ಬಳ್ಳಾರಿ: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ (VSK), ಜ್ಞಾನ ಸಾಗರ(ಮುಖ್ಯ ಆವರಣ)ದಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ ಎಂಸಿಎ ಮತ್ತು ಎಂಬಿಎ ಕೋರ್ಸ್ಗಳ ಪ್ರಥಮ ವರ್ಷದ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ವಿವಿಯ ಕುಲಸಚಿವ ರುದ್ರೇಶ್ ಅವರು ತಿಳಿಸಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಎಂಸಿಎ ಮತ್ತು ಎಂಬಿಎ ಕೋರ್ಸ್ಗಳಿಗೆ ಹಂಚಿಕೆಯಾಗಿ ಬಾಕಿ ಉಳಿದ ಸೀಟುಗಳಿಗಾಗಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನಿರ್ವಹಣಾಶಾಸ್ತ್ರ ಅಧ್ಯಯನ ವಿಭಾಗ ಮತ್ತು ಗಣಕ ವಿಜ್ಞಾನ ಅಧ್ಯಯನ ವಿಭಾಗದಲ್ಲಿ ಎಂಬಿಎ ಹಾಗೂ ಎಂಸಿಎ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಡಿ.16 ರೊಳಗಾಗಿ ಆನ್‌ಲೈನ್ ಯುಯುಸಿಎಂಎಸ್ ತಂತ್ರಾಂಶದ ಮೂಲಕ ಮಾತ್ರವೇ ಅರ್ಜಿ ಸಲ್ಲಿಸಬೇಕು.
ಪ್ರವೇಶಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಗಾಗಿ ವಿಶ್ವವಿದ್ಯಾಲಯದ ಅಧಿಕೃತ ಜಾಲತಾಣ www.vskub.ac.in ಗೆ ಭೇಟಿ ನೀಡಬಹುದು.
ಯುಯುಸಿಎಂಎಸ್ (UUCMS) https://uucms.karnataka.gov.in/Login/Index ಮೂಲಕ ಸಲ್ಲಿಸಿದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.