ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ದೊಡ್ಡಬಳ್ಳಾಪುರಕ್ಕೆ ಸಂಬಂಧಿಸಿದ ಪ್ರಶ್ನೆಗಳು ಇಲ್ಲಿವೆ ನೋಡಿ..!| Winter session

ಬೆಳಗಾವಿ: ವಿಧಾನಮಂಡಲದ ಚಳಿಗಾಲದ 11ನೇ ಅಧಿವೇಶನ (Winter session) ಬೆಳಗಾವಿಯ ಸುವರ್ಣ ವಿಧಾನಸೌಧ ದಲ್ಲಿ ಸೋಮವಾರದಿಂದ ಆರಂಭವಾಗಲಿದೆ. ಬೆಳಗ್ಗೆ 11ಕ್ಕೆ ಅಧಿವೇಶನ ಆರಂಭವಾಗಲಿದೆ.

ಮೊದಲಿಗೆ ಸಂತಾಪ ಸೂಚನಾ ನಿರ್ಣಯ ಮಂಡನೆಮಾಡಲಿದ್ದು,ಕಳೆದಅಧಿವೇಶನದಿಂದ ಈಚೆಗೆ ನಿಧನಹೊಂದಿದ ಗಣ್ಯರಿಗೆ ಸಂತಾಪ ಸೂಚಿಸಲಾಗುವುದು.

ಸದನದಲ್ಲಿ ದೊಡ್ಡಬಳ್ಳಾಪುರ ತಾಲೂಕಿಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಬಗರ್ ಹುಕುಂ ಸಮಿತಿಯಲ್ಲಿ ಸ್ವೀಕೃತಗೊಂಡಿರುವ ಅರ್ಜಿಗಳು ಎಷ್ಟು..? ಈ ಪೈಕಿ ಮಂಜೂರಾದ, ವಿಲೇವಾರಿಯಾದ ಹಾಗೂ ತಿರಸ್ಕೃತಗೊಂಡ ಅರ್ಜಿಗಳಷ್ಟು..?

ಮಂಜೂರಾಗಿರುವ ಅರ್ಜಿಗಳ ಪೈಕಿ ಎಷ್ಟು ಅರ್ಜಿಗಳಿಗೆ ಸಾಗುವಳಿ ಚೀಟಿ ವಿತರಿಸಲಾಗಿದೆ; ಸಾಗುವಳಿ ಚೀಟಿ ವಿತರಿಸುವಲ್ಲಿ ವಿಳಂಬವಾಗಲು ಕಾರಣಗಳೇನು..?

ಮಂಜೂರಾಗಿರುವ ಅರ್ಜಿಗಳಿಗೆ ಸಾಗುವಳಿ ಚೀಟಿ ಮತ್ತು ಖಾತೆಯನ್ನು ರೈತರಿಗೆ ಅತೀ ಜರೂರಾಗಿ ನೀಡಲು ಸರ್ಕಾರದಿಂದ ಯಾವ ಕ್ರಮ ಕೈಗೊಳ್ಳಲಾಗುತ್ತಿದೆ..?

ಬಾಕಿಯಿರುವ ಅರ್ಜಿಗಳ ವಿಲೇವಾರಿಗೆ ಸರ್ಕಾರ ಯಾವ ಕ್ರಮ ಕೈಗೊಳ್ಳುತ್ತದೆ; ಯಾವ ಕಾಲಮಿತಿಯೊಳಗೆ ಸಾಗುವಳಿ ಚೀಟಿ ಮತ್ತು ಖಾತೆ ವಿತರಿಸಲಾಗುವುದು.? ಎಂಬುದಾಗಿ ಶಾಸಕ ಧೀರಜ್ ಮುನಿರಾಜು ಕಂದಾಯ ಸಚಿವರನ್ನು ಪ್ರಶ್ನಿಸಲಿದ್ದಾರೆ.

