ದಾರೆ. ತಪ್ಪು ಮಾಡಿದ್ದಾರೆ. ಹತಾಶೆಯಿಂದ ನಿಂದನೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು ಅವರು.

ಕೃಷ್ಣಭೈರೇಗೌಡರು ಇಡಿಯನ್ನು ಸೀಳುನಾಯಿ ಎನ್ನುತ್ತಾರೆ, ಹಾಗಾದರೆ ಅವರ ಸರ್ಕಾರ ರಾಜಕೀಯ ದ್ವೇಷದಿಂದ ರಚನೆ ಮಾಡಿರುವ ಎಸ್ ಐಟಿಗಳನ್ನು ಏನೆಂದು ಕರೆಯಬೇಕು? ಅಧಿಕಾರಿಗಳನ್ನು ಹಾಗೆ ಕರೆಯುವುದು ಸರಿಯೇ? ಮೇಲಿನವರು ಏನು ಹೇಳಿದರೆ ಅದನ್ನು ಅಧಿಕಾರಿಗಳು ಮಾಡುತ್ತಾರೆ. ಹಾಗೆಂದು ಎಸ್ ಐಟಿ ಅವರು ಏನು ಮಾಡಿದ್ದಾರೆ? ಇದುವರೆಗೆ ಎಷ್ಟು ಎಸ್ ಐಟಿ ರಚನೆ ಮಾಡಿದ್ದೀರಿ? 17-18 ಎಸ್ ಐಟಿ ಮಾಡಿದ್ದಾರೆ. ಕೆಲ ಪ್ರಕರಣಗಳ ವಿಷಯದಲ್ಲಿ ಈ ಎಸ್ ಐಟಿ ಹೇಗೆ ನಡೆದುಕೊಂಡಿದೆ ಎನ್ನುವುದು ನನಗೆ ಗೊತ್ತಿದೆ ಎಂದು ಅವರು ಕಿಡಿಕಾರಿದರು.

ಹಾಸನದ ಪ್ರಕರಣಕ್ಕೆ ಸಂಬಂಧಿಸಿ ವಕೀಲ ದೇವರಾಜೇಗೌಡ ಅವರು ಆಡಿಯೋ ರಿಲೀಸ್ ಮಾಡಿದ್ದರು. ಆಡಿಯೋದಲ್ಲಿ ಡಿಕೆ ಶಿವಕುಮಾರ್ ಏನೇನು ಹೇಳಿದರು ಎನ್ನುವುದನ್ನು ಇಡೀ ದೇಶವೇ ಕೇಳಿಸಿಕೊಂಡಿದೆ. ಹಾಸನದಲ್ಲಿ ಅದೇನೋ ಸಮಾವೇಶ ಮಾಡುತ್ತಿದ್ದಾರಂತೆ. ಸಾಂತ್ವನ ಹೇಳುವುದಕ್ಕೆ ಹೋಗುತ್ತಾರಂತೆ. ಯಾರಿಗೆ ಸಾಂತ್ವನ ಹೇಳ್ತೀಯಪ್ಪ? ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಅ ಹೆಣ್ಣು ಮಕ್ಕಳ ಫೋಟೋ ಹಾಕಿ ಬೀದಿ ಬೀದಿಗಳಲ್ಲಿ ಪ್ರಚಾರ ಮಾಡಿದರಲ್ಲವೇ? ಯಾರಾದರೂ ಒಬ್ಬರನ್ನಾದರೂ ಬಂಧಿಸಿದ್ದೀರಾ ಇವರು? ಆ ವಿಡಿಯೋ ಹರಿಯಬಿಟ್ಟವರನ್ನು ಅರೆಸ್ಟ್ ಮಾಡಿದಿರಾ? ಇದು ನಿಮ್ಮ ಎಸ್ ಐಟಿ ತನಿಖೆನಾ? ಇದೆಲ್ಲದ್ದಕ್ಕೂ ಕಾಲ ಒಂದು ದಿನ ಉತ್ತರ ಕೊಡುತ್ತದೆ.

ಸತ್ಯಗಳು ಹೊರಗೆ ಬರುವುದು ನಿಶ್ಚಿತ. ಕೃಷ್ಣಭೈರೇಗೌಡರೇ ನೀವು ಹೇಗೆ ನಡೆದುಕೊಳ್ತೀರಾ. ನಿಮ್ ಸರಕಾರ ಹೇಗೆ ನಡೆದುಕೊಳ್ತಿದೆ? ಸಚಿವ ಪರಮೇಶ್ವರ್ ಹೇಳಿಕೆ ನೋಡಿದೆ‌. ಇವರನ್ನು ದೇವರೇ ಕಾಪಾಡಬೇಕು. ಹಾಗಲ ಕಾಯಿಗೆ ಬೇವಿನ ಕಾಯಿ ಸಾಕ್ಷಿ ಎಂಬಂತೆ ಆಗಿದೆ ಇವರದ್ದು ಎಂದು ಅವರು ತರಾಟೆಗೆ ತೆಗೆದುಕೊಂಡರು.

