ಬೆಂಗಳೂರು: ಗೆಳತಿಗೆ ಅಶ್ಲೀಲ ಸಂದೇಶ ಕಳಿಸಿದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ (Darshan) ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ರೆಗ್ಯುಲರ್ ಜಾಮೀನು ಕೋರಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು.
ದರ್ಶನ್ ಪರ ವಕೀಲರಾದ ಸಿ.ವಿ.ನಾಗೇಶ್ ಅವರು ವಾದ ಮಂಡಿಸಿದ್ದು, ಎಸ್‌ಪಿಪಿ ಪ್ರಸನ್ನ ಕುಮಾರ್ ಕೂಡ ಪ್ರತಿವಾದ ಮಂಡಿಸಿದ್ದಾರೆ. ಸುದೀರ್ಘ ವಾದ, ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಅವರು ತೀರ್ಪು ಕಾಯ್ದಿರಿಸಿದ್ದರು. ಜತೆಗೆ ಆದೇಶ ಬರುವವರೆಗೂ ನಟ ದರ್ಶನ್ ವೈದ್ಯಕೀಯ ಜಾಮೀನು ಅವಧಿ ವಿಸ್ತರಿಸಿದ್ದರು.
ಇಂದು ಮಧ್ಯಾಹ್ನ 2.30ಕ್ಕೆ ಹೈಕೋರ್ಟ್ ಜಾಮೀನು ಅರ್ಜಿಯ ತೀರ್ಪು ನೀಡಿದ್ದು, ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲಾ 7 ಮಂದಿಗೆ ಷರತ್ತು ಬದ್ಧ ಜಾಮೀನು ದೊರೆತಿದೆ ಎಂದು ವರಿಯಾಗಿದೆ.