![Channel Gowda](https://www.harithalekhani.com/wp-content/uploads/2025/02/IMG-20250204-WA0002.jpg)
ಬೆಂಗಳೂರು: ಅಶ್ಲೀಲ ಸಂದೇಶ ಕಳುಹಿಸಿದ ವ್ಯಕ್ತಿಯೋರ್ವನ ಹತ್ಯೆ ಆರೋಪದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ನಟ ದರ್ಶನ್ (Darshan) ಅವರ ಜಾಮೀನು ಅವಧಿ ವಿಸ್ತರಣೆ ಕೋರಿ ವಕೀಲರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
![hulukudi maharathotsava](https://www.harithalekhani.com/wp-content/uploads/2025/02/IMG-20250205-WA0002.jpg)
ಶಸ್ತ್ರಚಿಕಿತ್ಸೆಗಾಗಿ ಮೆಡಿಕಲ್ ಬೇಲ್ ಪಡೆದಿರುಚ ದರ್ಶನ್ ಜಾಮೀನು ಅವಧಿ ವಿಸ್ತರಣೆ ಮಾಡಲು ಮಧ್ಯಂತರ ಆದೇಶ ನೀಡಬೇಕೆಂದು ದರ್ಶನ್ ಪರ ವಕೀಲರು ಕೋರ್ಟ್ ಗೆ ಮೊರೆ ಹೋಗಿದ್ದಾರೆ.
ಡಿಸೆಂಬರ್ 10 ರವರೆಗೆ ದರ್ಶನ್ ಗೆ ಮೆಡಿಕಲ್ ಬೇಲ್ ಅವಧಿ ಇದ್ದು ವೈದ್ಯರ ವರದಿ ಆಧರಿಸಿ ಜಾಮೀನು ವಿಸ್ತರಣೆಗೆ ಅರ್ಜಿ ಸಲ್ಲಿಸಲಾಗಿದೆ.
![Hulukudi mahajathre](https://www.harithalekhani.com/wp-content/uploads/2025/02/IMG-20250205-WA0001.jpg)
ಪದೇ ಪದೇ ರಕ್ತದೊತ್ತಡ ಏರುಪೇರಿನಿಂದಾಗಿ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತಿಲ್ಲ ಎಂದು ಈಗಾಗಲೇ ದರ್ಶನ್ ಪರ ವಕೀಲರು ಕೋರ್ಟಿಗೆ ಮಾಹಿತಿ ನೀಡಿದ್ದು, ಶಸ್ತ್ರಚಿಕಿತ್ಸೆ ಮಾಡುವವರೆಗೂ ದರ್ಶನ್ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಲು ಸಾಧ್ಯವಿಲ್ಲ. ಹೀಗಾಗಿ ಬೇಲ್ ಅವಧಿ ವಿಸ್ತರಿಸಲು ಮಧ್ಯಂತರ ಆದೇಶ ನೀಡಬೇಕೆಂದು ವಕೀಲರು ಕೋರ್ಟ್ ಮನವಿ ಮಾಡಿದ್ದಾರೆ.
ಈ ಕುರಿತು ಇಂದು ಮಧ್ಯಾಹ್ನ ವಿಚಾರಣೆ ನಡೆಯಲಿದೆ ಎಂದು ವರದಿಯಾಗಿದೆ.