ಸಿದ್ದರಾಮಯ್ಯ ಪಾರಾಗಲು ಸಾಧ್ಯವೇ ಇಲ್ಲ

ಮುಡಾ ಕೇಸಿನಲ್ಲಿ ಸಿದ್ದರಾಮಯ್ಯ ಅವರು ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಅಲ್ಲಿ ಏನೆಲ್ಲಾ ನಡೆದಿದೆ ಎಂಬುದು ಹಾದಿ ಬೀದಿಯಲ್ಲಿ ಚರ್ಚೆ ನಡೆಯುತ್ತಿದೆ. ಈ‌ ಸರಕಾರ ಮತ್ತು ಸಚಿವರು ಆಲಿಬಾಬಾ 40 ಕಳ್ಳರಿ ರೀತಿ ಇದ್ದಾರೆ. ಮುಡಾ ಅಕ್ರಮದ ಬಗ್ಗೆ ಜಾರಿ ನಿರ್ದೇಶನಾಲಯ ಲೋಕಾಯುಕ್ತಗೆ ಪತ್ರ ಬರೆದಿದೆ, ಸರಿ. ಇಡಿ ಪತ್ರಕ್ಕೂ ಕೇಂದ್ರ ಸರಕಾರಕ್ಕೂ ಏನ್ ಸಂಬಂಧ? ಮುಡಾ ಹಗರಣದ ಬಗ್ಗೆ ಹೈಕೋರ್ಟ್ ನಲ್ಲಿ ತನಿಖೆಗೆ ಆದೇಶ ಆಗಿದೆ. ಅದರ ಮೇಲೆ ತನಿಖೆ ನಡೆಯಿತ್ತಿದೆ. ಇಡಿಯವರಿಗೆ ಕೇಂದ್ರ ಸೂಚನೆ ಕೊಟ್ಟಿಲ್ಲ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಮುಡಾ ಕೇಸಿನಲ್ಲಿ ರಾಜ್ಯಪಾಲರಿಗೆ ದೂರು ನೀಡಿದವರೇ ಇಡಿಗೂ ದೂರು ಕೊಟ್ಡಿದ್ದಾರೆ. ಮುಡಾದಲ್ಲಿ‌ ಹಣಕಾಸು ವ್ಯವಹಾರ ನಡೆದಿರುವ ಹಿನ್ನಲೆಯಲ್ಲಿ ದೂರು ನೀಡಿದ್ದಾರೆ. ಅದರ ಮೇಲೆ ಇಡಿ ತನಿಖೆ ನಡೆಸಿದೆ. ಮಾಹಿತಿ ಕೊಟ್ಟಿದೆ. ಇದರಲ್ಲಿ ಕೇಂದ್ರವನ್ನು ದೂರಿದರೆ ಉಪಯೋಗ ಏನು? ಎಂದು ಕೇಳಿದರು ಸಚಿವರು.

ಸಿಎಂ-ಡಿಸಿಎಂ ನಡುವೆ ಪವರ್ ಶೇರಿಂಗ್ ಫೈಟ್ ವಿಚಾರದ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ ಅವರು; ನೋಡಿ ರಾಷ್ಟ್ರೀಯ ಪಕ್ಷದಲ್ಲಿ ಇಷ್ಟೆಲ್ಲಾ ನಡೆಯುತ್ತಿದೆ. ರಾಷ್ಟ್ರೀಯ ವಾಹಿನಿಯಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿದೆ ಎಂದು ಸ್ವತಃ ಡಿಕೆ ಶಿವಕುಮಾರ್ ಹೇಳಿಕೆ ಕೊಟ್ಟಿದ್ದಾರೆ. ಅಂತಹ ಒಪ್ಪಂದ ಆಗಿಲ್ಲ ಎಂದು ಈಗ ಸಿದ್ದರಾಮಯ್ಯ ಹೇಳಿಕೆ ಕೊಡುತ್ತಿದ್ದಾರೆ. ಇದು ಎಲ್ಲೆಲ್ಲಿಗೆ ಹೋಗಿ ಇದು ನಿಲ್ಲುತ್ತದೆ ಎಂದು ನೋಡೋಣ ಎಂದು ಟಾಂಗ್ ಕೊಟ್ಟರು.

ಸಿದ್ದರಾಮಯ್ಯ ನಮ್ಮ ಬಗ್ಗೆ ಮಾತನಾಡುವುದಕ್ಕೆ ಯಾವ ನೈತಿಕತೆ ಇಟ್ಟುಕೊಂಡಿದ್ದಾರೆ? ಪರಿಹಾರ ಅಂತ 14 ಸೈಟ್ ಪಡೆದಿರೋದೆ ಕಾನೂನುಬಾಹಿರ. ಬಾಮೈದ ಕೊಂಡುಕೊಂಡಿರೋದೆ ಕಾನೂನುಬಾಹಿರ.

