ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ (SM Krishna) ಅವರು ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ ಸದಾಶಿವನಗರ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಎಸ್ಎಂ ಕೃಷ್ಣ ಅವರ ದರ್ಶನಕ್ಕಾಗಿ ಸದಾಶಿವನಗರದ ನಿವಾಸಕ್ಕೆ ಭೇಟಿ ನೀಡುತ್ತಿದೆ.
ಅಂತೆಯೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಎಸ್ಎಂ ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಈ ವೇಳೆ ಎಸ್ಎಂ ಕೃಷ್ಣ ಅವರ ಪಾರ್ಥಿವ ಶರೀರ ನೋಡಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಬಿಕ್ಕಿಬಿಕ್ಕಿ ಅತ್ತರು.
ಈ ಕುರಿತು ಟ್ವಿಟ್ ಮಾಡಿರುವ ಡಿಕೆ ಶಿವಕುಮಾರ್, ಆತ್ಮೀಯರು, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಸ್.ಎಂ ಕೃಷ್ಣ ಅವರ ಸದಾಶಿವನಗರ ನಿವಾಸಕ್ಕೆ ಇಂದು ಭೇಟಿ ಅಂತಿಮ ದರ್ಶನ ಪಡೆದೆ. ನನ್ನ ರಾಜಕೀಯ ಮಾರ್ಗದರ್ಶಿಗಳಾಗಿದ್ದ ಕೃಷ್ಣ ಅವರ ಜೊತೆ ಕಳೆದ ನೆನಪುಗಳು ಸ್ಮೃತಿಪಟಲದಲ್ಲಿ ಹಾದುಹೋದವು.
ಅವರ ದೂರದೃಷ್ಟಿಯ ನಾಯಕತ್ವ ಹಾಗೂ ಕರ್ನಾಟಕಕ್ಕೆ ನೀಡಿದ ಕೊಡುಗೆಗಳು ಅವಿಸ್ಮರಣೀಯ ಎಂದಿದ್ದಾರೆ.