![Channel Gowda](https://www.harithalekhani.com/wp-content/uploads/2025/02/IMG-20250204-WA0002.jpg)
ಬೆಂಗಳೂರು: ಗೆಳತಿಗೆ ಅಶ್ಲೀಲ ಸಂದೇಶ ಕಳಿಸಿದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ (Darshan) ತೂಗುದೀಪ ಅವರ ಜಾಮೀನು ಅರ್ಜಿಯ ತೀರ್ಪುನ್ನು ಹೈಕೋರ್ಟ್ ಶುಕ್ರವಾರ ಮಧ್ಯಾಹ್ನ ಪ್ರಕಟವಾಗಲಿದೆ ಎಂದು ವರದಿಯಾಗಿದೆ.
![hulukudi maharathotsava](https://www.harithalekhani.com/wp-content/uploads/2025/02/IMG-20250205-WA0002.jpg)
ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ರೆಗ್ಯುಲರ್ ಜಾಮೀನು ಕೋರಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದಾರೆ.
ದರ್ಶನ್ ಪರ ವಕೀಲರಾದ ಸಿ.ವಿ.ನಾಗೇಶ್ ಅವರು ವಾದ ಮಂಡಿಸಿದ್ದು, ಎಸ್‌ಪಿಪಿ ಪ್ರಸನ್ನ ಕುಮಾರ್ ಕೂಡ ಪ್ರತಿವಾದ ಮಂಡಿಸಿದ್ದಾರೆ. ಸುದೀರ್ಘ ವಾದ, ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಅವರು ತೀರ್ಪು ಕಾಯ್ದಿರಿಸಿದ್ದರು. ಜತೆಗೆ ಆದೇಶ ಬರುವವರೆಗೂ ನಟ ದರ್ಶನ್ ವೈದ್ಯಕೀಯ ಜಾಮೀನು ಅವಧಿ ವಿಸ್ತರಿಸಿದ್ದರು.
![Hulukudi mahajathre](https://www.harithalekhani.com/wp-content/uploads/2025/02/IMG-20250205-WA0001.jpg)
ಇದನ್ನೂ ಓದಿ: ನೀವು ಈ ಪಟ್ಟಿಯಲ್ಲಿದ್ದೀರಾ ನೋಡಿ; ಇದ್ದರೆ BPL ಕಾರ್ಡ್ ಬಹುತೇಕ ಮರೆತು ಬಿಡುವುದು ಒಳಿತು..!
ಇಂದು ಮಧ್ಯಾಹ್ನ 2.30ಕ್ಕೆ ಹೈಕೋರ್ಟ್ ಜಾಮೀನು ಅರ್ಜಿಯ ತೀರ್ಪು ಪ್ರಕಟಿಸಲಿದ್ದು, ದರ್ಶನ್‌ಗೆ ಜಾಮೀನು ಸಿಗುತ್ತದೆ ಎಂಬ ವಿಶ್ವಾಸದಲ್ಲಿ ಅವರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.