ಉಳಿದಂತೆ ಲಿಖಿತ ಮೂಲಕ ಉತ್ತರಿಸುವ ಪಟ್ಟಿಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಕಳೆದ 3 ವರ್ಷಗಳಿಂದ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡ ಕಾಮಗಾರಿಗಳು ಯಾವುವು..? (ಕಾಮಗಾರಿವಾರು ಸಂಪೂರ್ಣ ಮಾಹಿತಿ ನೀಡುವುದು)

ಕಳೆದ 3 ವರ್ಷಗಳಲ್ಲಿ ಒಟ್ಟು ಎಷ್ಟು ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗಿದೆ ; ಯಾವ ಯಾವ ಗುತ್ತಿಗೆದಾರರಿಗೆ ಎಲ್‌ 1 ನೀಡಲಾಗಿದೆ ; (ಎಲ್ಲಾ ಕಾಮಗಾರಿಗಳ ಎಲ್ 1 ಗುತ್ತಿಗೆದಾರರ ಸಹಿತ ಟೆಂಡ‌ರ್ ಆಗಿರುವ ಮಾಹಿತಿಯನ್ನು ಒದಗಿಸುವುದು).

ಸದರಿ ಕಾಮಗಾರಿಗಳ ಪೈಕಿ ಪೂರ್ಣಗೊಂಡಿರುವ, ಪ್ರಗತಿಯಲ್ಲಿರುವ ಮತ್ತು ಸ್ಥಗಿತಗೊಂಡಿರುವ ಕಾಮಗಾರಿಗಳು ಯಾವುವು (ಕಾಮಗಾರಿವಾರು ವಿವರ ನೀಡುವುದು).

ದೊಡ್ಡಬಳ್ಳಾಪುರ ತಾಲ್ಲೂಕಿನ ಕೆ.ಸಿ.ಪಿ ಸರ್ಕಲ್‌ನಿಂದ ರಂಗಪ್ಪ ಸರ್ಕಲ್‌ವರೆಗೆ ಕಾಮಗಾರಿಯ ಟೆಂಡರ್ ಪಡೆದಿರುವ ಗುತ್ತಿಗೆದಾರರು ಯಾರು..? ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿರುವುದಲ್ಲದೆ ಕಾಮಗಾರಿ ಸ್ಥಗಿತಗೊಂಡಿರುವ ಹಿನ್ನಲೆಯಲ್ಲಿ, ಸದರಿ ಗುತ್ತಿಗೆದಾರಣ ವಿರುದ್ಧ ಸರ್ಕಾರ ಕೈಗೊಂಡಿರುವ ಕ್ರಮಗಳೇನು ? ಎಂಬುದನ್ನು ಲೋಕೋಪಯೋಗಿ ಇಲಾಖೆ ಸಚಿವರನ್ನು ಪ್ರಶ್ನಿಸಿದ್ದಾರೆ.

ಹಾಗೆ ಕಂದಾಯ ಸಚಿವರಿಗೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು ಎಷ್ಟು ಸರ್ಕಾರಿ ಭೂಮಿ ಇದೆ..? ಸದರಿ ಜಮೀನಿನ ವಿಸ್ತೀರ್ಣವೆಷ್ಟು.? ಅನುಭವದಾರರು ಯಾರು.? (ಗ್ರಾಮವಾರು, ಸರ್ವೇ ನಂ. ವಾರು ಸಂಪೂರ್ಣ ವಿವರ ನೀಡುವುದು)

ಕಳೆದ 3 ವರ್ಷಗಳಿಂದ ಎಷ್ಟು ಸರ್ಕಾರಿ ಭೂಮಿಯನ್ನು ಯಾವ ಯಾವ ಉದ್ದೇಶಕ್ಕಾಗಿ ಬೇರೆ ಇಲಾಖೆಗೆ ಹಸ್ತಾಂತರಿಸಲಾಗಿದೆ ಹಾಗೂ ಮೀಸಲಿಡಲಾಗಿದೆ.? (ಇಲಾಖಾವಾರು ವಿವರ ನೀಡುವುದು)

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿರುವ ಎಲ್ಲಾ ಸರ್ಕಾರಿ ಗೋಮಾಳಗಳೆಷ್ಟು..?(ಸಂಪೂರ್ಣ ಹಕ್ಕುದಾರರ ಮಾಹಿತಿ ನೀಡುವುದು)

ಪ್ರಸ್ತುತ ಗೋಮಾಳದ ಸ್ಥಿತಿಗತಿಯೇನು..? ಇದುವರೆಗೂ ಎಷ್ಟು ಗೋಮಾಳವು ಒತ್ತುವರಿಯಾಗಿದೆ ? (ಗೋಮಾಳದ ಒತ್ತುವರಿದಾರರ ಹೆಸರು ಸಹಿತ ಸಂಪೂರ್ಣ ವಿವರ ನೀಡುವುದು ಎಂದು ಪ್ರಶ್ನಿಸಿದ್ದಾರೆ.

