50 ಗ್ರಾಪಂ, ಪಪಂ ಮೇಲ್ದರ್ಜೆಗೆ‌: ಸಚಿವ ಬಿ.ಎಸ್.ಸುರೇಶ್| BS Suresh

ಬೆಳಗಾವಿ: ರಾಜ್ಯದ ವಿವಿಧ ಕಡೆಗಳಿಂದ ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಗಳನ್ನಾಗಿ, ಪಟ್ಟಣ ಪಂಚಾಯಿತಿಗಳನ್ನು ಪುರಸಭೆಗಳನ್ನಾಗಿ, ಪುರಸಭೆಗಳನ್ನು ನಗರಸಭೆಗಳನ್ನಾಗಿ ಮೇಲ್ದರ್ಜೆಗೆ ಏರಿಸುವಂತೆ ಕೋರಿ 50ಕ್ಕೂ ಹೆಚ್ಚು ಪ್ರಸ್ತಾವನೆಗಳನ್ನು ರಾಜ್ಯ ಸರ್ಕಾರ ಸ್ವೀಕರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ ಹಂತ ಹಂತವಾಗಿ ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ (BS Suresh) ಹೇಳಿದರು.

ಬೆಳಗಾವಿ ಸುವರ್ಣಸೌಧಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಶುಕ್ರವಾರ ಪ್ರಶ್ನೋತ್ತರ ಕಲಾಪದ ವೇಳೆ ಅವರು ಸದನಕ್ಕೆ ಮಾಹಿತಿ ನೀಡಿದರು.

20,000 ಸಾವಿರಕ್ಕೂ ಅಧಿಕ ಜನಸಂಖ್ಯೆ ಇದ್ದರೆ ಮಾತ್ರ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿಸಬಹುದು. ಇದರೊಂದಿಗೆ ಪಟ್ಟಣ ಪಂಚಾಯಿತಿಯಾಗಿ ಪರಿವರ್ತನೆಯಾದ ಮೇಲೆ ಅಗತ್ಯ ಅಧಿಕಾರಿ, ಸಿಬ್ಬಂದಿಗಳನ್ನು ನೇಮಿಸಿ ಸೂಕ್ತ ಅನುದಾನವನ್ನು ಸಹ ನೀಡಬೇಕು. ಸ್ವೀಕೃತವಾದ ಎಲ್ಲ ಪ್ರಸ್ತಾವನೆಗಳನ್ನು ಆದ್ಯತೆಯ ಮೇರೆಗೆ ಪರಿಗಣಿಸಲಾಗುವುದು ಎಂದು ಸಚಿವ ಬಿ.ಎಸ್.ಸುರೇಶ್ ಭರವಸೆ ನೀಡಿದರು.

ಗೋಕರ್ಣ ಪಟ್ಟಣ ಪಂಚಾಯಿತಿ ರಚನೆಗೆ ಮನವಿ

ಕುಮುಟ ಕ್ಷೇತ್ರದ ಶಾಸಕ ದಿನಕರ್ ಕೇಶವ್ ಶೆಟ್ಟಿಯವರು ಧಾರ್ಮಿಕ ಶ್ರದ್ಧಾ ಕ್ಷೇತ್ರವಾದ ಗೋಕರ್ಣ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿ ಅಥವಾ ಪುರಸಭೆಯನ್ನಾಗಿ ಮೇಲ್ದರ್ಜೆ ಏರಿಸುವಂತೆ ಕೋರಿ ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರಲ್ಲಿ ಕೋರಿದರು.

ಶಾಸಕ ದಿನಕರ್ ಕೇಶವ್ ಶೆಟ್ಟಿ ಅವರ ಮಾತಿಗೆ ಧ್ವನಿಗೂಡಿಸಿದ ಶಾಸಕರುಗಳಾದ ವಿಜಯೇಂದ್ರ, ಡಾ.ಅಶ್ವತ್ ನಾರಾಯಣ, ಸುನೀಲ್ ಕುಮಾರ್, ಭೈರತಿ ಬಸವರಾಜ್ ಅವರು ಗೋಕರ್ಣ ಪ್ರಕರಣವನ್ನು ವಿಶೇಷ ಎಂದು ಪರಿಗಣಿಸಿ, ಸರ್ಕಾರ ಕೂಡಲೇ ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಬೇಕು. ಲಕ್ಷಾಂತರ ಪ್ರವಾಸಿಗರು ಗೋಕರ್ಣಕ್ಕೆ ಆಗಮಿಸುತ್ತಾರೆ. ಆದ್ದರಿಂದ ಸರ್ಕಾರ ಸ್ವಚ್ಛತೆ, ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: ಕಾಣೆಯಾಗಿವೆ ದೊಡ್ಡಬಳ್ಳಾಪುರದ ಎರಡು 108 ಆಂಬುಲೆನ್ಸ್..! ಹುಡುಕೋರ್ ಯಾರು..?| 108 ambulance

ಉತ್ತರ ಕನ್ನಡ ಜಿಲ್ಲಾಧಿಕಾರಿಗಳು ಗೋಕರ್ಣವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿಸಲು ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ. 2011 ರ ಜನಗಣತಿಯಂತೆ ಗೋಕರ್ಣದಲ್ಲಿ 13,539 ಜನಸಂಖ್ಯೆ ಇದೆ. ವಿಸ್ತೀರ್ಣ 33.1 ಚದರ ಕಿ.ಮೀ. ಇದ್ದು, ಜನಸಾಂದ್ರತೆ ಪ್ರತೀ ಚದರ ಕಿ.ಮೀ.ಗೆ 409 ಇದೆ.

