ಶುಕ್ರವಾರ, ಡಿಸೆಂಬರ್ 06, 2024, ದೈನಂದಿನ ರಾಶಿ ಭವಿಷ್ಯ: Astrology..
ಮೇಷ: ಮಾತು ಆಡಿದರೆ ಹೋಯಿತು ಎಂಬ ನಾಣ್ಣುಡಿ ನೆನಪಿರಲಿ. ಅತಿ ಎಚ್ಚರಿಕೆಯಿಂದ ಮಾತಾಡಿ. ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ.
ವೃಷಭ: ವಿಳಾಸ ತಿಳಿಯದ ಸ್ಥಳಕ್ಕೆ ಹೋಗಿ ಸಿಲುಕಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಎಚ್ಚರ. ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ.
ಮಿಥುನ: ನೀವೇ ತೋಡಿದ ಬಾವಿಗೆ ನೀವೇ ಬಿದ್ದಂತೆ ಮಾಡಿದ ತಪ್ಪಿಗೆ ಶಿಕ್ಷೆ ಅನುಭವಿಸುವಿರಿ. ಮಹಿಳೆಯರ ಇಷ್ಟಾರ್ಥ ಸಿದ್ಧಿಸುವದು.ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ. ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು. ನ್ಯಾಯಾಲಯದಲ್ಲಿ ಜಯ ದೊರೆಯುವುದು. ವಿದ್ಯೆಯಲ್ಲಿ ಸಾಧನೆ ಇರುವದು.
ಕಟಕ: ಹೊಸ ವ್ಯಕ್ತಿಗಳ ಪರಿಚಯ ನಿಮ್ಮ ಪ್ರಸಿದ್ದಿಯನ್ನು ಇನ್ನಷ್ಟು ವಿಸ್ತಾರಗೊಳಿಸಲಿದೆ. ಶುಭದಿನ. ಮಾತಿನಂತೆಯೇ ಎಲ್ಲವೂ ನಡೆಯುವದಿಲ್ಲ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಉದಯೋನ್ಮುಖ ಪ್ರತಿಭೆಗಳಿಗೆ ಅವಕಾಶ ದೊರೆಯುವದು.ಲಾಭದಾಯಕ ಹುದ್ದೆ ದೊರೆಯುವದು.
ಸಿಂಹ: ಮಾಡುವ ಕೆಲಸದಲ್ಲಿ ಶ್ರದ್ಧೆ ಇದ್ದಲ್ಲಿ, ಸರಿಯಾದ ಗುರಿ ಮುಟ್ಟುವಿರಿ. ಸಮಾಧಾನ. ಪೂರ್ವತಯಾರಿ ಇಲ್ಲದ ಕೆಲಸವನ್ನೂ ಸಕಾಲಕ್ಕೆ ಮುಗಿಸುವಿರಿ. ಅನಿಯಮಿತ ಬದುಕು ಇರುವದು. ಮೇಲಧಿಕಾರಿಗಳ ಒತ್ತಡ ಬೇಸರ ತರುವದು. ಕಾರ್ಯಕ್ಷೇತ್ರದಲ್ಲಿ ಗೌರವ ಪ್ರಾಪ್ತಿಯಾಗುವದು. ಶ್ರಮಕ್ಕೆ ತಕ್ಕ ಲಾಭ ದೊರೆಯುವದು.
ಕನ್ಯಾ: ಹಲವು ದಿನಗಳ ಬಯಕೆ ಈಡೇರಲಿದ್ದು, ವಾಹನದ ವಾರಸುದಾರರಾಗುವಿರಿ. ಅನಿಸಿಕೆಗಿಂತ ವಾಸ್ತವ ಬೇರೆ ಇರುವದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವದು ಒಳ್ಳೆಯದು. ಧನಹಾನಿಯ ಸಂಭವವಿದೆ.
ತುಲಾ: ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಇರಲಿ. ಮೊದಲೇ ನೀವು ಚಿಕಿತ್ಸೆ ಪಡೆಯುತ್ತಿರುವವರು. ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಸಯೆಗಳು ಪರಿಹಾರವಾಗುವವು.
ವೃಶ್ಚಿಕ: ಹವಾಮಾನ ವೈಪರೀತ್ಯದಿಂದ ನಿಮ್ಮ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಲಿದೆ. ಎಚ್ಚರವಿರಲಿ. ಹೊಸ ಯೋಜನೆಗೆ ಸಂಬಂಧಿಸಿದಂತೆ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ.
ಧನಸ್ಸು: ಅನವಶ್ಯಕ ಚಿಂತೆಯಿಂದ ಮಾನಸಿಕ ಕಿರಿಕಿರಿ ಅತಿ ಅನುಭವಿಸುವಿರಿ ಎಚ್ಚರ. ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವದು. ವಿದೇಶ ಪ್ರಯಾಣದ ಯೋಗವಿದೆ.
ಮಕರ: ಷೇರು ವ್ಯವಹಾರದಲ್ಲಿ ತೊಡಗಿಸಿಕೊಂಡವರಿಗೆ ಅಲ್ಪ ಪ್ರಮಾಣದಲ್ಲಿ ಲಾಭವಾಗಲಿದೆ. ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು
ಕುಂಭ: ದೂರದ ಬಂಧುಗಳ ಆಗಮನದಿಂದ ಮನೆಯಲ್ಲಿ ಸಂತಸದ ವಾತಾವರಣ. ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವದು. ಉತ್ಸಾಹ ಮೂಡುವದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ.
ಮೀನ: ವ್ಯಾಪಾರದಲ್ಲಿ ನಷ್ಟ ಉಂಟಾಗ ಲಿದ್ದು, ಕೆಟ್ಟ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ. ಮಿತ್ರರ ಸಕಾರಾತ್ಮಕ ಧೋರಣೆಯಿಂದ ವ್ಯವಹಾರಿಕ ಅಭಿವೃದ್ಧಿ ಕಂಡು ಬರುವದು. ಕುಟುಂಬದ ಜವಾಬ್ದಾರಿ ಹೆಚ್ಚುವುದು. ಮಕ್ಕಳ ವಿದ್ಯಾಬ್ಯಾಸ ಹಾಗೂ ಆರೋಗ್ಯದ ಚಿಂತೆ ಕಂಡುಬರುವದು. ನಿರ್ಲಕ್ಷತೆ, ಕೆಲಸ ಮುಂದೂಡುವ ಸ್ವಭಾವದಿಂದ ಹಾನಿ ಸಂಭವ.
ರಾಹುಕಾಲ: 11:03 ರಿಂದ 12:29
ಗುಳಿಕಕಾಲ: 08:11 ರಿಂದ 09:37
ಯಮಗಂಡಕಾಲ: 03:21 ರಿಂದ 04:47