ದೊಡ್ಡಬಳ್ಳಾಪುರ: ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ (SM Krishna) ಅವರು ಇನ್ನಿಲ್ಲ ಎಂದು ತಿಳಿದು ದುಃಖವಾಯಿತು ಎಂದು ಜೆಡಿಎಸ್ ಹಿರಿಯ ಮುಖಂಡ ಹರೀಶ್ ಗೌಡ ತಿಳಿಸಿದ್ದಾರೆ.
ಎಸ್‌ಎಂ ಕೃಷ್ಣ ಅವರ ಅಗಲಿಕೆ ಕುರಿತು ಸಂತಾಪ ಸೂಚಿಸಿರುವ ಅವರು, ಬೆಂಗಳೂರಿನತ್ತ ವಿಶ್ವವೇ ತಿರುಗಿನೋಡುವಂತೆ ಮಾಡಿದ, IT-BT ನಗರಿಯನ್ನಾಗಿ ಮಾಡಿ ಕರ್ನಾಟಕದ ಆರ್ಥಿಕತೆಗೆ ಬಹು ದೊಡ್ಡ ಕೊಡುಗೆ ನೀಡುವಲ್ಲಿ ಎಸ್.ಎಂ.ಕೃಷ್ಣ ಅವರ ಕೊಡುಗೆ ಅನನ್ಯವಾಗಿದೆ.
ಮುಖ್ಯ ಮಂತ್ರಿಗಳಾಗಿ, ವಿದೇಶಾಂಗ ಸಚಿವರಾಗಿ, ರಾಜ್ಯಪಾಲರಾಗಿ, ವಿಧಾನಪರಿಷತ್, ಲೋಕಸಭೆ ಸದಸ್ಯರಾಗಿ ಅನೇಕ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು.
ರಾಜ್ಯಕ್ಕೆ, ರಾಷ್ಟ್ರಕ್ಕೆ ಮಾಡಿದ ಸೇವೆಗಾಗಿ ಅವರಿಗೆ ದೇಶದ 2ನೇ ಅತ್ಯುಚ್ಚ ನಾಗರಿಕ ಪುರಸ್ಕಾರವಾಗಿರುವ ‘ಪದ್ಮವಿಭೂಷಣ’ ಪ್ರಶಸ್ತಿಗೂ ಭಾಜನರಿಗದ್ದರು.
ಅವರ ರಾಜಕೀಯ ಪಯಣ ಇಂದಿನ ಯುವ ಜನಾಂಗಕ್ಕೆ ಮಾದರಿ ಎಂದರೆ ತಪ್ಪಾಗಲಾರದು.
ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬಸ್ಥರಿಗೆ, ಸ್ನೇಹಿತರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಹರೀಶ್ ಗೌಡ ತಿಳಿಸಿದ್ದಾರೆ.