ದೊಡ್ಡಬಳ್ಳಾಪುರ: ಬೆಂಗಳೂರನ್ನು ಐಟಿ ರಾಜಧಾನಿಯಾಗಿ ಪರಿವರ್ತಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ವ್ಯಕ್ತಿ, ‘ಸಜ್ಜನ’ ಮಾಜಿ ಸಿಎಂ ಎಸ್‌ಎಂ ಕೃಷ್ಣ (SM Krishna) ಅಗಲಿಕೆ ಮನಸ್ಸಿಗೆ ಅಪಾರ ನೋವುಂಟಾಗಿದೆ ಎಂದು ನಗರಸಭೆ ಸದಸ್ಯ ಹೆಚ್‌ಎಸ್ ಶಿವಶಂಕರ್ ಹೇಳಿದ್ದಾರೆ.
ಎಸ್‌ಎಂ ಕೃಷ್ಣ ಅವರ ಅಗಲಿಕೆ ಕುರಿತು ಸಂತಾಪ ಸೂಚಿಸಿ ಮಾತನಾಡಿದ ಅವರು, ಕರ್ನಾಟಕದ ಪ್ರಗತಿಗೆ ಅವರು ಸಾಕಷ್ಟು ಕೊಡುಗೆ ನೀಡಿದ್ದಾರೆ. ಎಸ್.ಎಂ.ಕೃಷ್ಣ ಅವರ ದೂರದೃಷ್ಟಿ ಮತ್ತು ನಾಯಕತ್ವ ನಮ್ಮ ಬೆಂಗಳೂರು ಭಾರತದ ಟೆಕ್ ರಾಜಧಾನಿಯಾಗಲು ಹಾಗೂ ಐಟಿ ಯಶಸ್ಸಿಗೆ ಅಡಿಪಾಯ ಹಾಕಿತು.
ಪಕ್ಷ ಭೇದ ಮಾಡದೇ, ಅಜಾತ ಶತ್ರುವಾಗಿ, ಸಜ್ಜನ ರಾಜಕಾರಣಿಯಾಗಿ ಶ್ರೀಯುತರು ಹೆಸರು ಗಳಿಸಿದ್ದರು. ನಮ್ಮಂತ ಅಪಾರ ಯುವ ಸಮುದಾಯದ ರಾಜಕೀಯಕ್ಕೆ ಮಾದರಿ ವ್ಯಕ್ತಿಯಾಗಿದ್ದರು. ರಾಜಕಾರಣಿಗಳಿಗೆ ಆದರ್ಶವಾಗಿರುವ, ಆಡಳಿತಗಾರರಿಗೆ ಮಾರ್ಗದರ್ಶನವಾಗಿರುವ ಅವರ ಭಾಷೆ, ಮಿತವ್ಯಯದ ಮಾತು, ಅವರ ನಡವಳಿಗೆ ನಮ್ಮ ಯುವ ರಾಜಕಾರಣಿಗಳಿಗೆ ಅತ್ಯಂತ ಅವಶ್ಯವಿದೆ. ಅವರು ಕರ್ನಾಟಕದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ.
ಕೃಷ್ಣ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶಿವಶಂಕರ್ ನುಡಿದಿದ್ದಾರೆ.