ಸಿದ್ದರಾಮಯ್ಯ ಈ ಕೇಸ್ ನಲ್ಲಿ ತಪ್ಪಿಸಿಕೊಳ್ಳೋಕೆ ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ. ಕಾನೂನು ಎಲ್ಲರಿಗೂ ಒಂದೇ. ಕಾನೂನು ವ್ಯಾಪ್ತಿಯಲ್ಲಿ ತಪ್ಪು ಮಾಡಿದರೆ ಶಿಕ್ಷೆ ಅನುಭವಿಸಬೇಕು ಎಂದು ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ರಾಜಕೀಯ

ದೊಡ್ಡಬೆಳವಂಗಲ VSSN: ಕಾಂಗ್ರೆಸ್‌ಗೆ ಅಧ್ಯಕ್ಷ, ಬಿಜೆಪಿಗೆ ಉಪಾಧ್ಯಕ್ಷ..!

ದೊಡ್ಡಬೆಳವಂಗಲ VSSN: ಕಾಂಗ್ರೆಸ್‌ಗೆ ಅಧ್ಯಕ್ಷ, ಬಿಜೆಪಿಗೆ ಉಪಾಧ್ಯಕ್ಷ..!

ದೊಡ್ಡಬೆಳವಂಗಲ ವ್ಯವಸಾಯ ಸೇವಾ ಸಹಕಾರ ಸಂಘದ (VSSN) ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲಾಗಿದೆ.

[ccc_my_favorite_select_button post_id="102385"]
ಸಿದ್ದು, ಬಿಎಸ್‌ವೈಗೆ ನಿರ್ಣಾಯಕ ದಿನ..!

ಸಿದ್ದು, ಬಿಎಸ್‌ವೈಗೆ ನಿರ್ಣಾಯಕ ದಿನ..!

ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠವು ಆದೇಶವನ್ನು ಕಾಯ್ದಿರಿಸಿದ್ದು ಶುಕ್ರವಾರ ಈ ಎರಡೂ ಅರ್ಜಿಗಳ ಆದೇಶ ಹೊರಬೀಳಲಿದೆ. Cmsiddaramaiah

[ccc_my_favorite_select_button post_id="102376"]
Video: ಸಂಕೋಲೆಗಳಲ್ಲಿ ಕಟ್ಟಿ ಭಾರತೀಯರ ಅವಮಾನಿಸಿದ ಮೋದಿ ಮಿತ್ರ ಟ್ರಂಪ್ ಸರ್ಕಾರ.. ವ್ಯಾಪಕ ಆಕ್ರೋಶ

Video: ಸಂಕೋಲೆಗಳಲ್ಲಿ ಕಟ್ಟಿ ಭಾರತೀಯರ ಅವಮಾನಿಸಿದ ಮೋದಿ ಮಿತ್ರ ಟ್ರಂಪ್ ಸರ್ಕಾರ.. ವ್ಯಾಪಕ

ವೈರಲ್ ವಿಡಿಯೋದಲ್ಲಿ ಅಕ್ರಮ ವಲಸಿಗರ ಕಾಲನ್ನು ಸಂಕೋಲೆಗಳಲ್ಲಿ ಕಟ್ಟಿರುವುದು ಹಾಗೂ ಕೈಗಳನ್ನು ಕೋಳಗಳಿಂದ ಬಂಧಿಸಿರುವುದು ಸ್ಪಷ್ಟವಾಗಿ ಕಂಡುಬಂದಿದೆ. Video

[ccc_my_favorite_select_button post_id="102365"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ಹೊಸಕೋಟೆಯಲ್ಲಿ ಪುಷ್ಪ ಸಿನಿಮಾ ಮಾದರಿ ಕ್ರೈಮ್..! 180 ತುಂಡು ರಕ್ತ ಚಂದನ ವಶ

ಹೊಸಕೋಟೆಯಲ್ಲಿ ಪುಷ್ಪ ಸಿನಿಮಾ ಮಾದರಿ ಕ್ರೈಮ್..! 180 ತುಂಡು ರಕ್ತ ಚಂದನ ವಶ

ಆಂಧ್ರ ಪೊಲೀಸರ ತನಿಖೆಗೆ ಹೊಸಕೋಟೆ ಪೊಲೀಸರು ಸಾಥ್ ನೀಡಿದ್ದಾರೆ. ಪತ್ತೆಯಾದ ರಕ್ತಚಂದನದ ತುಂಡುಗಳನ್ನು ಆಂಧ್ರ ಪೊಲೀಸರು ತಮ್ಮ ರಾಜ್ಯಕ್ಕೆ ರವಾನಿಸಿದ್ದಾರೆ. (Hosakote)

[ccc_my_favorite_select_button post_id="102381"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!