ಮುಂಜರಾಯಿ ಇಲಾಖೆ ಸಚಿವರ ಕುರಿತು, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿರುವ ಒಟ್ಟು ಮುಜರಾಯಿ ಇಲಾಖೆಗೆ ಒಳಪಡುವ ಆಸ್ತಿಯೆಷ್ಟು..? (ಹೋಬಳಿವಾರು ಆಸಿ ಸಂಪೂರ್ಣ ವಿವರ ನೀಡುವುದು)

ಈ ವಿಧಾನಸಭಾ ಕ್ಷೇತ್ರದ ದೇವಸ್ಥಾನಗಳಿಗೆ ಹೆಚ್ಚಿನ ಅನುದಿ ನೀಡಲು ಸರ್ಕಾರವು ಕೈಗೊಳ್ಳುವ ಕ್ರಮಗಳೇನು..? ಎಂದು ಶಾಸಕ ಧೀರಜ್ ಮುನಿರಾಜು ಲಿಖಿತ ರೂಪದಲ್ಲಿ ಉತ್ತರವನ್ನು ಕೋರಿದ್ದಾರೆನ್ನಲಾದ ಪಟ್ಟಿ ಸಾಮಾಜಿಕ ಜಾಲತಾಣದಲ್ಲಿ ದೊರೆತಿದೆ.

ರಾಜಕೀಯ

ತಮಿಳುನಾಡು BJP ಅಧ್ಯಕ್ಷ ಸ್ಥಾನದ ರೇಸ್ ನಲ್ಲಿ ನಾನಿಲ್ಲ; ಅಣ್ಣಾಮಲೈ

ತಮಿಳುನಾಡು BJP ಅಧ್ಯಕ್ಷ ಸ್ಥಾನದ ರೇಸ್ ನಲ್ಲಿ ನಾನಿಲ್ಲ; ಅಣ್ಣಾಮಲೈ

ಕೊಯಮತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧ್ಯಕ್ಷ ಹುದ್ದೆಗೆ ನಾನು ಸ್ಪರ್ಧೆ ಮಾಡುವುದಿಲ್ಲ. ನಾವೆಲ್ಲರೂ ಒಗ್ಗಟ್ಟಿನಿಂದ ಪಕ್ಷಕ್ಕೆ Annamalai

[ccc_my_favorite_select_button post_id="104958"]
ಮೈ ಫ್ರೆಂಡ್ ಮೋದಿ ಎನ್ನುತ್ತಲೇ ಭಾರತಕ್ಕೆ ಬರೆ ಎಳೆದ ಟ್ರಂಪ್

ಮೈ ಫ್ರೆಂಡ್ ಮೋದಿ ಎನ್ನುತ್ತಲೇ ಭಾರತಕ್ಕೆ ಬರೆ ಎಳೆದ ಟ್ರಂಪ್

ಇಷ್ಟು ದಿನ ಬಾಯಿ ಮಾತಲ್ಲೇ ಸುಂಕ ಸಂಘರ್ಷದ ಮಾತುಗಳನ್ನು ಆಡುತ್ತಾ ಬಂದಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮಂಗಳವಾರ ಮಧ್ಯರಾತ್ರಿ 2.20 (ಭಾರತೀಯ ಕಾಲಮಾನ) trump

[ccc_my_favorite_select_button post_id="104924"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
Doddaballapura: ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಕಳವು..! Video

Doddaballapura: ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಕಳವು..! Video

ದೇವಾಲಯದ ಬಾಗಿಲು ಮೀಟಿ ಒಳಬಂದಿರುವ ಅಪರಿಚಿತ ದುಷ್ಕರ್ಮಿ, ಹುಂಡಿಯನ್ನು ಹೊಡೆದು ಕಳ್ಳವು ನಡೆಸಿದ್ದಾನೆ ಎನ್ನಲಾಗಿದೆ. Doddaballapura

[ccc_my_favorite_select_button post_id="104979"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!