2015ರಲ್ಲಿ ಸಚಿವ ಸಂಪುಟ ಸಭೆಯಲ್ಲಿ 2011ರ ಜನಗಣತಿಯಲ್ಲಿ 15,000ಕ್ಕಿಂತ ಹೆಚ್ಚು ಜನಸಂಖ್ಯೆ ಇರುವ ಪಂಚಾಯಿತಿಗಳನ್ನು ಮಾತ್ರ ಮೇಲ್ದರ್ಜೆಗೆ ಏರಿಸಲು ಪರಿಗಣಿಸಲು ನಿರ್ಧರಿಸಲಾಗಿದೆ.

ಆದಾಗ್ಯೂ ಗೋಕರ್ಣದ ಪ್ರಕರಣವನ್ನು ವಿಶೇಷ ಎಂದು ಪರಿಗಣಿಸಿ, ಶಾಸಕರು, ಅಧಿಕಾರಿಗಳೊಂದಗೆ ಸಭೆ ನಡೆಸಿ ಸಕಾರಾತ್ಮವಾಗಿ ಕ್ರಮ ಕೈಗೊಳ್ಳುವುದಾಗಿ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಭರವಸೆ ನೀಡಿದರು.

ಇದೇ ವೇಳೆ ಶಾಸಕ ಪ್ರಭು ಚವ್ಹಾಣ್ ಔರಾದ್ ಪಟ್ಟಣ ಪಂಚಾಯಿತಿಯನ್ನು ಪುರಸಭೆಯಾಗಿ ಹಾಗೂ ಕಮಲ್‌ನಗರವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿಸಬೇಕು ಎಂದು ಸಚಿವ ರಹೀಂ ಖಾನ್ ಅವರಲ್ಲಿ ಮನವಿ ಮಾಡಿದರು.

ರಾಜಕೀಯ

ರಾಜ್ಯದಲ್ಲಿ 50% ಭ್ರಷ್ಟಾಚಾರ; ಬಸವರಾಜ ಬೊಮ್ಮಾಯಿ ಆರೋಪ

ರಾಜ್ಯದಲ್ಲಿ 50% ಭ್ರಷ್ಟಾಚಾರ; ಬಸವರಾಜ ಬೊಮ್ಮಾಯಿ ಆರೋಪ

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲ ಇಲಾಖೆಗಳಲ್ಲಿಯೂ ಐವತ್ತು ಪರ್ಸೆಂಟ್ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಸಂಸದ Basavaraj Bommai

[ccc_my_favorite_select_button post_id="105001"]
ಮೈ ಫ್ರೆಂಡ್ ಮೋದಿ ಎನ್ನುತ್ತಲೇ ಭಾರತಕ್ಕೆ ಬರೆ ಎಳೆದ ಟ್ರಂಪ್

ಮೈ ಫ್ರೆಂಡ್ ಮೋದಿ ಎನ್ನುತ್ತಲೇ ಭಾರತಕ್ಕೆ ಬರೆ ಎಳೆದ ಟ್ರಂಪ್

ಇಷ್ಟು ದಿನ ಬಾಯಿ ಮಾತಲ್ಲೇ ಸುಂಕ ಸಂಘರ್ಷದ ಮಾತುಗಳನ್ನು ಆಡುತ್ತಾ ಬಂದಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮಂಗಳವಾರ ಮಧ್ಯರಾತ್ರಿ 2.20 (ಭಾರತೀಯ ಕಾಲಮಾನ) trump

[ccc_my_favorite_select_button post_id="104924"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
‘ಪ್ರೀತಿಸಿದವಳಿಗಾಗಿ ದೊಡ್ಡಬಳ್ಳಾಪುರ ಬಾರ್ನಲ್ಲಿ ಬಡಿದಾಟ: ದೂರು ದಾಖಲು’

‘ಪ್ರೀತಿಸಿದವಳಿಗಾಗಿ ದೊಡ್ಡಬಳ್ಳಾಪುರ ಬಾರ್ನಲ್ಲಿ ಬಡಿದಾಟ: ದೂರು ದಾಖಲು’

ಗುಂಪುಗಳ ನಡುವಿನ ಕಂಡು ಬೆಚ್ಚಿ ಬಿದ್ದ ಜನರು. ದೊಡ್ಡಬಳ್ಳಾಪುರ ನಗರದಲ್ಲಿ ಇತ್ತೀಚೆಗೆ ಪುಂಡರ ಹಾವಳಿ ಮೀತಿ ಮೀರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. Doddaballapura

[ccc_my_favorite_select_button post_id="105003"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!